ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking; ಗುಜರಾತ್‌ನಲ್ಲಿ ಬಿಜೆಪಿ ಸೇರಿದ 500 ವೈದ್ಯರು

|
Google Oneindia Kannada News

ಅಹಮದಾಬಾದ್, ಮೇ 08; ಗುಜರಾತ್ ರಾಜ್ಯದ ರಾಜಕೀಯದಲ್ಲಿ ಚಟುವಟಿಕೆಗಳು ಚುರುಕಾಗಿವೆ. ರಾಜ್ಯ ಬಿಜೆಪಿಗೆ ವೈದ್ಯರು ಬಲ ತುಂಬಿದ್ದಾರೆ. ವಿಧಾನಸಭೆ ಚುನಾವಣೆಗೆ ಕೆಲವು ತಿಂಗಳು ಬಾಕಿ ಇರುವಾಗಲೇ 500 ವೈದ್ಯರು ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಭಾನುವಾರ ಗಾಂಧಿನಗರದಲ್ಲಿ ನಡೆದ ಸಮಾರಂಭದಲ್ಲಿ 500 ವೈದ್ಯರು ಬಿಜೆಪಿ ಸೇರಿದರು. ಮುಖ್ಯಮಂತ್ರಿ ಭೂಪೇಂದ್ರ ಪಟೇಲ್‌ ಮತ್ತು ರಾಜ್ಯ ಬಿಜೆಪಿ ಅಧ್ಯಕ್ಷ ಸಿ. ಆರ್. ಪಾಟೀಲ್ ವೈದ್ಯರನ್ನು ಬರಮಾಡಿಕೊಂಡರು.

ಗುಜರಾತ್ ರಾಜ್ಯದ ವಿಧಾನಸಭೆ ಚುನಾವಣೆ ಈ ವರ್ಷದ ಡಿಸೆಂಬರ್‌ನಲ್ಲಿ ನಡೆಯಲಿದೆ. ಬಿಜೆಪಿ ಈಗಾಗಲೇ ಚುನಾವಣಾ ಸಿದ್ಧತೆ ಆರಂಭಿಸಿದೆ. ಪ್ರಧಾನಿ ನರೇಂದ್ರ ಮೋದಿ ತವರು ರಾಜ್ಯದಲ್ಲಿ ಮತ್ತೆ ಅಧಿಕಾರ ಹಿಡಿಯಬೇಕು ಎಂದು ಪಕ್ಷ ತಂತ್ರ ರೂಪಿಸುತ್ತಿದೆ.

500 Doctors Joins BJP In Gujarat

ಇಂತಹ ಸಮಯದಲ್ಲಿಯೇ ವೈದ್ಯರು ಪಕ್ಷ ಸೇರಿರುವುದು ಪಕ್ಷದ ಬಲ ಹೆಚ್ಚಿಸಿದೆ. ಪ್ರಧಾನಿ ನರೇಂದ್ರ ಮೋದಿ ತಿಂಗಳಿಗೊಮ್ಮೆ ರಾಜ್ಯಕ್ಕೆ ಭೇಟಿ ನೀಡುವ ಮೂಲಕ ಚುನಾವಣಾ ಕಾವು ಹೆಚ್ಚಿಸುತ್ತಿದ್ದಾರೆ.

ಗುಜರಾತ್‌ ರಾಜ್ಯದ ಈ ಬಾರಿಯ ಚುನಾವಣೆ ಕುತೂಹಲಕ್ಕೆ ಕಾರಣವಾಗಿದೆ. ರಾಜ್ಯದ ಪ್ರತಿಪಕ್ಷ ಕಾಂಗ್ರೆಸ್‌ ಜೊತೆಗೆ ಬಿಜೆಪಿಗೆ ಪೈಪೋಟಿ ನೀಡಲು ಆಮ್‌ ಆದ್ಮಿ ಪಕ್ಷ ಸಹ ಸಿದ್ಧವಾಗುತ್ತಿದೆ. ಪಕ್ಷ ಈ ಬಾರಿಯ ಚುನಾವಣೆಗೆ ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತಿದೆ.

English summary
About 500 doctors joined the Bharatiya Janata Party (BJP) in the presence of CM Bhupendra Patel at Gujarat.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X