• search
  • Live TV
ಆಗ್ರಾ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಆಗ್ರಾದಲ್ಲಿ ತಾಜ್‌ಮಹಲ್ ಸೇರಿ ಇತರೆ ಐತಿಹಾಸಿಕ ಸ್ಮಾರಕಗಳು ಸಧ್ಯಕ್ಕೆ ತೆರೆಯೊಲ್ಲ

|
Google Oneindia Kannada News

ಆಗ್ರಾ, ಜುಲೈ 6: ಆಗ್ರಾದಲ್ಲಿ ಕೊರೊನಾ ಸೋಂಕು ಹೆಚ್ಚಳವಾದ ಹಿನ್ನೆಲೆಯಲ್ಲಿ ತಾಜ್‌ಮಹಲ್ ಸೇರಿದಂತೆ ಇತರೆ ಐತಿಹಾಸಿಕ ಸ್ಮಾರಕಗಳನ್ನು ಸಧ್ಯಕ್ಕೆ ತೆರೆಯದೇ ಇರಲು ನಿರ್ಧರಿಸಲಾಗಿದೆ.

ತಾಜ್‌ಮಹಲ್, ಆಗ್ರಾ ಬಂದರು, ಅಕ್ಬರ್ ಟೋಂಬ್ ಇತರೆ ಐತಿಹಾಸಿಕ ಸ್ಮಾರಕಗಳನ್ನು ತೆರೆಯುವಂತಿಲ್ಲ ಎಂದು ಆಗ್ರಾ ಡಿಸ್ಟ್ರಿಕ್ಟ್ ಮ್ಯಾಜಿಸ್ಟ್ರೇಟ್ ಪ್ರಭು ಎನ್‌ ಸಿಂಗ್ ತಿಳಿಸಿದ್ದಾರೆ.

ಒಂದೇ ದಿನ ಭಾರತದಲ್ಲಿ 24 ಸಾವಿರ ಕೋವಿಡ್ - 19 ಪ್ರಕರಣ!ಒಂದೇ ದಿನ ಭಾರತದಲ್ಲಿ 24 ಸಾವಿರ ಕೋವಿಡ್ - 19 ಪ್ರಕರಣ!

ಜಿಲ್ಲಾ ಮ್ಯಾಜಿಸ್ಟ್ರೇಟ್ ಅವರ ಮಾಹಿತಿ ಪ್ರಕಾರ ಕಳೆದ ನಾಲ್ಕು ದಿನಗಳಲ್ಲಿ 55 ಕೊರೊನಾ ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ. 71 ಕಂಟೈನ್ಮೆಂಟ್ ಝೋನ್‌ಗಳಿವೆ. ಒಂದೊಮ್ಮೆ ಪ್ರವಾಸಿಗರಿಗೆ ಈ ಸ್ಥಳಗಳಿಗೆ ಭೇಟಿ ನೀಡಲು ಅವಕಾಶ ಕಲ್ಪಿಸಿದರೆ ಕೊರೊನಾ ಸೋಂಕು ಹರಡುವ ಸಾಧ್ಯತೆ ಹೆಚ್ಚಿದೆ ಎಂದಿದ್ದಾರೆ.

ಒಂದೊಮ್ಮೆ ಈ ತಾಣಗಳನ್ನು ತೆರೆದರೆ ಪ್ರವಾಸಿಗರು ಬಂದೇ ಬರುತ್ತಾರೆ. ಕೊವಿಡ್ ಲಾಕ್‌ಡೌನ್‌ ಸಡಿಲಗೊಂಡ ಬಳಿಕ ಜುಲೈ 6 ರಿಂದ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಿ ಬೇಕಾದರೆ ತಾಜ್‌ಮಹಲ್ ತೆರೆಯಬಹುದು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಸಿಂಗ್ ಪಟೇಲ್ ತಿಳಿಸಿದ್ದರು.

ಭಾರತದಲ್ಲಿ ಜುಲೈ 5 ರಂದು ಒಂದೇ ದಿನ 24 ಸಾವಿರ ಕೊರೊನಾ ಸೋಂಕಿತ ಪ್ರಕರಣಗಳು ಪತ್ತೆಯಾಗಿತ್ತು.ಶನಿವಾರ ಬೆಳಗ್ಗೆ 8ಗಂಟೆಯಿಂದ ಭಾನುವಾರ ಬೆಳಗ್ಗೆ ತನಕ ಭಾರತದಲ್ಲಿ 24,850 ಹೊಸ ಕೊರೊನಾ ವೈರಸ್ ಸೋಂಕಿನ ಪ್ರಕರಣ ದಾಖಲಾಗಿದೆ. 613 ಜನರು ಮೃತಪಟ್ಟಿದ್ದಾರೆ. ದೇಶದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 6,73,105ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ ಕೊರೊನಾ ವೈರಸ್ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 19,268ಕ್ಕೆ ಏರಿಕೆಯಾಗಿದೆ. ಇದುವರೆಗೂ 4,09,083 ಜನರು ಗುಣಮುಖರಾಗಿದ್ದಾರೆ. ಕಳೆದ 9 ದಿನಗಳಿಂದ ದೇಶದಲ್ಲಿ ಪ್ರತಿದಿನ 18,000ಕ್ಕೂ ಅಧಿಕ ಪ್ರಕರಣಗಳು ದಾಖಲಾಗುತ್ತಿವೆ.

ಶನಿವಾರ ನವದೆಹಲಿಯಲ್ಲಿ 2,505 ಹೊಸ ಪ್ರಕರಣಗಳು ದಾಖಲಾಗಿವೆ. ರಾಷ್ಟ್ರ ರಾಜಧಾನಿಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 97,000ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇದುವರೆಗೂ ಮೃತಪಟ್ಟವರ ಸಂಖ್ಯೆ 3004.

English summary
In the view of current COVID 19 situation in Agra , historical monuments like Taj Mahal, Agra Fort, Akbar Tomb and others to remain closed until further orders as they fall in buffer zone areas, according to District Magistrate of Agra.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X