ಕಳಕಿಂತರಿಗೆ ಚುನಾವಣಾ ಟಿಕೆಟ್ ಕೇಂದ್ರಕ್ಕೆ ಮುಖಭಂಗ

Supreme Court
ನವದೆಹಲಿ, ಸೆ.4 : ಕಳಂಕಿತ ಸದಸ್ಯರಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡದಿರುವ ನ್ಯಾಯಾಲಯದ ಆದೇಶವನ್ನು ಪುನರ್ ಪರಿಶೀಲಿಸಬೇಕೆಂಬ ಕೇಂದ್ರ ಸರ್ಕಾರದ ಮನವಿಯನ್ನು ಸುಪ್ರೀಂ ಕೋರ್ಟ್ ತಳ್ಳಿಹಾಕಿದೆ. ಇದರಿಂದ ಸರ್ಕಾರಕ್ಕೆ ಭಾರೀ ಮುಖಭಂಗ ಉಂಟಾಗಿದೆ.

ಬುಧವಾರ ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆ ನಡೆಸಿದ ನ್ಯಾಯಾಲಯ, ಕಳಂಕಿತ ರಾಜಕಾರಣಿಗಳಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಬಾರದೆಂಬ ತನ್ನ ಹಿಂದಿನ ಆದೇಶವನ್ನು ಎತ್ತಿ ಹಿಡಿಯಿತು.

ಕೇಂದ್ರ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಇಥ್ಯರ್ಥಗೊಳಿಸಿರುವ ಸುಪ್ರೀಂ ಕೋರ್ಟ್, ಈ ಹಿಂದೆ ನೀಡಿದ್ದ ಆದೇಶದಲ್ಲಿ ಯಾವುದೇ ಬದಲಾವಣೆ ಮಾಡಲು ಸಾಧ್ಯವಿಲ್ಲ ಎಂದು ತಿಳಿಸಿ ಅರ್ಜಿಯನ್ನು ವಜಾಗೊಳಿಸಿದೆ. (2 ವರ್ಷ ಜೈಲಿನಲ್ಲಿದ್ದರೆ ಶಾಸಕ, ಸಂಸದ ಸ್ಥಾನ ಅನರ್ಹ)

ಪ್ರಜಾಪ್ರತಿನಿಧಿ ಕಾಯ್ದೆಗೆ ತಿದ್ದುಪಡಿ ತರಲು ಕೇಂದ್ರ ಸರ್ಕಾರ ಮುಂದಾಗಿತ್ತು. ಆಗಸ್ಟ್ 22ರಂದು ಕೇಂದ್ರ ಸಚಿವ ಸಂಪುಟ ಸಭೆ ಕಳಂಕಿತ ಜನಪ್ರತಿನಿಧಿಗಳು ತಮ್ಮ ಸದಸ್ಯತ್ವವನ್ನು ಉಳಿಸಿಕೊಳ್ಳುವ ಪ್ರಸ್ತಾವನೆಗೆ ಒಪ್ಪಿಗೆ ನೀಡಿ ನಿರ್ಣಯ ಕೈಗೊಂಡಿತ್ತು.

ಸಂಪುಟ ಸಭೆಯ ನಿರ್ಣಯದ ಪ್ರಕಾರ, ಜನಪ್ರತಿನಿಧಿ ಅಪರಾಧಿಯೆಂದು ತೀರ್ಪು ಪ್ರಕಟಗೊಂಡರೂ ಮೇಲ್ಮನವಿ ಸಲ್ಲಿಸಿ ಮೇಲ್ದರ್ಜೆ ನ್ಯಾಯಾಲಯದಲ್ಲಿ ತೀರ್ಪು ಪ್ರಕಟವಾಗುವವರೆಗೂ ಸದಸ್ಯತ್ವ ಊರ್ಜಿತಗೊಳ್ಳುವ ಸಾಧ್ಯತೆಗಳಿತ್ತು.

ಸಂಪುಟ ಸಭೆಯ ಬಳಿಕ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದ ಕೇಂದ್ರ ಸರ್ಕಾರ ಈ ಹಿಂದೆ ನೀಡಿದ್ದ ತೀರ್ಪನ್ನು ಪುನರ್ ಪರಿಶೀಲಿಸುವಂತೆ ಮನವಿ ಮಾಡಿತ್ತು. ಆದರೆ ಸುಪ್ರೀಂ ಕೋರ್ಟ್ ಅರ್ಜಿ ತಿರಸ್ಕರಿಸಿರುವುದರಿಂದ ಕೇಂದ್ರ ಸರ್ಕಾರಕ್ಕೆ ತೀವ್ರ ಮುಖಭಂಗ ಉಂಟಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+