ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗುಜರಾತ್ ಆಸ್ಪತ್ರೆಯಲ್ಲಿ ಅಗ್ನಿ ಅವಘಡ: 18 ಕೊರೊನಾ ಸೋಂಕಿತರು ಸಾವು

|
Google Oneindia Kannada News

ಭರೂಚ್, ಮೇ 1: ಗುಜರಾತ್‌ನ ವೆಲ್‌ಫೇರ್ ಆಸ್ಪತ್ರೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ 18 ಮಂದಿ ಕೊರೊನಾ ಸೋಂಕಿತರು ಮೃತಪಟ್ಟಿದ್ದಾರೆ.

ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದ್ದ ವಿಶೇಷ ವಾರ್ಡ್‌ನಲ್ಲಿ ಶನಿವಾರ ಬೆಳಗಿನ ಜಾವ ಸುಮಾರು 1 ಗಂಟೆ ಸುಮಾರಿಗೆ ಅವಘಡ ಸಂಭವಿಸಿದೆ. ವಾರ್ಡ್‌ನಲ್ಲಿದ್ದ ಎಲ್ಲಾ ರೋಗಿಗಳು ಸುಟ್ಟ ಗಾಯಗಳಿಂದಾಗಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಥಾಣೆಯ ಖಾಸಗಿ ಆಸ್ಪತ್ರೆಯಲ್ಲಿ ಅಗ್ನಿ ಅನಾಹುತ; 4 ರೋಗಿಗಳ ಸಾವುಥಾಣೆಯ ಖಾಸಗಿ ಆಸ್ಪತ್ರೆಯಲ್ಲಿ ಅಗ್ನಿ ಅನಾಹುತ; 4 ರೋಗಿಗಳ ಸಾವು

ಬೆಂಕಿ ಕಾಣಿಸಿಕೊಂಡ ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸಿ ಹೆಚ್ಚಿನ ಅಪಾಯವನ್ನು ತಪ್ಪಿಸಿದ್ದಾರೆ, ಆದರೆ ಅಷ್ಟರೊಳಗೆ 18 ಮಂದಿ ಸೋಂಕಿತರು ಮೃತಪಟ್ಟಿದ್ದರು.

18 Covid Patients Dead In Fire At Gujarat Hospital: Report

ವೆಲ್‌ಫೇರ್ ಆಸ್ಪತ್ರೆಯಲ್ಲಿ ಒಟ್ಟು 50 ಮಂದಿ ಚಿಕಿತ್ಸೆ ಪಡೆಯುತ್ತಿದ್ದರು, ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿದ್ದ ವಿಶೇಷ ವಾರ್ಡ್‌ನಲ್ಲಿ ಮಾತ್ರ ಬೆಂಕಿ ಕಾಣಿಸಿಕೊಂಡಿತ್ತು. ಉಳಿದ ರೋಗಿಗಳು ಅಪಾಯದಿಂದ ಪಾರಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಗುಜರಾತ್ ರಾಜ್ಯದ ಭರೂಚ್ ಕೋವಿಡ್ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ತೀವ್ರ ಸಂತಾಪ ಸೂಚಿಸಿರುವ ಗುಜರಾತ್ ರಾಜ್ಯ ಮುಖ್ಯಮಂತ್ರಿ ವಿಜಯ್ ರುಪಾನಿಯವರು, ಮೃತರ ಕುಟುಂಬಕ್ಕೆ ರೂ.4 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭರೂಚ್ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ರೋಗಿಗಳು, ವೈದ್ಯರು ಹಾಗೂ ಆಸ್ಪತ್ರೆ ಸಿಬ್ಬಂದಿಗಳು ಪ್ರಾಣ ಕಳೆದುಕೊಂಡಿದ್ದು, ಮೃತರ ಕುಟುಂಬಕ್ಕೆ ತೀವ್ರ ಸಂತಾಪ ಸೂಚಿಸುತ್ತೇನೆ. ಅಲ್ಲದೆ ರಾಜ್ಯ ಸರ್ಕಾರದ ವತಿಯಿಂದ ಮೃತರ ಕುಟುಂಬಕ್ಕೆ ರೂ.4 ಲಕ್ಷ ಪರಿಹಾರ ನೀಡಲಾಗುತ್ತೆದ ಎಂದು ಹೇಳಿದ್ದಾರೆ.

English summary
At least 18 coronavirus patients died after a fire broke out at a hospital in Gujarat's Bharuch in the early hours on Saturday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X