ಪ್ರೀತಿಸಲು ನಿರಾಕರಿಸಿದ ಯುವತಿ ಮೇಲೆ ಆಸಿಡ್ ದಾಳಿ

ಸೋಮವಾರ ಸಂಜೆ ಅಂತಿಮ ಬಿಕಾಂ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ವಾಣಿ, ಅನಂತಪುರ ಹೊರವಲಯದಲ್ಲಿರುವ ಮನೆಗೆ ಹೋಗುತ್ತಿದ್ದಾಗ, ರಾಘವೇಂದ್ರ ಮತ್ತು ವೆಂಕಟೇಶ್ ಆಕೆಯ ಮೇಲೆ ಆಸಿಡ್ ದಾಳಿ ನಡೆಸಿದ್ದಾರೆ.
ಆಸಿಡ್ ದಾಳಿಯಿಂದಾಗಿ ವಾಣಿ ಬಲಗೈ ಮತ್ತು ಭುಜದ ಭಾಗ ಸುಟ್ಟು ಹೋಗಿದ್ದು, ಆಕೆಯನ್ನು ಅನಂತಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ರಾಘವೇಂದ್ರನನ್ನು ಪ್ರೀತಿಸಲು ನಿರಾಕಿಸಿದ್ದೇ ಘಟನೆಗೆ ಕಾರಣ ಎಂದು ತಿಳಿದುಬಂದಿದೆ.
ಅನಂತಪುರ ಸಮೀಪದ ಮುಡಿಗುಪ್ಪ ಗ್ರಾಮದಲ್ಲಿ ರಾಘವೇಂದ್ರ ಹೂವಿನ ವ್ಯಾಪಾರಿಯಾಗಿದ್ದಾನೆ. ಇದೇ ಗ್ರಾಮದ ವಾಣಿಯನ್ನು ಆತ ಪ್ರೀತಿಸುತ್ತಿದ್ದ. ಪ್ರತಿದಿನ ಆಕೆಯ ಹಿಂದೆ ಸುತ್ತುತ್ತಾ, ಪ್ರೀತಿಸುವಂತೆ ಕಿರುಕುಳ ನೀಡುತ್ತಿದ್ದ. ಈಗಾಗಲೇ ವಿವಾಹವಾಗಿರುವ ರಾಘವೇಂದ್ರನನ್ನು ಪ್ರೀತಿಸಲು ವಾಣಿ ನಿರಾಕರಿಸಿದ್ದಳು.
ಇದರಿಂದ ಕೋಪಗೊಂಡ ರಾಘವೇಂದ್ರ ತನ್ನ ಸ್ನೇಹಿತ ವೆಂಕಟೇಶ್ ಜೊತೆ ಸೇರಿ, ಸೋಮವಾರ ಸಂಜೆ ಕಾಲೇಜಿನಿಂದ ಮನೆಗೆ ವಾಪಸ್ ಆಗುತ್ತಿದ್ದ ವಾಣಿ ಮೇಲೆ ಆಸಿಡ್ ದಾಳಿ ನಡೆಸಿ, ಪರಾರಿಯಾಗಿದ್ದಾನೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ಆರಂಭಿಸಿದ್ದಾರೆ.
ಪೋಲಿಸರ ನಿರ್ಲಕ್ಷ್ಯ : ರಾಘವೇಂದ್ರ ತನಗೆ ಪ್ರೀತಿಸುವಂತೆ ಪೀಡಿಸುತ್ತಿದ್ದಾನೆ ಎಂದು ವಾಣಿ ಸ್ಥಳೀಯ ಪೊಲೀಸ್ ಠಾಣೆಗೆ ದೂರು ನೀಡಿದ್ದಳು. ಆದರೆ, ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ವಾಣಿ ಪೋಷಕರು ಆರೋಪಿಸಿದ್ದಾರೆ. (ಆಸಿಡ್ ದಾಳಿ ಜಾಮೀನು ರಹಿತ ಅಪರಾಧ : ಸುಪ್ರೀಂ)
-
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ












Click it and Unblock the Notifications