ಫರಿದಾಬಾದ್ ಕೋರ್ಟ್ ನಲ್ಲಿ ಗುಂಡಿನ ದಾಳಿ

Shootout
ನವದೆಹಲಿ, ಆ.22 : ಹರ್ಯಾಣದ ಫರಿದಾಬಾದ್ ಜಿಲ್ಲಾ ನ್ಯಾಯಾಲಯಕ್ಕೆ ನುಗ್ಗಿದ ಐದು ಮಂದಿ ದುಷ್ಕರ್ಮಿಗಳು ಕೋರ್ಟ್ ಆವರಣದಲ್ಲಿ ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ಘಟನೆಯಿಂದಾಗಿ ಒಬ್ಬ ವ್ಯಕ್ತಿಯ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಗುರುವಾರ ಮಧ್ಯಾಹ್ನ 2 ಗಂಟೆ ವೇಳೆಗೆ ಬೈಕ್ ನಲ್ಲಿ ಬಂದು ಐದು ಮಂದಿ ಮುಸುಕು ಧಾರಿಗಳೂ ನ್ಯಾಯಾಲಯದ ಆವರಣದಲ್ಲಿ ಆರು ಸುತ್ತು ಗುಂಡು ಹಾರಿಸಿ ಪರಾರಿಯಾಗಿದ್ದಾರೆ. ಘಟನೆಯಿಂದ ನ್ಯಾಯಾಲಯದ ಆವರಣದಲ್ಲಿ ನಡೆದು ಹೋಗುತ್ತಿದ್ದ ವ್ಯಕ್ತಿಯೊಬ್ಬರು ಗಾಯಗೊಂಡರು. ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ನ್ಯಾಯಾಲಯದಲ್ಲಿದ್ದ ಪೊಲೀಸರು ಸ್ಥಳಕ್ಕೆ ಆಗಮಿದ ತಕ್ಷಣ ಬೈಕ್ ನಲ್ಲಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಐವರು ಮುಸುಕು ಹಾಕಿಕೊಂಡಿದ್ದರಿಂದ ಅವರ ಗುರುತು ಪತ್ತೆಯಾಗಿಲ್ಲ. ಕೋರ್ಟ್ ಆವರಣದ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ಪರಿಶೀಲನೆ ನಡೆಸುತ್ತಿದ್ದು, ಬೈಕ್ ನೋಂದಣಿ ಸಂಖ್ಯೆಗಾಗಿ ಹುಡುಕಾಟ ನಡೆಸಿದ್ದಾರೆ.

ಆರೋಪಿಗಳನ್ನು ಕೊಲ್ಲುವ ಸಂಚು : ಯಾವುದೋ ಪ್ರಕರಣದ ಆರೋಪಿಯನ್ನು ಕೊಲ್ಲಲು ದುಷ್ಕರ್ಮಿಗಳು ಆಗಮಿಸಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಗುಂಡಿನ ದಾಳಿಯ ಶಬ್ದ ಕೇಳಿ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದರಿಂದ, ಹೆದರಿ ಪರಾರಿಯಾಗಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+