Get Updates
Get notified of breaking news, exclusive insights, and must-see stories!

ತಾಜ್‌ಮಹಲ್‌ಗೆ ಬಾಂಬ್ ಬೆದರಿಕೆ; ಪ್ರವಾಸಿಗರನ್ನು ತೆರವುಗೊಳಿಸಿದ ಪೊಲೀಸರು

ಆಗ್ರಾ, ಮಾರ್ಚ್ 4: ತಾಜ್‌ ಮಹಲ್‌ನಲ್ಲಿ ಬಾಂಬ್ ಇಟ್ಟಿರುವುದಾಗಿ ಗುರುವಾರ ಬೆಳಿಗ್ಗೆ ಪೊಲೀಸರಿಗೆ ಬೆದರಿಕೆ ಕರೆ ಬಂದಿದ್ದು, ತಕ್ಷಣವೇ ಅಲ್ಲಿಗೆ ದೌಡಾಯಿಸಿದ ಪೊಲೀಸರು ಪ್ರವಾಸಿಗರನ್ನು ತೆರವುಗೊಳಿಸಿದ ಸಂಗತಿ ನಡೆದಿದೆ.

ತಾಜ್ ಮಹಲ್‌ನಲ್ಲಿ ತಾನು ಬಾಂಬ್ ಇಟ್ಟಿರುವುದಾಗಿ ವ್ಯಕ್ತಿಯೊಬ್ಬ ಪೊಲೀಸರಿಗೆ ಕರೆ ಮಾಡಿದ್ದಾನೆ. ತಕ್ಷಣವೇ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ತಾಜ್ ಮಹಲ್ ನೋಡಲು ಬಂದಿದ್ದ ಸಾವಿರಾರು ಪ್ರವಾಸಿಗರನ್ನು ಹೊರಗೆ ಕಳುಹಿಸಿದ್ದಾರೆ. ನಂತರ ಅಧಿಕಾರಿಗಳು ತಾಜ್ ಮಹಲ್ ಸುತ್ತ ತಪಾಸಣೆ ನಡೆಸಿದ್ದಾರೆ. ಯಾವುದೇ ಸ್ಫೋಟಕ ಪತ್ತೆಯಾಗಿಲ್ಲ.

ವ್ಯಕ್ತಿಯೊಬ್ಬ ಕರೆ ಮಾಡಿ, ಮಿಲಿಟರಿ ನೇಮಕಾತಿಯಲ್ಲಿ ಅಕ್ರಮ ನಡೆಯುತ್ತಿದೆ. ನಾನು ಅರ್ಹನಾಗಿದ್ದರೂ ನನ್ನನ್ನು ನೇಮಿಸಿಕೊಂಡಿಲ್ಲ. ಹೀಗಾಗಿ ತಾಜ್ ಮಹಲ್‌ನಲ್ಲಿ ಬಾಂಬ್ ಇಟ್ಟಿದ್ದೇನೆ. ಕೆಲವೇ ನಿಮಿಷಗಳಲ್ಲಿ ಬಾಂಬ್ ಸ್ಫೋಟಗೊಳ್ಳಲಿದೆ ಎಂದು ಹೇಳಿದ್ದ. ತಕ್ಷಣವೇ ಸ್ಥಳಕ್ಕೆ ದೌಡಾಯಿಸಿದೆವು. ಸ್ಥಳದಲ್ಲಿ ಸ್ಫೋಟಕ ಪತ್ತೆಯಾಗಿಲ್ಲ. ಇದು ಹುಸಿ ಬಾಂಬ್ ಕರೆ ಎಂದು ಎಸ್‌ಪಿ ಶಿವರಾಮ್ ಯಾದವ್ ತಿಳಿಸಿದ್ದಾರೆ.

Taj Mahal in Agra Vacated After Bomb Threat Call

ಕರೆ ಮಾಡಿದ ವ್ಯಕ್ತಿ ಫೋನ್ ನಂಬರ್ ಟ್ರ್ಯಾಕ್ ಮಾಡಿದ್ದು, ಆತ ಫಿರೋಜಾಬಾದ್‌ನಲ್ಲಿರುವುದಾಗಿ ತಿಳಿದುಬಂದಿದೆ. ಆತನಿಗೆ ಶೋಧ ಕಾರ್ಯ ಆರಂಭಿಸಿರುವುದಾಗಿ ಎಸ್‌ಪಿ ತಿಳಿಸಿದ್ದಾರೆ.

ಇದು ಹುಸಿ ಬಾಂಬ್ ಕರೆ ಎಂದು ತಿಳಿಯುತ್ತಿದ್ದಂತೆ ಮತ್ತೆ ಬೆಳಿಗ್ಗೆ 11.15ಕ್ಕೆ ಪ್ರವಾಸಿಗರಿಗೆ ಅವಕಾಶ ಮಾಡಿಕೊಡಲಾಗಿದೆ.

ಕೊರೊನಾ ಸೋಂಕಿನ ಕಾರಣದಿಂದ ತಾಜ್‌ ಮಹಲ್‌ಗೆ ಆರು ತಿಂಗಳುಗಳ ಕಾಲ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿತ್ತು. ನಂತರ ಸೆಪ್ಟೆಂಬರ್‌ನಲ್ಲಿ ತೆರೆಯಲಾಯಿತು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+