ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸೂರತ್‌ನಲ್ಲಿ ವಲಸೆ ಕಾರ್ಮಿಕರು ಮತ್ತು ಪೊಲೀಸರ ನಡುವೆ ಸಂಘರ್ಷ

|
Google Oneindia Kannada News

ಅಹಮದಬಾದ್, ಮೇ 4: ಲಾಕ್‌ಡೌನ್‌ನಲ್ಲಿ ಸಿಲುಕೊಂಡಿದ್ದ ವಲಸೆ ಕಾರ್ಮಿಕರು ಸ್ವಂತ ಊರುಗಳಿಗೆ ತೆರಳಲು ಕೇಂದ್ರ ಸರ್ಕಾರ ಅನುಮತಿ ನೀಡಿತ್ತು. ಈ ಹಿನ್ನೆಲೆಯಲ್ಲಿ ದೇಶದ ಹಲವು ಪ್ರಮುಖ ನಗರಗಳಲ್ಲಿ ಸಿಲುಕೊಂಡಿದ್ದ ಕಾರ್ಮಿಕರು ವಿಶೇಷ ಬಸ್ ಮತ್ತು ರೈಲಿನ ಮೂಲಕ ಊರುಗಳು ಸೇರುತ್ತಿದ್ದಾರೆ.

ಆದರೆ, ಗುಜರಾತ್‌ನ ಸೂರತ್‌ನಲ್ಲಿ ವಲಸೆ ಕಾರ್ಮಿಕರಿಗೆ ಸಾರಿಗೆ ವ್ಯವಸ್ಥೆ ಇರಲಿಲ್ಲ ಎಂಬ ಕಾರಣಕ್ಕೆ ಪೊಲೀಸರ ವಿರುದ್ದ ಮುಗಿಬಿದ್ದಿರುವ ಘಟನೆ ವರದಿಯಾಗಿದೆ.

A Clash Between Migrant Workers And Police In Surat

ಸೋಮವಾರ, ಸೂರತ್‌ನ ಕಡೋದರಾ ಪ್ರದೇಶದಲ್ಲಿ, ನೂರಾರು ಕಾರ್ಮಿಕರು ತಮ್ಮ ಊರುಗಳಿಗೆ ಮರಳಲು ಅನುಮತಿ ನೀಡುವಂತೆ ಒತ್ತಾಯಿಸಿ ರಸ್ತೆಗಳಿಗೆ ಬಂದಿದ್ದಾರೆ. ಜನಸಂಖ್ಯೆ ಹೆಚ್ಚಾದ ಕಾರಣ ಅವರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡಬೇಕಾಯಿತು. ಆದರೆ, ಪರಿಸ್ಥಿತಿ ಗಂಭೀರವಾಗುತ್ತಿದ್ದಂತೆ ಪೊಲೀಸರು ಮತ್ತು ವಲಸೆ ಕಾರ್ಮಿಕರ ನಡುವೆ ಸಂಘರ್ಷ ಉಂಟಾಯಿತು.

ಜನರನ್ನು ಚದುರಿಸಲು ಪೊಲೀಸರು ಅಶ್ರುವಾಯು ಸಿಡಿಸಿದರು. ಲಾಠಿ ಪ್ರಹಾರ ಮಾಡಿದರು. ಮತ್ತೊಂದೆಡೆ ವಲಸೆ ಕಾರ್ಮಿಕರು ಕೂಡ ಪೊಲೀಸರ ಮೇಲೆ ಕಲ್ಲು ತೂರಾಟ ಮಾಡಿದ್ದಾರೆ.

ಬಳಿಕ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಮಾಹಿತಿ ನೀಡಿದ್ದಾರೆ. ಗುಜರಾತ್‌ನಲ್ಲಿ ಈವರೆಗೂ 5.804 ಕೊರೊನಾ ಕೇಸ್‌ಗಳು ದಾಖಲಾಗಿದೆ. 319 ಜನರು ಪ್ರಾಣ ಕಳೆದುಕೊಂಡಿದ್ದಾರೆ.

English summary
A clash erupts between migrant workers & police in Surat. The workers are demanding that they be sent back to their native places.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X