ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಎಚ್ಡಿಕೆ ರಾಜೀನಾಮೆ

ಉಪ ಚುನಾವಣೆ ಫಲಿತಾಂಶ ಘೋಷಣೆಯಾದ ಬಳಿಕ ಶನಿವಾರ ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಮಾಜಿ ಸಿಎಂ ಕುಮಾರಸ್ವಾಮಿ, ಎರಡೂ ಕ್ಷೇತ್ರಗಳ ಸೋಲಿನ ನೈತಿಕ ಹೊಣೆ ಹೊತ್ತು ನಾನು ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ಮತ್ತು ಪ್ರತಿಪಕ್ಷ ನಾಯಕನ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಘೋಷಿಸಿದರು.
ರಾಜ್ಯಾಧ್ಯಕ್ಷ ಸ್ಥಾನ ತೊರೆಯುವ ಬಗ್ಗೆ ಜೆಡಿಎಸ್ ರಾಷ್ಟ್ರಾಧ್ಯಕ್ಷ ಎಚ್.ಡಿ.ದೇವೇಗೌಡರ ಜೊತೆಗೆ ಸಮಾಲೋಚನೆ ನಡೆಸಿದ್ದಾನೆ. ರಾಜ್ಯಾಧ್ಯಕ್ಷ ಹುದ್ದೆ ಮತ್ತು ಪ್ರತಿ ಪಕ್ಷ ನಾಯಕನ ಹುದ್ದೆಗೆ ಸೂಕ್ತ ವ್ಯಕ್ತಿಯನ್ನು ಆಯ್ಕೆ ಮಾಡುವಂತೆ ಮನವಿ ಮಾಡಿದ್ದೇನೆ ಎಂದು ಹೇಳಿದರು.
ಸದ್ಯದಲ್ಲೇ ಶಾಸಕಾಂಗ ಪಕ್ಷದ ಸಭೆ ಕರೆದು, ಪ್ರತಿಪಕ್ಷ ನಾಯಕ ಸ್ಥಾನಕ್ಕೆ ಶಾಸಕರ ಅಭಿಪ್ರಾಯದಂತೆ ಸೂಕ್ತ ವ್ಯಕ್ತಿಯನ್ನು ಆಯ್ಕೆ ಮಾಡುತ್ತೇನೆ ಎಂದು ಕುಮಾರಸ್ವಾಮಿ ಹೇಳಿದರು. ಪಕ್ಷದ ಸೋಲಿನ ಹೊಣೆಯನ್ನು ಸಂಪೂರ್ಣವಾಗಿ ನಾನೇ ಹೊರುತ್ತೇನೆ. ಆದ್ದರಿಂದ ರಾಜೀನಾಮೆ ನೀಡುತ್ತಿದ್ದೇನೆ ಎಂದು ತಿಳಿಸಿದರು.
ಸಿಂಧ್ಯಾ ಪ್ರತಿಕ್ರಿಯೆ : ಲೋಕಸಭೆ ಉಪ ಚುನಾವಣೆ ಫಲಿತಾಂಶ ಅನಿರೀಕ್ಷಿತವಾಗಿದ್ದು, ಚುನಾವಣೆಯಲ್ಲಿ ನಾವು ಹಲವಾರು ಸೋಲುಗಳನ್ನು ಕಂಡಿದ್ದೇವೆ. ಚುನಾವಣೆಯಲ್ಲಿ ಶ್ರಮವಹಿಸಿ ಪಕ್ಷದ ಗೆಲುವಿಗಾಗಿ ಕುಮಾರಸ್ವಾಮಿ ಕೆಲಸ ಮಾಡಿದ್ದರು. ಫಲಿತಾಂಶದಿಂದ ನೊಂದು ರಾಜೀನಾಮೆ ನೀಡುವುದಾಗಿ ಅವರು ಹೇಳಿದ್ದಾರೆ. ಚುನಾವಣೆಯಲ್ಲಿ ಸೋತ ತಕ್ಷಣ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವ ಅಗತ್ಯವಿಲ್ಲ ಅವರ ಜೊತೆ ನಾನು ಚರ್ಚಸುತ್ತೇನೆ ಎಂದು ಜೆಡಿಎಸ್ ಹಿರಿಯ ನಾಯಕ ಪಿ.ಜಿ.ಆರ್.ಸಿಂಧ್ಯಾ ಪ್ರತಿಕ್ರಿಯೆ ನೀಡಿದ್ದಾರೆ.











Click it and Unblock the Notifications