ನವವಿವಾಹಿತ ಇಂಜಿನಿಯರಿಂಗ್ ವಿದ್ಯಾರ್ಥಿನಿ ಸಾವು

5 ತಿಂಗಳ ಹಿಂದಷ್ಟೇ ವಿವಾಹವಾಗಿದ್ದ ಹರ್ಷಿಣಿ ಗೌಡ ಅವರು ನಿಟ್ಟೆ ಇಂಜಿನಿಯರಿಂಗ್ ಕಾಲೇಜಿನಲ್ಲಿ ದ್ವಿತೀಯ ವರ್ಷದ ಬಿಇ ವ್ಯಾಸಂಗ ಮಾಡುತ್ತಿದ್ದರು. ಇಂದು ಬೆಳಗ್ಗೆ 9 ಗಂಟೆಯಲ್ಲಿ ತಮ್ಮ ಆ್ಯಕ್ಟೀವ್ ಹೋಂಡಾ ದ್ವಿಚಕ್ರ ವಾಹನದಲ್ಲಿ ಕಾಲೇಜಿಗೆ ಹೋಗುತ್ತಿದ್ದಾಗ ರಸ್ತೆ ಬದಿ ನಿಂತಿದ್ದ ಜಲ್ಲಿಕಲ್ಲು ಲಾರಿಗೆ ಡಿಕ್ಕಿ ಹೊಡೆದು ಆಯತಪ್ಪಿ ಕೆಳಗೆ ಬಿದ್ದಿದ್ದಾರೆ. ತಲೆಗೆ ತೀವ್ರ ಪೆಟ್ಟು ಬಿದ್ದ ಪರಿಣಾಮ ಆಕೆ ಸ್ಥಳದಲ್ಲೇ ಸಾವಿಗೀಡಾದರು.
ಸಾಲ ಬಾಧೆ: ಮತ್ತೊಬ್ಬ ಚಿನ್ನಾಭರಣ ವ್ಯಾಪಾರಿ ಆತ್ಮಹತ್ಯೆ
ಚಾಮರಾಜಪೇಟೆಯ ಚಿನ್ನಾಭರಣ ವ್ಯಾಪಾರಿ, ಆಜಾದ್ ನಗರ ನಿವಾಸಿ ಶ್ಯಾಮ್ ಸುಂದರ್ ಸತ್ರಾ (38) ಹಣಕಾಸು ಮುಗ್ಗಟ್ಟಿನಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಗಾಂಧಿಬಜಾರಿನ ಚಿನ್ನಾಭರಣ ವ್ಯಾಪಾರಿಯೊಬ್ಬರು ಪತ್ನಿ ಮತ್ತು ಪುತ್ರಿಯ ಸಮೇತ ಕಳೆದ ವಾರ ದೇವನಹಳ್ಳಿ ಬಳಿ ಕಾರಿನಲ್ಲಿ ವಿಷ ಸೇವಿಸಿ ಸಾಮೂಹಿಕವಾಗಿ ಆತ್ಮಹತ್ಯೆ ಮಾಡಿಕೊಂಡಿದ್ದರು.
ಶನಿವಾರ ರಾತ್ರಿ ಮನೆಯವರೆಲ್ಲಾ ನಿದ್ರೆಗೆ ಜಾರಿದ ಬಳಿಕ ಶ್ಯಾಮ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಭಾನುವಾರ ಬೆಳಗ್ಗೆ ಶ್ಯಾಮ್ ಪತ್ನಿ ಎದ್ದು ನೋಡಿದಾಗಷ್ಟೇ ಪತಿಯ ಆತ್ಮಹತ್ಯೆ ಘಟನೆ ಬೆಳಕಿಗೆ ಬಂದಿದೆ ಎಂದು ಚಾಮರಾಜಪೇಟೆ ಪೊಲೀಸರು ತಿಳಿಸಿದ್ದಾರೆ.
20 ವರ್ಷಗಳ ಹಿಂದೆ ಬೆಂಗಳೂರಿಗೆ ವಲಸೆ ಬಂದಿದ್ದ ಪಶ್ಚಿಮ ಬಂಗಾಳ ಮೂಲದ ಶ್ಯಾಮ್ ಹಾಗೂ ಅರುಂಧತಿ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಶ್ಯಾಮ್, ಕಬ್ಬನ್ ಪೇಟೆಯಲ್ಲಿ ಚಿನ್ನಾಭರಣ ಮಾರಾಟ ಮಳಿಗೆ ಹೊಂದಿದ್ದರು. ಈಚೆಗೆ ವ್ಯವಹಾರದಲ್ಲಿ ನಷ್ಟವಾಗಿ, ತೀವ್ರ ಹಣಕಾಸು ಮುಗ್ಗಟ್ಟಿಗೆ ಸಿಲುಕಿದ್ದರು. ಈ ಸಮಸ್ಯೆಯಿಂದ ಹೊರಬರಲಾಗದೆ ಬೇಸರಗೊಂಡು ಶ್ಯಾಮ್ ಆತ್ಮಹತ್ಯೆಗೆ ಶರಣಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.












Click it and Unblock the Notifications