• search
  • Live TV
ಅಹಮದಾಬಾದ್ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಗುಜರಾತ್‌ಗೆ ಬಂದಿಳಿದ ಎರಡನೇ ಹಂತದ ರಫೇಲ್ ಯುದ್ಧ ವಿಮಾನಗಳು

|

ಅಹಮದಾಬಾದ್, ನವೆಂಬರ್ 05: ಎರಡನೇ ಹಂತದ ರಫೇಲ್ 3 ಯುದ್ಧ ವಿಮಾನಗಳು ಗುಜರಾತ್‌ನ ಜಾಮ್ನಗರ್ ಏರ್‌ಬೇಸ್‌ಗೆ ಬಂದಿಳಿದಿದೆ.

ಎರಡನೇ ಹಂತದ ರಫೇಲ್ ಯುದ್ಧ ವಿಮಾನಗಳು ಬುಧವಾರ ರಾತ್ರಿ ಭಾರತಕ್ಕೆ ಬಂದಿಳಿವೆ. ಮೂರು ರಫೇಲ್ ಯುದ್ಧ ವಿಮಾನಗಳು ಫ್ರಾನ್ಸ್ ನಿಂದ ತಡೆ ರಹಿತ ಹಾರಾಟದೊಂದಿಗೆ ಬುಧವಾರ ರಾತ್ರಿ 8.14ಕ್ಕೆ ಭಾರತ ಪ್ರವೇಶಿಸಿರುವುದಾಗಿ ಭಾರತೀಯ ವಾಯುಪಡೆ ಟ್ವೀಟ್ ಮಾಡಿದೆ.

ಭಾರತೀಯ ವಾಯುಪಡೆ: ಮತ್ತೆ 3 ರಫೇಲ್ ಯುದ್ಧ ವಿಮಾನಗಳ ಸೇರ್ಪಡೆ

ಚೀನಾದೊಂದಿಗೆ ಗಡಿ ಸಂಘರ್ಷ ಮುಂದುವರೆದಿರುವಂತೆ ಮತ್ತೆ ಮೂರು ರಫೇಲ್ ಯುದ್ಧ ವಿಮಾನಗಳು ಭಾರತಕ್ಕೆ ಬಂದಿರುವುದು ಭಾರತೀಯ ಸೇನೆಯ ಬಲವನ್ನು ಮತ್ತಷ್ಟು ಗಟ್ಟಿಗೊಳಿಸಿದೆ.

ಎರಡನೇ ಹಂತದ ರಫೇಲ್ ಯುದ್ಧ ವಿಮಾನಗಳಿಗೆ ಫ್ರೆಂಚ್ ವಾಯುಪಡೆ ನೀಡಿರುವ ಸಹಕಾರವನ್ನು ಭಾರತೀಯ ವಾಯುಪಡೆ ಪ್ರಶಂಸಿಸಿದೆ. ಎರಡನೇ ಹಂತದಲ್ಲಿ ಬಂದಿರುವ ಮೂರು ರಫೇಲ್ ಯುದ್ಧ ವಿಮಾನಗಳೊಂದಿಗೆ ಭಾರತೀಯ ವಾಯುಪಡೆ ಇದೀಗ ಎಂಟು ರಫೇಲ್ ಯುದ್ಧ ವಿಮಾನಗಳನ್ನು ಹೊಂದಂತಾಗಿದೆ.

ಮೂರು ಯುದ್ಧ ವಿಮಾನಗಳು ಫ್ರಾನ್ಸ್ ನಿಂದ ಎಂಟು ಗಂಟೆಗಳ ಹಾರಾಟ ನಡೆಸಿ ಐಎಎಫ್ ವಾಯುನೆಲೆಗೆ ಬಂದಿಳಿದಿವೆ. ಅವುಗಳು ಸುಮಾರು 3700 ನಾಟಿಕಲ್ ಮೈಲಿಗಳನ್ನು ಕ್ರಮಿಸಿರುವುದಾಗಿ ಭಾರತೀಯ ವಾಯುಪಡೆ ಹೇಳಿದೆ.

ಫ್ರಾನ್ಸ್ ನಿಂದ 59 ಸಾವಿರ ಕೋಟಿ ವೆಚ್ಚದಲ್ಲಿ 36 ಯುದ್ಧ ವಿಮಾನಗಳನ್ನು ಖರೀದಿಸಿಲು ಭಾರತ ಸರ್ಕಾರ ಫ್ರಾನ್ಸ್ ನೊಂದಿಗೆ ಒಪ್ಪಂದ ಮಾಡಿಕೊಂಡಿತ್ತು. ಸುರಕ್ಷಿತವಾಗಿ ರಫೇಲ್ ಯುದ್ಧ ವಿಮಾನಗಳು ಭಾರತಕ್ಕೆ ಬಂದಿರುವುದಕ್ಕೆ ಭಾರತೀಯ ವಾಯುಪಡೆಯನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅಭಿನಂದಿಸಿದ್ದಾರೆ.

English summary
The second batch of three Rafale aircraft landed at Jamnagar Air Base in Gujarat last evening.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X