ಗುಜರಾತ್‌ನಲ್ಲಿ ಎಲ್‌ಪಿಜಿ ಸಿಲಿಂಡರ್ ಸ್ಫೋಟ: 7 ಮಂದಿ ದುರ್ಮರಣ

ಅಹಮದಾಬಾದ್, ಜುಲೈ 24: ಎಲ್‌ಪಿಜಿ ಸಿಲಿಂಡರ್ ಸ್ಫೋಟಗೊಂಡು 7 ಮಂದಿ ಮೃತಪಟ್ಟಿರುವ ಘಟನೆ ಗುಜರಾತ್‌ನ ಅಹಮದಾಬಾದ್‌ ಹೊರವಲಯದ ಕಾರ್ಖಾನೆಯೊಂದರಲ್ಲಿ ನಡೆದಿದೆ.

ಘಟನೆ ವೇಳೆ ಕೋಣೆಯಲ್ಲಿ ಮಹಿಳೆಯರು, ಮಕ್ಕಳು ಸೇರಿ ಒಟ್ಟು 10 ಮಂದಿ ಇದ್ದು, ಅವರಲ್ಲಿ 7 ಮಂದಿ ಮೃತಪಟ್ಟಿದ್ದಾರೆ. ಇನ್ನೂ ಮೂವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಮೂವರ ಸ್ಥಿತಿಯೂ ಗಂಭೀರವಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಮೃತಪಟ್ಟವರು ಮಧ್ಯಪ್ರದೇಶ ಮೂಲದವರೆಂದು ಹೇಳಲಾಗುತ್ತಿದ್ದು, ಘಟನೆಗೆ ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ. ಅಲ್ಲದೆ, ಮೃತರ ಕುಟುಂಬಕ್ಕೆ ತಲಾ ರೂ.4 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ.

7 From MP Killed In Fire, Explosion Caused By LPG Cylinder Leakage In Gujarat

ದುರ್ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡವನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಕಳೆದ ಎರಡು ದಿನಗಳಲ್ಲಿ ಒಟ್ಟು ಏಳು ಮಂದಿ ಮೃತಪಟ್ಟಿದ್ದಾರೆ ಎಂದು ಅಸ್ಲಾಲಿ ಪೊಲೀಸ್​ ಠಾಣೆಯ ಸಬ್​ ಇನ್​ಸ್ಪೆಕ್ಟರ್​ ಎಸ್.ಎಸ್.ಗಮೇಟಿ ಶುಕ್ರವಾರ ಮಾಹಿತಿ ನೀಡಿದ್ದಾರೆ.

ಕಾರ್ಖಾನೆಯಲ್ಲಿ ಹಲವು ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಕಾರ್ಮಿಕರ ಕುಟುಂಬದ ಸದಸ್ಯರು ಕಾರ್ಖಾನೆಯಲ್ಲಿದ್ದ ಒಂದು ಸಣ್ಣ ಕೋಣೆಯಲ್ಲಿ ಮಲಗಿದ್ದರು. ಈ ಕೋಣೆಯಲ್ಲಿದ್ದ ಎಲ್‌ಪಿಜಿ ಸಿಲಿಂಡರ್ ಇದ್ದಕ್ಕಿದ್ದಂತೆ ಸೋರಿಕೆಯಾಗಿದೆ.

ಬಳಿಕ ನೆರೆಮನೆಯವರು ಬಾಗಿಲು ತಟ್ಟಿ ಮಲಗಿದ್ದವರನ್ನು ಎಬ್ಬಿಸಿದ್ದಾರೆ. ಕೆಲವರು ಬಾಗಿಲು ತೆಗೆಯುವ ವೇಳೆ ಲೈಟ್ ಆನ್ ಮಾಡಿದ್ದು, ಈ ವೇಳೆ ಸಿಲಿಂಡರ್ ಸ್ಫೋಟಗೊಂಡಿದೆ.

Recommended Video

      Shikhar Dhawan ಹಾಗು Umpireಗಳ ನಡುವೆ ವಾಗ್ವಾದ ನಡೆದಿದ್ದೇಕೆ | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+