ದಟ್ಟ ಮಂಜಿನಿಂದ ಎಂಟು ವಾಹನಗಳ ಸರಣಿ ಅಪಘಾತ: ಮೂವರು ಸಾವು
ಆಗ್ರಾ, ಜನವರಿ 1: ತೀವ್ರ ಮಂಜಿನ ವಾತಾವರಣದಿಂದ ಮಾರ್ಗ ಸರಿಯಾಗಿ ಗೋಚರಿಸದೆ ಸುಮಾರು ಎಂಟು ವಾಹನಗಳು ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದ ಘಟನೆ ಆಗ್ರಾ-ಲಕ್ನೋ ಎಕ್ಸ್ಪ್ರೆಸ್ ವೇನಲ್ಲಿ ಸಂಭವಿಸಿದೆ. ಶುಕ್ರವಾರ ಬೆಳಿಗ್ಗೆ ಈ ದುರ್ಘಟನೆ ಉಂಟಾಗಿದೆ.
ಘಟನೆಯಲ್ಲಿ ಮೂವರು ಮೃತಪಟ್ಟಿದ್ದರೆ, ಐವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಪಿಜಿಐ ಸೈಫೈಗೆ ಕರೆದೊಯ್ಯಲಾಗಿದ್ದು, ಅಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಶುಕ್ರವಾರ ಮುಂಜಾನೆ ದಟ್ಟವಾದ ಮಂಜು ಆವರಿಸಿದ್ದ ಕಾರಣ ರಸ್ತೆ ಸರಿಯಾಗಿ ಕಾಣಿಸುತ್ತಿರಲಿಲ್ಲ. ಎಕ್ಸ್ಪ್ರೆಸ್ ವೇನಲ್ಲಿ ವಾಹನಗಳು ವೇಗವಾಗಿ ಚಲಿಸುವುದರಿಂದ ಮುಂದೆ ಸಾಗುತ್ತಿದ್ದ ವಾಹನದ ವೇಗ ತಿಳಿಯದೆ ಹಿಂದಿನ ವಾಹನ ಡಿಕ್ಕಿ ಹೊಡೆದಿದೆ. ಅದರ ಬೆನ್ನಲ್ಲೇ ಉಳಿದ ವಾಹನಗಳು ಕೂಡ ಡಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

ಉತ್ತರ ಭಾರತದಲ್ಲಿ ಚಳಿಯ ತೀವ್ರತೆ ಅಧಿಕವಾಗಿದ್ದು, ಮಧ್ಯಾಹ್ನದ ವೇಲೆಯೂ ಮಂಜುಮುಸುಕಿದ ವಾತಾವರಣ ಉಂಟಾಗುತ್ತಿದೆ. ಇದರಿಂದ ಸೂರ್ಯನ ದರ್ಶನವಾಗುತ್ತಿಲ್ಲ. ಈ ವಾತಾವರಣ ರಸ್ತೆ ಅಪಘಾತದಂತಹ ಅಪಾಯಗಳಿಗೆ ಕಾರಣವಾಗುತ್ತಿದೆ. ಆಗ್ರಾ-ಲಕ್ನೋ ಎಕ್ಸ್ಪ್ರೆಸ್ ವೇ ನಲ್ಲಿ ಚಳಿಗಾಲದ ಅವಧಿಯಲ್ಲಿ ಸರಣಿ ಅಪಘಾತಗಳು ಸಾಮಾನ್ಯವಾಗಿದೆ.
-
Saaniya Chandok: ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ಕುಟುಂಬಕ್ಕೆ ಸೊಸೆಯಾಗಿ ಬಂದ ಸಾನಿಯಾ ಚಾಂದೋಕ್ ಯಾರು? -
Abhishek Sharma: 'ಅಭಿಷೇಕ್ ಶರ್ಮಾ ಒಬ್ಬ ಬ್ಲೈಂಡ್ ಸ್ಲಾಗರ್': ರೊಚ್ಚಿಗೆದ್ದ ಅಭಿಮಾನಿಗಳು -
Horoscope March 5: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ, ಯಾರಿಗೆ ಶುಭ-ಯಾರಿಗೆ ಅಶುಭ -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Bengaluru Viral Tweet: ಹೋಳಿ ಹಬ್ಬ: ಬೆಂಗಳೂರು ಬೋರಿಂಗ್ ಎಂದ ನಾರ್ಥಿ ಯುವತಿ ಟ್ವೀಟ್ ವೈರಲ್: ಕನ್ನಡಿಗರು ಹೇಳಿದ್ದೇನು -
Gold Rate Today: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ ದರ ಇಳಿಕೆ: ಇಲ್ಲಿದೆ ಮಾರ್ಚ್ 6ರ ದರಪಟ್ಟಿ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ -
KEA: ಯುಜಿಸಿಇಟಿ-ಪಿಜಿನೀಟ್ ಅಭ್ಯರ್ಥಿಗಳ ಗಮನಕ್ಕೆ, ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ -
ಬೆಂಗಳೂರು ಏರ್ಪೋರ್ಟ್ಗೆ ಸತತ 4ನೇ ಬಾರಿಯೂ ವಿಶ್ವದ 'ಅತ್ಯುತ್ತಮ ಏರ್ಪೋರ್ಟ್'ಪ್ರಶಸ್ತಿ












Click it and Unblock the Notifications