ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕದ ಕಾಂಗ್ರೆಸ್ಸಿಗರಿಗೆ ರಾಹುಲ್ ಗಾಂಧಿ ಮೇಲೆ ಒಲವು!

|
Google Oneindia Kannada News

ನವದೆಹಲಿ, ಆಗಸ್ಟ್.23: ಅಖಿಲ ಭಾರತ ಕಾಂಗ್ರೆಸ್ ಸಮಿತಿ(ಎಐಸಿಸಿ) ಅಧ್ಯಕ್ಷ ಸ್ಥಾನಕ್ಕೆ ಯಾರನ್ನು ಆಯ್ಕೆ ಮಾಡಬೇಕು ಎನ್ನುವುದರ ಕುರಿತು ಚರ್ಚೆ ಆಗುತ್ತಿದೆ. ದೇಶಾದ್ಯಂತ ಕಾಂಗ್ರೆಸ್ ನಾಯಕರಲ್ಲಿ ಪಕ್ಷದ ಮುಂದಿನ ಸಾರಥಿ ಯಾರು ಎನ್ನುವುದು ತೀವ್ರ ಕುತೂಹಲ ಕೆರಳಿಸಿದೆ.

ಹೈಕಮಾಂಡ್ ಮಟ್ಟದಲ್ಲೇ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಹೆಸರು ಕೇಳಿ ಬರುತ್ತಿದೆ. ಆದರೆ ರಾಜ್ಯದ ನಾಯಕರು ಮಾತ್ರ ರಾಹುಲ್ ಗಾಂಧಿ ತಮ್ಮ ಮುಂದಿನ ನಾಯಕರಾಗಲಿ ಎಂದು ಮೇಲಿಂದ ಮೇಲೆ ಟ್ವೀಟ್ ಗಳನ್ನು ಮಾಡುತ್ತಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷ ಹುದ್ದೆಗೆ ಖರ್ಗೆ ಹೆಸರು ಚಾಲ್ತಿಯಲ್ಲಿ: ಸಿದ್ದರಾಮಯ್ಯ ಹೀಗ್ಯಾಕೆ ಟ್ವೀಟ್ ಮಾಡಿದ್ರು?ಕಾಂಗ್ರೆಸ್ ಅಧ್ಯಕ್ಷ ಹುದ್ದೆಗೆ ಖರ್ಗೆ ಹೆಸರು ಚಾಲ್ತಿಯಲ್ಲಿ: ಸಿದ್ದರಾಮಯ್ಯ ಹೀಗ್ಯಾಕೆ ಟ್ವೀಟ್ ಮಾಡಿದ್ರು?

"ಶ್ರೀಮತಿ ಸೋನಿಯಾ ಗಾಂಧಿ ಅವರ ಘನ ಮಾರ್ಗದರ್ಶನದಲ್ಲಿ ಶ್ರೀ ರಾಹುಲ್ ಗಾಂಧಿ ಅವರೇ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಪಕ್ಷ ಮುನ್ನಡೆಸಬೇಕು ಎಂಬುದು ನನ್ನ ಮತ್ತು ಕೋಟ್ಯಂತರ ಕಾರ್ಯಕರ್ತರ ಅಭಿಲಾಷೆಯಾಗಿದೆ" ಎಂದು ಈಶ್ವರ್ ಖಂಡ್ರೆ ಟ್ವೀಟ್ ಮಾಡಿದ್ದಾರೆ.

 Ahead CWC Meeting On Monday: Karnataka Leaders Supported To Rahul Gandhi Leadership

ರಾಹುಲ್ ಗಾಂಧಿ ಪರ ಸಲೀಮ್ ಅಹ್ಮದ್ ಟ್ವೀಟ್:

"ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ಈ ಹಿಂದೆ ರಾಹುಲ್ ಗಾಂಧಿ ಅವರು ನೀಡಿರುವ ರಾಜೀನಾಮೆಯನ್ನು ವಾಪಸ್ ಪಡೆಯುವುದಕ್ಕೆ ಇದು ಸಕಾಲವಾಗಿದೆ. ಇದೀಗ ರಾಹುಲ್ ಗಾಂಧಿ ಅವರು ಮತ್ತೊಮ್ಮೆ ಪಕ್ಷದ ಸಾರಥ್ಯವನ್ನು ವಹಿಸಿಕೊಳ್ಳಬೇಕಿದೆ" ಎಂದು ಸಲೀಮ್ ಅಹ್ಮದ್ ಟ್ವೀಟ್ ಮಾಡಿದ್ದಾರೆ.

 Ahead CWC Meeting On Monday: Karnataka Leaders Supported To Rahul Gandhi Leadership

ಕಾಂಗ್ರೆಸ್ ಪಕ್ಷವನ್ನು ಹೈಕಮಾಂಡ್ ಮಟ್ಟದಲ್ಲಿ ಯಾರು ಮುನ್ನೆಡೆಸಬೇಕು ಎನ್ನುವುದರ ಬಗ್ಗೆ ಚರ್ಚಿಸಲು ಸೋಮವಾರ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ಕರೆಯಲಾಗಿದೆ. ನವದೆಹಲಿಯ ಪಕ್ಷದ ಕಚೇರಿಯಲ್ಲಿ ಬೆಳಗ್ಗೆ 11 ಗಂಟೆಗೆ ಸಭೆ ಆರಂಭವಾಗಲಿದೆ. ಇದೇ ಮೊದಲ ಬಾರಿಗೆ ವೆಬೆಕ್ಸ್ ಆ್ಯಪ್ ಮೂಲಕ ಸಿಡಬ್ಲ್ಯುಸಿ ಸಭೆಯನ್ನು ನಡೆಸಲಾಗುತ್ತಿದೆ.

English summary
Ahead CWC Meeting On Monday: Karnataka Leaders Supported To Rahul Gandhi Leadership.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X