ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸ್ಪಾಟ್ ಫಿಕ್ಸಿಂಗ್ : ಮಿಸ್ಸಿಂಗ್ ಲಿಂಕ್ ಹುಡುಕಿ

By Mahesh
|
Google Oneindia Kannada News

ನವದೆಹಲಿ, ಸೆ.10: ದೇಶಾದ್ಯಂತ ಕೋಲಾಹಲ ಸೃಷ್ಟಿಸಿದ್ದ ಐಪಿಎಲ್ ಸ್ಪಾಟ್ ಫಿಕ್ಸಿಂಗ್ ಹಗರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿದ್ದ ಕ್ರಿಕೆಟರ್ ಅಜಿತ್ ಚಂಡಿಲಾಗೆ ಕೊನೆಗೂ ಜಾಮೀನು ಸಿಕ್ಕಿದೆ. ಸ್ಪಾಟ್ ಫಿಕ್ಸಿಂಗ್ ಪ್ರಕರಣದಲ್ಲಿ ಮಿಸ್ಸಿಂಗ್ ಲಿಂಕ್ ಪತ್ತೆಯಾಗಿ ಮತ್ತೊಮ್ಮೆ ತನಿಖೆ ನಡೆಸಿ ಎಂದು ನ್ಯಾಯಾಲಯ ಆದೇಶಿಸಿದೆ.

ದೆಹಲಿ ಪೊಲೀಸರು ಜುಲೈ ತಿಂಗಳಿನಲ್ಲಿ ಭೂಗತ ಪಾತಕಿಗಳಾದ ದಾವೂದ್ ಇಬ್ರಾಹಿಂ, ಛೋಟಾ ಶಕಿಲ್, ಕ್ರಿಕೆಟ್ ಆಟಗಾರ ಶ್ರೀಶಾಂತ್ ಸೇರಿದಂತೆ 30 ಮಂದಿ ಮೇಲೆ ದೋಷಾರೋಪ ಪಟ್ಟಿ (ಚಾರ್ಜ್ ಶೀಟ್) ತಯಾರಿಸಿ ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

ಪ್ರಕರಣ ಸಂಬಂಧ ರಾಜಸ್ಥಾನ ರಾಯಲ್ಸ್ ತಂಡದ ಮೂವರು ಆಟಗಾರರಾದ ಶ್ರೀಶಾಂತ್, ಅಂಕೀತ್ ಚೌವ್ಹಾಣ್ ಮತ್ತು ಅಜಿತ್ ಚಾಂಡಿಲ ಅವರನ್ನು ಕಳೆದ ಮೇ 16ರಂದು ಮುಂಬೈಯಲ್ಲಿ ದೆಹಲಿ ಪೊಲೀಸರು ಬಂಧಿಸಿದ್ದರು. ನಂತರ ಶ್ರೀಶಾಂತ್ ಹಾಗೂ ಚೌವ್ಹಾಣ್ ಜಾಮೀನನ ಮೇಲೆ ಬಿಡುಗಡೆಯಾಗಿದ್ದರು. ಆದರೆ ಮತ್ತೊರ್ವ ಆಟಗಾರ ಚಾಂಡಿಲ ಮಾತ್ರ ಇನ್ನು ತಿಹಾರ್ ಜೈಲಲ್ಲೇ ಇದ್ದರು.

ಹೆಚ್ಚುವರಿ ಸೆಷನ್ಸ್ ಜಡ್ಜ್ ಧರ್ಮೇಶ್ ಶರ್ಮ ಅವರು ರಾಜಸ್ಥಾನ ರಾಯಲ್ಸ್ ಆಟಗಾರ ಚಂಡಿಲಾ, ಮಾಜಿ ರಣಜಿ ಆಟಗಾರ ಬಾಬುರಾವ್ ಯಾದವ್ ಹಾಗೂ ಬುಕ್ಕಿ ದೀಪಕ್ ಕುಮಾರ್ ಅವರಿಗೆ ಜಾಮೀನು ನೀಡಿದ್ದು, ಎಲ್ಲರೂ 50,000 ರು ವೈಯಕ್ತಿಕ ಬಾಂಡ್ ಹಾಗೂ ಒಬ್ಬರು ಶ್ಯೂರಿಟಿ ನೀಡಿ ಜೈಲಿನಿಂದ ಮುಕ್ತರಾಗಿದ್ದಾರೆ.

IPL spot fixing scandal: Chandila, two others get bail

ಬುಕ್ಕಿಗಳಾದ ಜಿತೇಂದ್ರ ಕುಮಾರ್ ಜೈನ್, ರಮೇಶ್ ವ್ಯಾಸ್, ಅಶ್ವನಿ ಅಗರವಾಲ್, ಸುನಿಲ್ ಭಾಟಿಯಾ ಹಾಗೂ ಫಿರೋಜ್ ಫಾರಿದ್ ಅನ್ಸಾರಿ ಜಾಮೀನು ಅರ್ಜಿ ತಿರಸ್ಕಾರಗೊಂಡಿದೆ.

ಮಿಸ್ಸಿಂಗ್ ಲಿಂಕ್: ಅಜಿತ್ ಚಂಡಿಲಾ, ಶ್ರೀಶಾಂತ್ ಜತೆ ಸಂಪರ್ಕ ಹೊಂದಿದ್ದ ಬುಕ್ಕಿಗಳ ಹೇಳಿಕೆಗಳಲ್ಲಿ ಗೊಂದಲ ಕಂಡು ಬಂದಿದ್ದು, ಈ ಕೇಸ್ ನಲ್ಲಿ ಮಿಸ್ಸಿಂಗ್ ಲಿಂಕ್ ಇದೆ. ವಿಶೇಷ ಸೆಲ್ ಆರಂಭಿಸಿ ದೆಹಲಿ ಪೊಲೀಸರು ಮತ್ತೊಮ್ಮೆ ತನಿಖೆ ನಡೆಸುವಂತೆ ಆಯುಕ್ತರಿಗೆ ಸೂಚಿಸಲಾಗಿದೆ ಎಂದು ಜಡ್ಜ್ ಧರ್ಮೇಶ್ ಅವರು ತಮ್ಮ ತೀರ್ಪಿನಲ್ಲಿ ಹೇಳಿದ್ದಾರೆ.

ದೆಹಲಿ ಪೊಲೀಸ್ ಆಯುಕ್ತ ನೀರಜ್ ಕುಮಾರ್ ನೇತೃತ್ವದ ತಂಡ ದೋಷಾರೋಪಣ ಪಟ್ಟಿ ಸಿದ್ಧಪಡಿಸಿದ್ದು, ಜು.31 ರಂದು ನೀರಜ್ ಕುಮಾರ್ ಅವರು ನಿವೃತ್ತಿ ಹೊಂದುತ್ತಿದ್ದು ಅದಕ್ಕಿಂತ ಮೊದಲು ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಲಾಗಿದೆ.

ಸ್ಪಾಟ್ ಫಿಕ್ಸಿಂಗ್‌ನಲ್ಲಿ ಭಾಗಿಯಾಗಿರುವವರ ಮೇಲೆ ಮಹಾರಾಷ್ಟ್ರ ಅಪರಾಧ ನಿಯಂತ್ರಣ ಕಾಯ್ದೆ (ಮೊಕಾ) ಪ್ರಕಾರ ದೂರು ದಾಖಲಿಸಲಾಗಿದೆ. ಐಪಿಸಿ ಸೆಕ್ಷನ್ 420, 409 ಹಾಗೂ 120 (ಬಿ) ಹಾಗೂ ಮೋಕಾ ಸೆಕ್ಷನ್ 6 ಮತ್ತು 8 ಅಡಿಯಲ್ಲಿ ಆರೋಪಗಳನ್ನು ದಾಖಲಿಸಲಾಗಿದೆ.

ಶ್ರೀಶಾಂತ್ ಗೆಳೆಯ ಅಭಿಷೇಕ್ ಶುಕ್ಲಾ ಅವರನ್ನು ಮೋಕಾ ಅಡಿಯಲ್ಲಿ ಆರೋಪಿಯನ್ನಾಗಿಸಿಲ್ಲ. ಪಾಕಿಸ್ತಾನ, ದುಬೈ ಹಾಗೂ ಇಂಗ್ಲೆಂಡ್ ನಿಂದ ದಾವೂದ್ ಇಬ್ರಾಹಿಂ ಹಾಗೂ ಛೋಟಾ ಶಕೀಲ್ ಸ್ಪಾಟ್ ಫಿಕ್ಸಿಂಗ್ ನಿಯಂತ್ರಿಸುತ್ತಿದ್ದರು. ಪಾಕಿಸ್ತಾನ ಬುಕ್ಕಿ ಸಲ್ಮಾನ್, ದುಬೈ ಬುಕ್ಕಿ ಜಾವೇದ್ aka ಡಾಕ್ಟರ್ aka ಜಾವೇದ್ ಛೂಟನಿ ಅವರು ಭಾರತದ ಬುಕ್ಕಿಗಳಾದ ರಮೇಶ್ ವ್ಯಾಸ್ ಹಾಗೂ ಟಿಂಕು ಮಂಡಿ ಮೂಲಕ ಫಿಕ್ಸಿಂಗ್ ಮಾಡುತ್ತಿದ್ದರು ಎಂದು ಅರೋಪಪಟ್ಟಿಯಲ್ಲಿ ಹೇಳಲಾಗಿದೆ. (ಪಿಟಿಐ)

English summary
Suspended cricketer Ajit Chandila and two others, arrested for their alleged involvement in the IPL spot-fixing scandal, were today granted bail by a Delhi court which said there were some "missing links" in the prosecution's case.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X