ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಮೆರಿಕ ಪ್ರವಾಸ ಮುಗಿಸಿ ಬಂದ ಮೋದಿಗೆ ಭವ್ಯ ಸ್ವಾಗತ

|
Google Oneindia Kannada News

ನವದೆಹಲಿ, ಸೆಪ್ಟೆಂಬರ್ 26: ಮೂರು ದಿನಗಳ ಅಮೆರಿಕ ಪ್ರವಾಸ ಮುಗಿಸಿ ಪ್ರಧಾನಿ ನರೇಂದ್ರ ಮೋದಿ ನವದೆಹಲಿಗೆ ವಾಪಸ್ ಆದರು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಸೇರಿದಂತೆ ಹಲವಾರು ನಾಯಕರು ಮೋದಿಯನ್ನು ಸ್ವಾಗತಿಸಿದರು.

ಭಾನುವಾರ ದೆಹಲಿಯ ಪಾಲಂ ವಿಮಾನ ನಿಲ್ದಾಣಕ್ಕೆ ಪ್ರಧಾನಿ ಮೋದಿ ಏರ್ ಇಂಡಿಯಾ ಒನ್ ವಿಮಾನದಲ್ಲಿ ಆಗಮಿಸಿದರು. ಜೋ ಬೈಡನ್ ಅಮೆರಿಕ ಅಧ್ಯಕ್ಷರಾದ ಮೇಲೆ ಇದೇ ಮೊದಲ ಬಾರಿಗೆ ನರೇಂದ್ರ ಮೋದಿ ಅಮೆರಿಕ ಪ್ರವಾಸ ಕೈಗೊಂಡಿದ್ದರು.

ಪ್ರಧಾನಿ ನರೇಂದ್ರ ಮೋದಿ 3 ದಿನಗಳ ಯುಎಸ್ ಪ್ರವಾಸದ ಸಂಪೂರ್ಣ ಮಾಹಿತಿ ಪ್ರಧಾನಿ ನರೇಂದ್ರ ಮೋದಿ 3 ದಿನಗಳ ಯುಎಸ್ ಪ್ರವಾಸದ ಸಂಪೂರ್ಣ ಮಾಹಿತಿ

ದೆಹಲಿ ವಿಮಾನ ನಿಲ್ದಾಣದಲ್ಲಿ ಬಿಜೆಪಿ ಅಧ್ಯಕ್ಷ ಜೆ. ಪಿ. ನಡ್ಡಾ ಮತ್ತು ಇತರ ನಾಯಕರು ಪ್ರಧಾನಿ ಮೋದಿಯನ್ನು ಸ್ವಾಗತಿಸಿದರು. ವಿಮಾನ ನಿಲ್ದಾಣದಲ್ಲಿ ನೂರಾರು ಬಿಜೆಪಿ ಕಾರ್ಯಕರ್ತರು ಸೇರಿದ್ದರು. ಬೃಹತ್ ಹೂವಿನ ಹಾರವನ್ನು ಹಾಕಿ, ಶಾಲು ಹೊದಿಸಿ ಮೋದಿಯನ್ನು ಸ್ವಾಗತಿಸಲಾಯಿತು.

ವಿಶ್ವಸಂಸ್ಥೆಯ 76ನೇ ಸಾಮಾನ್ಯ ಸಭೆಯಲ್ಲಿ ಪ್ರಧಾನಿ ಮೋದಿ ಪ್ರಜಾಪ್ರಭುತ್ವದ ಪಾಠವಿಶ್ವಸಂಸ್ಥೆಯ 76ನೇ ಸಾಮಾನ್ಯ ಸಭೆಯಲ್ಲಿ ಪ್ರಧಾನಿ ಮೋದಿ ಪ್ರಜಾಪ್ರಭುತ್ವದ ಪಾಠ

Prime Minister Narendra Modi US Visit Conclude Arrives At Delhi

ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಜೆ. ಪಿ. ನಡ್ಡಾ, "ಪ್ರಧಾನಿ ನರೇಂದ್ರ ಮೋದಿ ನಾಯಕತ್ವದಲ್ಲಿ ಭಾರತವನ್ನು ವಿಶ್ವ ಬೇರೆಯ ಆಯಾಮದಲ್ಲಿಯೇ ನೋಡುತ್ತದೆ ಎಂಬುದಕ್ಕೆ ಮೋದಿ ಅಮೆರಿಕ ಭೇಟಿಯೇ ಸಾಕ್ಷಿಯಾಗಿದೆ" ಎಂದರು.

ಮೋದಿ ಮನ್ ಕೀ ಬಾತ್; ನದಿಗಳ ಮಹತ್ವ ತಿಳಿಸಿದ ಪ್ರಧಾನಿ ಮೋದಿ ಮನ್ ಕೀ ಬಾತ್; ನದಿಗಳ ಮಹತ್ವ ತಿಳಿಸಿದ ಪ್ರಧಾನಿ

"ಪ್ರಧಾನಿ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಜೋ ಬೈಡನ್ ನಡುವಿನ ಸ್ನೇಹ ಹೊಸತಲ್ಲ. ಹಳೆಯ ಸಂಬಂಧವನ್ನು ಅವರು ಹಂಚಿಕೊಂಡಿದ್ದಾರೆ. ಇದನ್ನೇ ಅಮೆರಿಕ ಅಧ್ಯಕ್ಷರು ಸಹ ಹೇಳಿದ್ದಾರೆ" ಎಂದು ಜೆ. ಪಿ. ನಡ್ಡಾ ತಿಳಿಸಿದರು.

ಅಮೆರಿಕ ಪ್ರವಾಸದಲ್ಲಿದ್ದ ಪ್ರಧಾನಿ ನರೇಂದ್ರ ಮೋದಿ ಮೊದಲ ದಿನ ಅಮೆರಿಕದ ಉಪಾಧ್ಯಕ್ಷೆ ಕಮಲಾ ಹ್ಯಾರೀಸ್ ಭೇಟಿಯಾಗಿದ್ದರು. ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್ ಮಾರಿಸಸ್ ಮತ್ತು ಜಪಾನ್ ಪ್ರಧಾನಿ ಯೋಶಿಹಿದೆ ಸುಗಾರನ್ನು ಭೇಟಿಯಾಗಿದ್ದರು.

2ನೇ ದಿನ ಕ್ವಾಡ್ ಶೃಂಗ ಸಭೆಯಲ್ಲಿ ಪಾಲ್ಗೊಂಡಿದ್ದರು. ಅಮೆರಿಕ, ಭಾರತ, ಆಸ್ಟ್ರೇಲಿಯಾ ಮತ್ತು ಜಪಾನ್ ದೇಶವನ್ನು ಒಳಗೊಂಡ ಸಂಘಟನೆಯಾಗಿದ್ದು, ಮೊದಲ ಬಾರಿಗೆ ನಾಲ್ಕು ದೇಶಗಳ ನಾಯಕರು ಒಟ್ಟಿಗೆ ಸೇರಿದ್ದರು.

ಬಳಿಕ ಶ್ವೇತ ಭವನದಲ್ಲಿ ಅಮೆರಿಕ ಅಧ್ಯಕ್ಷ ಜೋ ಬೈಡನ್ ಭೇಟಿಯಾಗಿದ್ದರು. ಸಿಇಓಗಳ ಜೊತೆ ಸಭೆ ನಡೆಸಿದ್ದರು. ಅಮೆರಿಕ ಭೇಟಿಯ ಕೊನೆಯ ದಿನವಾದ ಶನಿವಾರ ವಿಶ್ವಸಂಸ್ಥೆಯ 76ನೇ ಸಾಮಾನ್ಯ ಸಭೆಯಲ್ಲಿ ಮೋದಿ ಭಾಷಣ ಮಾಡಿದ್ದರು.

65 ಗಂಟೆಗಳಲ್ಲಿ ಪ್ರಧಾನಿ ಮೋದಿ 24 ವಿವಿಧ ಸಭೆಗಳನ್ನು ನಡೆಸಿದ್ದಾರೆ. ಅಮೆರಿಕ ಭೇಟಿ ಸಂಪೂರ್ಣ ಯಶಸ್ವಿಯಾಗಿದ್ದು, ಈ ಕುರಿತು ಚರ್ಚೆಗಳು ದೇಶದಲ್ಲಿ ನಡೆಯುತ್ತಿವೆ. ಶನಿವಾರ ಅಮೆರಿಕದಿಂದ ಹೊರಟ ಮೋದಿ ಭಾನುವಾರ ಮಧ್ಯಾಹ್ನ ನವದೆಹಲಿಗೆ ಆಗಮಿಸಿದ್ದಾರೆ.

ವಿಶ್ವಸಂಸ್ಥೆಯ 76ನೇ ಸಾಮಾನ್ಯ ಸಭೆಯಲ್ಲಿ ನರೇಂದ್ರ ಮೋದಿ ಭಾಷಣ ಬಹಳ ಮಹತ್ವ ಪಡೆದುಕೊಂಡಿದೆ. ವೈವಿದ್ಯತೆಯೇ ಭಾರತದ ಪ್ರಜಾಪ್ರಭುತ್ವದ ಹೆಗ್ಗುರುತು. ಸ್ವಾತಂತ್ರ್ಯೋತ್ಸವದ 75ನೇ ವರ್ಷಾಚರಣೆ ಸಂದರ್ಭದಲ್ಲಿ ಭಾರತವು ವಿದ್ಯಾರ್ಥಿಗಳು ಅಭಿವೃದ್ಧಿಪಡಿಸಿದ 75 ಉಪಗ್ರಹಗಳನ್ನು ಉಡಾವಣೆ ಮಾಡಲಿದೆ ಎಂದು ಹೇಳಿದ್ದರು.

ಭಾರತ ಬೆಳವಣಿಗೆಯಾದಾಗ ಜಗತ್ತು ಬೆಳೆಯುತ್ತದೆ. ಭಾರತ ಸುಧಾರಣೆಯಾದಾಗ ಜಗತ್ತೂ ಬದಲಾಗುತ್ತದೆ. ಭಾರತವು ವಿಶ್ವದ ಮೊತ್ತ ಮೊದಲ ಡಿಎನ್‌ಎ ಆಧಾರಿತ ಲಸಿಕೆ ಅಭಿವೃದ್ಧಿಪಡಿಸುತ್ತಿದೆ. ಅಭಿವೃದ್ಧಿಯು ಎಲ್ಲರನ್ನು ಒಳಗೊಂಡಿರಬೇಕು. ಎಲ್ಲರನ್ನೂ ಪೋಷಿಸುವಂತಿರಬೇಕು ಎಂದು ಭಾಷಣದಲ್ಲಿ ಉಲ್ಲೇಖಿಸಿದ್ದರು.

ಚಹಾ ಮಾರಾಟ ಮಾಡಲು ತಂದೆಗೆ ನೆರವಾಗುತ್ತಿದ್ದ ಬಾಲಕನೊಬ್ಬ ಇಂದು ನಾಲ್ಕನೇ ಬಾರಿಗೆ ವಿಶ್ವಸಂಸ್ಥೆಯ ಮಹಾಧಿವೇಶನದಲ್ಲಿ ಮಾತನಾಡುತ್ತಿದ್ದಾನೆ ಎಂದು ಹೇಳಿದ ಮೋದಿ ಪ್ರಭಾಪ್ರಭುತ್ವದ ಮಹತ್ವವನ್ನು ಸಾರಲು ತಮ್ಮನ್ನೇ ಉದಾಹರಣೆಯನ್ನಾಗಿ ಉಲ್ಲೇಖಿಸಿದರು.

ಮುಖ್ಯಮಂತ್ರಿಗೆ ಕರೆ; ನವದೆಹಲಿಗೆ ಆಗಮಿಸಿದ ಪ್ರಧಾನಿ ಮೋದಿ ವಿಶ್ರಾಂತಿ ಮೊರೆ ಹೋಗಿಲ್ಲ. ಗುಲಾಬ್ ಚಂಡಮಾರುತದ ಹಿನ್ನಲೆಯಲ್ಲಿ ಆಂಧ್ರ ಪ್ರದೇಶದ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿಗೆ ಕರೆ ಮಾಡಿ ಚಂಡಮಾರುತ ಎದುರಿಸಲು ಮಾಡಿಕೊಂಡಿರುವ ಸಿದ್ಧತೆಗಳ ಕುರಿತು ಚರ್ಚೆ ನಡೆಸಿದ್ದಾರೆ.

English summary
BJP president J. P. Nadda and other leaders greet prime minister Narendra Modi on his arrival from the United States.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X