ಕೇರಳದಲ್ಲಿ ಭೀಕರ ಅಪಘಾತ 13 ಸಾವು

ಶುಕ್ರವಾರ ಮಧ್ಯಾಹ್ನ ಕೇರಳದ ಮಲ್ಲಾಪುರಂ ಜಿಲ್ಲೆಯ ತೆಲಕ್ಕಾಡು ಬಳಿ, ಮಿನಿಬಸ್ ಚಾಲಕನ ನಿಯಂತ್ರಣ ತಪ್ಪಿ, ಮರಕ್ಕೆ ಡಿಕ್ಕಿ ಹೊಡೆದು, ರಸ್ತೆಯ ಪಕ್ಕದಲ್ಲಿದ್ದ ಕಂದಕಕ್ಕೆ ಉರುಳಿದೆ. ಅಪಘಾತದಿಂದಾಗಿ 13 ಜನರು ಸಾವನ್ನಪ್ಪಿದ್ದಾರೆ.
ಮಲ್ಲಾಪುರಂ ಜಿಲ್ಲಾಧಿಕಾರಿ ಮತ್ತು ಸ್ಥಳೀಯ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿದ್ದು, ಅಪಘಾತದಲ್ಲಿ ಗಾಯಗೊಂಡಿದ್ದ 25 ಜನರನ್ನು ಮಲ್ಲಾಪುರಂ ಸರ್ಕಾರಿ ಆಸ್ಪತ್ರೆ ಮತ್ತು ಸ್ಥಳೀಯ ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಿದ್ದಾರೆ.
ಗಾಯಗೊಂಡರಲ್ಲಿ ಐವರ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ಹೇಳಿದ್ದಾರೆ. ಮೃತರಲ್ಲಿ 9 ಶಾಲಾ ಮಕ್ಕಳು ಮತ್ತು ನಾಲ್ವರು ಮಹಿಳೆಯರು ಸೇರಿದ್ದಾರೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಅತಿವೇಗವೇ ಘಟನೆಗೆ ಕಾರಣ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ವೇಗವಾಗಿ ಬಂದ ಚಾಲಕ ಬಸ್ ನ ನಿಯಂತ್ರಣ ಕಳೆದುಕೊಂಡು ಮರಕ್ಕೆ ಡಿಕ್ಕಿ ಹೊಡೆದಿದ್ದಾನೆ ಎಂದು ತಿಳಿಸಿದ್ದಾರೆ. ಸ್ಥಳದಲ್ಲಿ ರಕ್ಷಣಾ ಕಾರ್ಯ ನಡೆಯುತ್ತಿದೆ.












Click it and Unblock the Notifications