ಮೈಸೂರಲ್ಲಿ ಹೊರಗೆಲ್ಲೂ ‘ದಮ್’ ಹೊಡೆಯಂಗಿಲ್ಲ!

smoking
ಮೈಸೂರು, ಸೆ.6 : ಮೈಸೂರು ನಗರ ಪೊಲೀಸರು ಜನಸ್ನೇಹಿ ಕಾರ್ಯಕ್ರಮವೊಂದನ್ನು ಜಾರಿಗೆ ತರಲು ಮುಂದಾಗಿದ್ದಾರೆ. ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮತ್ತು ತಂಬಾಕು ಉತ್ಪನ್ನ ಸೇವನೆ ನಿಷೇಧ ಕಾಯ್ದೆದೆಯನ್ನು ಪರಿಣಾಮಕಾರಿಯಾಗಿ ಜಾರಿಗೆ ಮುಂದಾಗಿದ್ದಾರೆ.

ಈಗಾಗಲೇ ನಗರದಲ್ಲಿ ಹೆಲ್ಮೆಟ್ ಕಡ್ಡಾಯ ನಿಯವನ್ನು ಜಾರಿಗೆ ತಂದೆ ಯಶಸ್ವಿಯಾಗಿರುವ ಪೊಲೀಸರು, ನಿಯಮ ಉಲ್ಲಂಘಿಸಿ ಸಾರ್ವಜನಿಕ ಸ್ಥಳದಲ್ಲಿ ಧೂಮಪಾನ ಮಾಡುವ ವ್ಯಕ್ತಿಗಳಿಗೆ 200ರೂ. ದಂಡ ವಸೂಲಿ ಮಾಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲು ಸಿದ್ಧವಾಗಿದ್ದಾರೆ.

ಸಿಗರೇಟು ಸೇವನೆ ಆರೋಗ್ಯಕ್ಕೆ ಹಾನಿಕರವಾಗಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನಗಳ ಮಾರಾಟ, ಸೇವನೆಯನ್ನು ನಿಯಂತ್ರಿಸಲು ಸಿಗರೇಟು ಮತ್ತು ಇತರೇ ತಂಬಾಕು ಉತ್ಪನ್ನಗಳ ಕಾಯ್ದೆ ಜಾರಿಗೆ ಬಂದಿದೆ. ಆದರೆ, ಬಹುತೇಕ ಎಲ್ಲಾ ನಗರಗಳಲ್ಲೂ ಇದು ಕಾಗದದಲ್ಲಿ ಮಾತ್ರ ಜಾರಿಗೆ ಬಂದಿದೆ.

ವಿಶ್ವವಿಖ್ಯಾತ ದಸರಾ ಉತ್ಸವಕ್ಕೆ ಮೈಸೂರಿನಲ್ಲಿ ಸಿದ್ಧತೆ ಪ್ರಾರಂಭವಾಗಿರುವಾಗಲೇ, ನಗರ ಪೊಲೀಸರು ಸಾರ್ವಜನಿಕ ಸ್ಥಳಗಳಲ್ಲಿ ಧಂ ಎಳೆಯುವ ಜನರಿಗೆ ದಂಡ ವಿಧಿಸಿ, ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ಯೋಜನೆ ರೂಪಿಸಿದ್ದಾರೆ.

ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವವರಿಗೆ ಎಚ್ಚರಿಕೆ ನೀಡುವ ಫಲಕಗಳನ್ನು ನಗರ ಪ್ರದೇಶದಲ್ಲಿ ಆಳಡಿಸಿ ಸಾರ್ವಜನಿಕರಿಗೆ ಮಾಹಿತಿ ನೀಡುವ ಕಾರ್ಯಕ್ಕೆ ಪೊಲೀಸರು ಚಾಲನೆ ನೀಡಿದ್ದಾರೆ. ಈ ತಿಂಗಳ ಅಂತ್ಯದೊಳಗೆ ಮೈಸೂರಿನ ಸಾರ್ವಜನಿಕ ಸ್ಥಳಗಳಲ್ಲಿ ನಡೆಸುವ ಧೂಮಲೀಲೆಗೆ ಬ್ರೇಕ್ ಬೀಳಲಿದೆ.

ಕಾಯ್ದೆ ಏನು ಹೇಳುತ್ತದೆ : ತಂಬಾಕು ಉತ್ಪನ್ನಗಳ ಕಾಯ್ದೆ ಸೆಕ್ಷನ್-4ರ ಪ್ರಕಾರ ಸಾರ್ವಜನಿಕ ಸ್ಥಳಗಳ ಧೂಮಪಾನ ಮಾಡಿದರೆ 200ರೂ. ದಂಡ, ಸೆಕ್ಷನ್-5 ಪ್ರಕಾರ ಸಿಗರೇಟ್ ಅಥವಾ ಹೊಗೆಸೊಪ್ಪು ಕುರಿತು ಜಾಹಿರಾತುಗಳನ್ನು ನಿಷೇಧಿಸಲಾಗಿದೆ.

ಸೆಕ್ಷನ್-6 ಪ್ರಕಾರ ಸಿಗರೇಟ್ ಅಥವಾ ಹೊಗೆಸೊಪ್ಪು ಉತ್ಪನ್ನಗಳನ್ನು 18 ವರ್ಷದೊಳಗಿನ ವಯಸ್ಸಿನವರಿಗೆ ಮಾರುವುದು, ಶಾಲಾ ಕಾಲೇಜುಗಳ 100 ಮೀಟರ್ ಸುತ್ತಮುತ್ತ ಸಿಗರೇಟ್, ಹೊಗೆಸೊಪ್ಪು ಉತ್ಪನ್ನಗಳನ್ನು ಮಾರಾಟ ಮಾಡುವವರಿಗೆ 200ರೂ.ದಂಡ ವಿಧಿಸಲಾಗುತ್ತದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+