• search
  • Live TV
ಅಹಮದಾಬಾದ್ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಸೂರತ್‌ನ ಕಾರ್ಖಾನೆಯಲ್ಲಿ ಅಗ್ನಿ ಅವಘಡ: ಇಬ್ಬರು ಸಾವು

|
Google Oneindia Kannada News

ಸೂರತ್, ಅಕ್ಟೋಬರ್ 18: ಸೂರತ್‌ನ ಮಾಸ್ಕ್ ತಯಾರಿಕಾ ಕಾರ್ಖಾನೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಇಬ್ಬರು ಮೃತಪಟ್ಟಿದ್ದು 125 ಮಂದಿಯನ್ನು ರಕ್ಷಿಸಲಾಗಿದೆ.
ಗುಜರಾತ್ ರಾಜ್ಯದ ಸೂರತ್ ನಲ್ಲಿರುವ ಪ್ಯಾಕೇಜಿಂಗ್ ಕಾರ್ಖಾನೆಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿರುವ ಘಟನೆ ಸೋಮವಾರ ನಡೆದಿದೆ.

ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದೆ ಎಂದು ತಿಳಿದುಬಂದಿದೆ.
ಸೂರತ್‌ನ ಕಡೋದರದ ವರೇಲಿ ಎಂಬಲ್ಲಿರುವ ಕಾರ್ಖಾನೆಯಲ್ಲಿ ಇಂದು ಬೆಳಗಿನ ಜಾವ ಅಗ್ನಿ ಅವಘಡ ಸಂಭವಿಸಿದ್ದು, ಸ್ಥಳಕ್ಕಾಗಮಿಸಿರುವ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಕಾರ್ಯಾಚರಣೆ ಆರಂಭಿಸಿದ್ದು, ಈ ವರೆಗು 125 ಮಂದಿಯನ್ನು ರಕ್ಷಣೆ ಮಾಡಿದ್ದಾರೆಂದು ತಿಳಿದುಬಂದಿದೆ.

ಥಾಣೆಯ ಖಾಸಗಿ ಆಸ್ಪತ್ರೆಯಲ್ಲಿ ಅಗ್ನಿ ಅನಾಹುತ; 4 ರೋಗಿಗಳ ಸಾವುಥಾಣೆಯ ಖಾಸಗಿ ಆಸ್ಪತ್ರೆಯಲ್ಲಿ ಅಗ್ನಿ ಅನಾಹುತ; 4 ರೋಗಿಗಳ ಸಾವು

ಇಲ್ಲಿನ ಪಾಲ್ಸಾನಾ ತಾಲೂಕಿನ ವಾರೆಲಿ ಗ್ರಾಮದಲ್ಲಿರುವ ಮಾಸ್ಕ್​​ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಇಬ್ಬರು ಮೃತಪಟ್ಟು 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಫ್ಯಾಕ್ಟರಿಯಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ತಪ್ಪಿಸಿಕೊಳ್ಳಲು ಪೈಪ್​​ ಹಿಡಿದು ಕೆಳಗಿಳಿಯುವ ಸಾಹಸ ಮಾಡಿದ್ದು, ಈ ವೇಳೆ ಕೆಳಗೆ ಬಿದ್ದು ಇಬ್ಬರು ಮೃತಪಟ್ಟು, ಹಲವರು ಗಾಯಗೊಂಡಿದ್ದಾರೆ.

ಇಂದು ಬೆಳಗ್ಗೆ ವಾರೆಲಿ ಗ್ರಾಮದ ಮಾಸ್ಕ್ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದರಿಂದ ಸುಮಾರು 200 ಕಾರ್ಮಿಕರು ಒಳಗೆ ಸಿಲುಕಿದ್ದರು. ಬೆಂಕಿಯಿಂದ ತಪ್ಪಿಸಿಕೊಳ್ಳಲು ಕಟ್ಟಡಕ್ಕೆ ಹಾಕಲಾಗಿದ್ದ ಪೈಪ್​ ಹಿಡಿದು ಕೆಳಗಿಳಿಯುವಾಗ ಇಬ್ಬರು ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಹಲವರಿಗೆ ಸುಟ್ಟ ಗಾಯವಾಗಿದೆ.

ವಿಷಯ ತಿಳಿದ ತಕ್ಷಣ ಅಗ್ನಿಶಾಮಕ ದಳ ಹಾಗೂ ಆ್ಯಂಬುಲೆನ್ಸ್​ಗಳು ಸ್ಥಳಕ್ಕಾಗಮಿಸಿತ್ತು. ಕಾರ್ಖಾನೆಯಲ್ಲಿ ದಟ್ಟ ಹೊಗೆಯಿಂದಾಗಿ ಕಾರ್ಯಾಚರಣೆಗೂ ಅಡ್ಡಿಯಾಗಿತ್ತು. ಇತ್ತ ಅಗ್ನಿ ಅವಘಡದ ಸುದ್ದಿ ತಿಳಿಯುತ್ತಿದ್ದಂತೆ ಸೂರತ್​​ನ ಮೇಯರ್ ಸೇರಿದಂತೆ ಉನ್ನತ ಅಧಿಕಾರಿಗಳು ಸ್ಥಳಕ್ಕಾಗಮಿಸಿದ್ದಾರೆ.

ಪ್ರಸ್ತುತ ಬೆಂಕಿ ಸಂಪೂರ್ಣ ಹತೋಟಿಗೆ ಬಂದಿದ್ದು, ಕಾರ್ಖಾನೆಯೊಳಗಿದ್ದ ಸುಮಾರು 200ಕ್ಕೂ ಹೆಚ್ಚು ಕಾರ್ಮಿಕರನ್ನು ರಕ್ಷಿಸಲಾಗಿದೆ.

ಪುಣೆಯಲ್ಲಿ ಜೂನ್‌ನಲ್ಲಿ ನಡೆದ ಅಗ್ನಿ ಅವಘಡದಲ್ಲಿ 17 ಮಂದಿ ಕಾರ್ಮಿಕರು ಸಾವು: ಮಹಾರಾಷ್ಟ್ರದ ಪುಣೆಯಲ್ಲಿನ ಕಾರ್ಖಾನೆಯೊಂದರಲ್ಲಿ ಜೂನ್‌ನಲ್ಲಿ ನಡೆದ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಕನಿಷ್ಟ 17 ಕಾರ್ಮಿಕರು ಸಾವನ್ನಪ್ಪಿ ಹಲವರು ನಾಪತ್ತೆಯಾಗಿದ್ದರು.

ಮೂಲಗಳ ಪ್ರಕಾರ ಪುಣೆಯ ಘೋಟ್ವಾಡೆ ಫಟಾ ಪ್ರದೇಶದಲ್ಲಿರುವ ಪ್ಲಾಸ್ಟಿಕ್ ಕಾರ್ಖಾನೆಯಲ್ಲಿ ಈ ದುರಂತ ಸಂಭವಿಸಿದ್ದು, ಘಟನೆಯಲ್ಲಿ ಕನಿಷ್ಟ 17 ಮಂದಿ ಕಾರ್ಮಿಕರು ಸಾವನ್ನಪ್ಪಿ ಹಲವಾರು ಕಾರ್ಮಿಕರು ನಾಪತ್ತೆಯಾಗಿದ್ದರು ವಿಷಯ ತಿಳಿದ ಕೂಡಲೇ 8ಕ್ಕೂ ಹೆಚ್ಚು ಅಗ್ನಿಶಾಮಕ ದಳ ವಾಹನಗಳು ಆಗಮಿಸಿ ಬೆಂಕಿ ನಂದಿಸುವ ಕಾರ್ಯ ಮಾಡಿತ್ತು.

ಮೂಲಗಳ ಪ್ರಕಾರ ಘಟನೆ ನಡೆದ ಸಂದರ್ಭದಲ್ಲಿ ಕಾರ್ಖಾನೆಯಲ್ಲಿ 37 ಮಂದಿ ಕಾರ್ಮಿಕರು ಇದ್ದರು. ಈ ಪೈಕಿ 20 ಮಂದಿಯನ್ನು ರಕ್ಷಣೆ ಮಾಡಲಾಗಿದೆ ಎಂದು ಹೇಳಲಾಗಿದೆ.

English summary
Two people died while around 125 were rescued, in a fire at a packaging factory in Kadodara's Vareli in Surat, Gujarat, early morning on Monday, news agency ANI reported.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X