ಗುಜರಾತ್‌: ಪ್ರಧಾನಿ ಮೋದಿ ಭದ್ರತೆಗೆ ನಿಯೋಜನೆಗೊಂಡಿದ್ದ 23 ಪೊಲೀಸರಿಗೆ ಕೊರೊನಾ ಸೋಂಕು

ಕೆವಾಡಿಯಾ, ಅಕ್ಟೋಬರ್ 30: ಪ್ರಧಾನಿ ನರೇಂದ್ರ ಮೋದಿ ಎರಡು ದಿನಗಳ ಕಾಲ ಗುಜರಾತ್ ಪ್ರವಾಸ ಕೈಗೊಂಡಿದ್ದು, ಅವರ ಭದ್ರತೆಗಾಗಿ ನಿಯೋಜನೆಗೊಂಡಿದ್ದವರಲ್ಲಿ 23 ಮಂದಿ ಪೊಲೀಸರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.

ಎಲ್ಲಾ ಕಾರ್ಯಕ್ರಮಗಳಿಗಾಗಿ ಗುಜರಾತ್ ಸರ್ಕಾರ ಸುಮಾರು 5 ಸಾವಿರಕ್ಕೂ ಅಧಿಕ ಪೊಲೀಸರನ್ನು ನಿಯೋಜನೆ ಮಾಡಿದ್ದು, ಈ ಪೈಕಿ 23 ಮಂದಿ ಪೊಲೀಸರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ಪ್ರಧಾನಿ ಮೋದಿ ಕಾರ್ಯಕ್ರಮದ ಹಿನ್ನಲೆಯಲ್ಲಿ ಸಿಬ್ಬಂದಿಗಳನ್ನು ಕೊರೊನಾ ಪರೀಕ್ಷೆಗೊಳಪಡಿಸಲಾಗಿತ್ತು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಪ್ರಧಾನಿ ಮೋದಿ ಗುಜರಾತ್ ನಲ್ಲಿ 2 ದಿನಗಳ ಕಾಲ ಉಳಿಯಲಿದ್ದು, ಕೆವಡಿಯಾ ಮತ್ತು ಅಹಮದಾಬಾದ್‌ ನಡುವೆ 'ಸೀಪ್ಲೇನ್‌' ಸೇವೆ ಉದ್ಘಾಟಿಸಲಿದ್ದಾರೆ.

23 Police Test COVID-19 Positive At Kevadiya Ahead Of PM Visit

ಇದೇ ವೇಳೆ 'ಸ್ಟ್ಯಾಚ್ಯು ಆಫ್ ಯುನಿಟಿ'- ವಲಭಭಾಯಿ ಪಟೇಲ್ ಅವರ ಪುತ್ಥಳಿಯ ಸ್ಥಳಕ್ಕೆ ಭೇಟಿ ಕೆಲವು ಪ್ರವಾಸೋದ್ಯಮಕ್ಕೆ ಸಂಬಂಧಿಸಿದ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ.

ಏಕತಾ ಪ್ರತಿಮೆ ಇರುವ ನರ್ಮದಾ ಜಿಲ್ಲೆಯ ಕೆವಾಡಿಯಾ ಗ್ರಾಮದಲ್ಲಿ ಎಸ್ ಆರ್ ಪಿ ಸೇರಿದಂತೆ 5 ಸಾವಿರಕ್ಕೂ ಅಧಿಕ ಪೊಲೀಸರನ್ನು ನಿಯೋಜನೆ ಮಾಡಲಾಗಿದ್ದು, ಈ ಪೈಕಿ 3,651 ಮಂದಿ ಪೊಲೀಸರ ಕೊವಿಡ್ ಪರೀಕ್ಷೆ ನಡೆಸಲಾಗಿದೆ.

ಈ ಪೈಕಿ 23 ಮಂದಿ ಪೊಲೀಸರಿಗೆ ಸೋಂಕು ದೃಢಪಟ್ಟಿದೆ. ಪ್ರಸ್ತುತ ಸೋಂಕಿತ ಪೊಲೀಸರನ್ನು ರಾಜ್ಪಿಪಾಲಾ ಪಟ್ಟಣದ ಕೋವಿಡ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇದೇ ಎಕತಾ ಪ್ರತಿಮೆ ಬಳಿ ಕರ್ತವ್ಯಕ್ಕೆ ನಿಯೋಜನೆಯಾಗಿದ್ದ 5 ಮಂದಿ ಪೊಲೀಸರಲ್ಲಿ ಇದೇ ಅಕ್ಟೋಬರ್ 27 ಸೋಂಕು ದೃಢಪಟ್ಟಿತ್ತು.

Recommended Video

      car allu mask ಹಾಕ್ಲೇಬೇಕಂತೆ!! ಇಲ್ಲಾ ಅಂದ್ರೆ ಫೈನ್!! | Oneindia kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+