ಸಂಸತ್ ಸದಸ್ಯರಲ್ಲಿ ಸಿದ್ದು ಕೇಳಿಕೊಂಡದ್ದಾದರೂ ಏನು?
ನವದೆಹಲಿ, ಆ.27 : ನವದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿಯಲ್ಲಿ ಮಂಗಳವಾರ ರಾಜ್ಯದ ಸಂಸದರ ಸಭೆ ನಡೆಸಿದರು. ಕರ್ನಾಟಕವನ್ನು ಮಾದರಿ ರಾಜ್ಯವಾಗಿಸಲು ಸಂಸದರು ಸಹಾಕಾರ ನೀಡಬೇಕೆಂದು ಸಿಎಂ ಮನವಿ ಮಾಡಿದರು.
ಮಂಗಳವಾರ ಬೆಳಗ್ಗಿನ ಉಪಹಾರದೊಂದಿಗೆ ನಡೆದ ಸಭೆಯಲ್ಲಿ ಕೇಂದ್ರ ಸಚಿವರಾದ ಮಲ್ಲಿಕಾರ್ಜುನ ಖರ್ಗೆ, ಆಸ್ಕರ್ ಫರ್ನಾಂಡೀಸ್, ವೀರಪ್ಪ ಮೊಯ್ಲಿ, ರೆಹಮಾನ್ ಖಾನ್, ಕೆ.ಎಚ್. ಮುನಿಯಪ್ಪ ಭಾಗವಹಿಸಿದ್ದರು.

ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರವಿದೆ. ರಾಜ್ಯದ ಐವರು ಕೇಂದ್ರ ಸಚಿವರಾಗಿದ್ದಾರೆ. ಅವರ ಸಹಕಾರ ಪಡೆದು, ಕರ್ನಾಟವನ್ನು ಮಾದರಿ ರಾಜ್ಯವಾಗಿ ಮಾಡಲು ಸಂಸದರು ಎಲ್ಲಾ ರೀತಿಯ ಸಹಕಾರ ನೀಡಬೇಕು ಎಂದು ಸಿಎಂ ಸಿದ್ದರಾಮುಯ್ಯ ಮನಿವ ಮಾಡಿದರು.
ಸಭೆಯಲ್ಲಿ ಭಾಗವಹಿಸಿದ್ದ ಕೇಂದ್ರ ರೈಲ್ವೆ ಸಚಿವ ಮಲ್ಲಿಕಾರ್ಜುನ ಖರ್ಗೆ, ರಾಜ್ಯ ಸರ್ಕಾರ ರೈಲು ಯೋಜನೆಗಾಗಿ ಬಾಕಿ ಇರುವ ಭೂಮಿಯನ್ನು ಮಂಜೂರು ಮಾಡಿದರೆ ರೈಲು ಯೋಜನೆಗಳನ್ನು ಪೂರ್ಣಗೊಳಿಸಲು, ಪ್ರಯತ್ನ ನಡೆಸುವುದಾಗಿ ಭರವಸೆ ನೀಡಿದರು.
ರಾಜ್ಯದಲ್ಲಿ 1200 ಕೋಟಿ ರೂ.ಗಳ ರೈಲು ಯೋಜನೆಗಳು ನಡೆಯುತ್ತಿವೆ. ರಾಜ್ಯ ತನ್ನ ಪಾಲಿನ 500ರಿಂದ 600 ಕೋಟಿ ಅನುದಾನವನ್ನು ಬಿಡುಗಡೆ ಮಾಡಿದರೆ, ಯೋಜನೆಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸುವುದಾಗಿ ಹೇಳಿದರು.
ಸಂಸದರ ಪ್ರದೇಶಾಭಿವೃದ್ಧಿ ಅಭಿವೃದ್ಧಿ ನಿಧಿಯನ್ನು ಸಮರ್ಪಕವಾಗಿ ಉಪಯೋಗಿಸಲು ಪ್ರತಿ ಜಿಲ್ಲೆಯಲ್ಲಿ ಪ್ರತ್ಯೇಕ ಕಾರ್ಯನಿರ್ವಹಣಾಧಿಕಾರಿಯನ್ನು ನೇಮಿಸಬೇಕು ಎಂದು ಎಲ್ಲಾ ಸಂಸದರು, ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದರು.
ಬಿಜೆಪಿ, ಕಾಂಗ್ರೆಸ್ ಎಲ್ಲಾ ಸಂಸದರು ಸಭೆಯಯಲ್ಲಿ ಪಾಲ್ಗೊಂಡಿದ್ದರು. ಜೆಡಿಎಸ್ ಪಕ್ಷದ ಏಕೈಕ ಸಂಸದ ಎಚ್.ಡಿ.ದೇವೇಗೌಡ ಸಭೆಯಿಂದ ದೂರ ಉಳಿದಿದ್ದರು. ನೂತನವಾಗಿ ಆಯ್ಕೆಯಾದ ರಮ್ಯಾ ಮತ್ತು ಡಿ.ಕೆ.ಸುರೇಶ್ ಸಹ ಸಭೆಯಲ್ಲಿ ಪಾಲ್ಗೊಂಡಿದ್ದರು.












Click it and Unblock the Notifications