ರಾಹುಲ್, ಮೋದಿ ಪ್ರಧಾನಿ ಸ್ಥಾನಕ್ಕೆ ಅನರ್ಹರು!

ಅಮೆರಿಕಾ, ಆ.23 : ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಮತ್ತು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಪ್ರಧಾನಿ ಸ್ಥಾನಕ್ಕೆ ಅರ್ಹರಲ್ಲ ಎಂದು ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಹೇಳಿದ್ದಾರೆ. ಪ್ರಧಾನಿ ಸ್ಥಾನಕ್ಕೆ ನೇರ ಚುನಾವಣೆ ನಡೆಯಬೇಕು ಎಂದು ಅವರು ಪ್ರತಿಪಾದಿಸಿದ್ದಾರೆ.

ಎರಡು ವಾರಗಳ ಅಮೆರಿಕ ಪ್ರವಾಸ ಕೈಗೊಂಡಿರುವ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ, ಮೆರಿಲ್ಯಾಂಡ್‌ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ಭಾರತೀಯ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಶುಕ್ರವಾರ ಮಾತನಾಡಿದರು. ಆಗ ಪ್ರಧಾನಿ ಅಭ್ಯರ್ಥಿಯ ಆಯ್ಕೆ ಬಗ್ಗೆ ಅಭಿಪ್ರಾಯ ಹಂಚಿಕೊಂಡಿದ್ದಾರೆ.

anna hazare

ಪ್ರಧಾನಿ ಸ್ಥಾನಕ್ಕೆ ನೇರ ಚುನಾವಣೆ ನಡೆಸುವಂತಹ ಕಾನೂನು ಜಾರಿಗೆ ಬರಬೇಕು. ಪಕ್ಷಗಳು ಸೂಚಿಸುವ ವ್ಯಕ್ತಿ ಜನರ ಪ್ರತಿನಿಧಿ ಆಗಬಾರದು ಎಂದು ಅಣ್ಣಾ ಹಜಾರೆ ವಿಶ್ಲೇಷಿಸಿದ್ದಾರೆ. ಭಾರತದ ಪ್ರಧಾನಿ ಸ್ಥಾನಕ್ಕೆ ಏರಲು ಮೋದಿ ಮತ್ತು ರಾಹುಲ್ ಗಾಂಧಿ ಅರ್ಹರಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

ಪ್ರಬಲವಾಗಿರುವ ಎರಡು ಪಕ್ಷಗಳು ತಮ್ಮ ಪ್ರಧಾನಿ ಅಭ್ಯರ್ಥಿಯನ್ನು ಘೋಷಿಸುತ್ತವೆ. ರಾಹುಲ್ ಗಾಂಧಿ ಅಥವ ನರೇಂದ್ರ ಮೋದಿ ಅವರನ್ನು ಪ್ರಧಾನಿ ಸ್ಥಾನದಲ್ಲಿ ಕಾಣಲು ತಾವು ಇಚ್ಚಿಸುವುದಿಲ್ಲ ಎಂದು ಅಣ್ಣ ಹಜಾರೆ ಸ್ಪಷ್ಟಪಡಿಸಿದ್ದಾರೆ.

ಜನರಿಗೆ ಸಂವಿಧಾನದಲ್ಲಿ ನಂಬಿಕೆಯಿದೆ. ರಾಜಕೀಯ ಪಕ್ಷಗಳು ಸಂವಿಧಾನಕ್ಕೆ ವಿರುದ್ಧವಾಗಿ ಕೆಲಸ ಮಾಡುತ್ತವೆ. ಅಂತಹ ಪಕ್ಷದ ಅಭ್ಯರ್ಥಿಗಳು ಪ್ರಧಾನಿಯಾದರೆ, ದೇಶದ ಅಭಿವೃದ್ಧಿ ಆಗುವುದಿಲ್ಲ ಎಂದು ಹಜಾರೆ ಹೇಳಿದ್ದಾರೆ. ಪ್ರಧಾನಿ ಹುದ್ದೆಗೆ ನೇರ ಚುನಾವಣೆ ನಡೆಸುವಂತೆ ಒತ್ತಾಯಿಸಲು ದೇಶದ ಜನರಿಗೆ ಅರಿವು ಮೂಡಿಸಬೇಕು ಎಂದು ಹೇಳಿದ್ದಾರೆ.

ಒಂದು ದೇಶಕ್ಕೆ ಪ್ರಧಾನಿ ಅಥವಾ ರಾಷ್ಟ್ರಪತಿ ಆಗಬೇಕಾದ ವ್ಯಕ್ತಿ ದೇಶದ ಎಲ್ಲಾ ವರ್ಗದವರನ್ನು ಸಮಾನವಾಗಿ ಕಾಣಬೇಕು. ಇಡಿ ದೇಶದ ಜನತೆಯೇ ಮತ ಚಲಾಯಿಸಿ ಅವರನ್ನು ಆಯ್ಕೆ ಮಾಡಬೇಕು. ಪಕ್ಷ ಆಯ್ಕೆ ಮಾಡುವ ಅಭ್ಯರ್ಥಿ ನಮಗೆ ಬೇಕಿಲ್ಲ.

ದೇಶದ ಜನರೇ ಪ್ರಧಾನಿ ಅಭ್ಯರ್ಥಿಯನ್ನು ಆಯ್ಕೆ ಮಾಡಿದರೆ ಉತ್ತಮವಾದ ಪ್ರಧಾನಿ ದೊರೆಯುತ್ತಾರೆ. ನಮ್ಮ ದೇಶಕ್ಕೂ ಒಳ್ಳೆಯ ಪ್ರಧಾನಿ ದೊರೆಯಲಿದ್ದಾರೆ ಎಂದು ಅಣ್ಣಾ ಹಜಾರೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+