ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊವಿಡ್ ಆಸ್ಪತ್ರೆಯ ಐಸಿಯುನಲ್ಲಿ ಬೆಂಕಿ ಅವಘಡ, 8 ರೋಗಿಗಳು ಸಾವು

|
Google Oneindia Kannada News

ಅಹಮದಬಾದ್, ಆಗಸ್ಟ್ 6: ಗುಜರಾತ್‌ನ ಕೊವಿಡ್ ಆಸ್ಪತ್ರೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಈ ಘಟನೆಯಲ್ಲಿ 8 ಮಂದಿ ರೋಗಿಗಳು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ನವರಂಗ್ ಪುರದಲ್ಲಿರುವ ಶ್ರೀ ಆಸ್ಪತ್ರೆಯಲ್ಲಿ ಇಂದು ಮುಂಜಾನೆ ಬೆಂಕಿ ಕಾಣಿಸಿಕೊಂಡಿದೆ. 40ಕ್ಕೂ ಅಧಿಕ ರೋಗಿಗಳನ್ನು ಬೇರೆ ಕಡೆಗೆ ಸ್ಥಳಾಂತರಿಸಲಾಗಿದೆ. ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ (ಐಸಿಯು) ಬೆಂಕಿ ಕಾಣಿಸಿಕೊಂಡಿದೆ ಎಂದು ಹೇಳಲಾಗಿದೆ.

ನವರಂಗಪುರದ ಶ್ರೀ ಆಸ್ಪತ್ರೆಯನ್ನು ಕೊವಿಡ್ ರೋಗಿಗಳ ಚಿಕಿತ್ಸೆಗಾಗಿ ಮೀಸಲಾಗಿರಿಸಲಾಗಿತ್ತು. ಬೆಂಕಿಯ ಅವಘಡಕ್ಕೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ. ಪ್ರಕರಣದ ತನಿಖೆ ನಡೆಯುತ್ತಿದೆ.

8 Patients Dead After Fire Breaks Out At A Hospital In Ahmedabad

ಅಹಮದಾಬಾದ್‌ನ ಶ್ರೀ ಆಸ್ಪತ್ರೆಯಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಸಂಬಂಧ ಸಿಎಂ ವಿಜಯ್ ರೂಪಾನಿ ತನಿಖೆಗೆ ಆದೇಶಿಸಿದ್ದಾರೆ. ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ಗೃಹ ಇಲಾಖೆ) ಸಂಗೀತ ಸಿಂಗ್ ನೇತೃತ್ವದಲ್ಲಿ ತನಿಖೆಗೆ ನಡೆಯಲಿದ್ದು, 3 ದಿನಗಳಲ್ಲಿ ವರದಿ ನೀಡುವಂತೆ ಸಿಎಂ ಸೂಚಿಸಿದ್ದಾರೆ.

ಈ ಘಟನೆ ಬಗ್ಗೆ ಪ್ರಧಾನಿ ಮೋದಿ ಟ್ವೀಟ್ ಮಾಡಿ ಪ್ರತಿಕ್ರಿಯಿಸಿದ್ದು 'ಅಹಮದಾಬಾದ್‌ನಲ್ಲಿ ಆಸ್ಪತ್ರೆಯ ಬೆಂಕಿ ದುರಂತ ಬೇಸರವಾಗಿದೆ. ದುಃಖಿತ ಕುಟುಂಬಗಳಿಗೆ ಸಂತಾಪ ಸೂಚಿಸಿವೆ. ಗಾಯಗೊಂಡವರು ಶೀಘ್ರದಲ್ಲೇ ಚೇತರಿಸಿಕೊಳ್ಳಲಿ. ಪರಿಸ್ಥಿತಿಗೆ ಸಂಬಂಧಿಸಿದಂತೆ ಸಿಎಂ ಮತ್ತು ಮೇಯರ್ ಅವರೊಂದಿಗೆ ಮಾತನಾಡಿದ್ದೇನೆ. ಸಂತ್ರಸ್ತರಿಗೆ ಆಡಳಿತವು ಎಲ್ಲ ರೀತಿಯ ಸಹಾಯವನ್ನು ನೀಡುತ್ತದೆ' ಎಂದಿದ್ದಾರೆ.

ಅಹಮದಾಬಾದ್‌ನಲ್ಲಿ ಆಸ್ಪತ್ರೆಯ ಬೆಂಕಿಯಿಂದ ಪ್ರಾಣ ಕಳೆದುಕೊಂಡವರ ಕುಟುಂಬಕ್ಕೆ ಪಿಎಂ ಫಂಡ್‌ನಿಂದ ತಲಾ 2 ಲಕ್ಷ ಹಾಗೂ ಗಾಯಗೊಂಡವರಿಗೆ ತಲಾ 50,000 ರೂ ಪರಿಹಾರ ಘೋಷಿಸಲಾಗಿದೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಿ.....

English summary
Gujarat: Eight people died in the fire which broke out at Shrey Hospital in Ahmedabad this morning.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X