• search
  • Live TV
ಅಹಮದಾಬಾದ್ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಸೂರತ್ ನಲ್ಲಿರುವ ಓಎನ್ ಜಿಸಿ ಸ್ಥಾವರದಲ್ಲಿ ಭಾರಿ ಸ್ಫೋಟ

|

ಸೂರತ್, ಸಪ್ಟೆಂಬರ್.24: ಗುಜರಾತ್ ನ ಸೂರತ್ ನಲ್ಲಿರುವ ಆಯಿಲ್ ನ್ಯಾಚುರಲ್ ಗ್ಯಾಸ್ ಕಾರ್ಪೋರೇಷನ್(ONGC) ಸ್ಥಾವರದಲ್ಲಿ ಗುರುವಾರ ಮಧ್ಯರಾತ್ರಿ ಭಾರಿ ಸ್ಫೋಟವೊಂದು ಸಂಭವಿಸಿದ್ದು, ಬೆಂಕಿ ಹೊತ್ತಿಕೊಂಡ ಘಟನೆ ಸಂಭವಿಸಿದೆ.

ಮಧ್ಯರಾತ್ರಿ 2.30ರ ಸಂದರ್ಭದಲ್ಲಿ ಓಎನ್ ಜಿಸಿ ಘಟಕದಲ್ಲಿ ಸ್ಫೋಟದ ಸದ್ದು ಸುಮಾರು 4 ಕಿಲೋ ಮೀಟರ್ ದೂರದವರೆಗೂ ಕೇಳಿದೆ. ನೋಡನೋಡುತ್ತಿದ್ದಂತೆ ಬೆಂಕಿನ ಕೆನ್ನಾಲಿಗೆ ಸ್ಥಾವರದಲ್ಲಿ ಚಾಚಿಕೊಂಡಿದ್ದು, ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

25 ಜನರನ್ನು ಬಲಿಪಡೆದ ಪೆಟ್ರೋಲ್ ಟ್ಯಾಂಕರ್ ಅಪಘಾತ

"ಸೂರತ್ ನಲ್ಲಿರುವ ಓಎನ್ ಜಿಸಿಯ ಹಜಿರಾ ಸ್ಥಾವರದಲ್ಲಿ ಮಧ್ಯರಾತ್ರಿ 3 ಗಂಟೆಗೆ 3 ಸ್ಫೋಟಗಳು ಸಂಭವಿಸಿದ್ದು, ಬೆಂಕಿ ಹೊತ್ತಿಕೊಳ್ಳಲು ಕಾರಣವಾಗಿದೆ. ಅಗ್ನಿಶಾಮಕ ದಳ ಸಿಬ್ಬಂದಿಯ ಯಶಸ್ವಿ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದ್ದಾರೆ. ಇದುವರೆಗೂ ಯಾವುದೇ ಸಾವು-ನೋವಿನ ಕುರಿತು ಮಾಹಿತಿ ಸಿಕ್ಕಿಲ್ಲ ಎಂದು ಸೂರತ್ ಜಿಲ್ಲಾಧಿಕಾರಿ ಡಾ. ಧವಲ್ ಪಟೇಲ್ ಮಾಹಿತಿ ನೀಡಿದ್ದಾರೆ.

ಸಾವು-ನೋವಿನ ಬಗ್ಗೆ ವರದಿಯಾಗಿಲ್ಲ:

ಸೂರತ್ ನಲ್ಲಿರುವ ಓಎನ್ ಜಿಸಿ ಸ್ಥಾವರದಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಯಾವುದೇ ಆಸ್ತಿ-ಪಾಸ್ತಿ ಮತ್ತು ಪ್ರಾಣ ಹಾನಿಯ ಬಗ್ಗೆ ಮಾಹಿತಿ ಸಿಕ್ಕಿಲ್ಲ. ಅಲ್ಲದೇ ಓಎನ್ ಜಿಸಿ ಸ್ಥಾವರದಲ್ಲಿ ಸ್ಫೋಟಕ್ಕೆ ಮತ್ತು ಬೆಂಕಿ ಹೊತ್ತಿಕೊಳ್ಳುವುದಕ್ಕೆ ಕಾರಣವೇನು ಎನ್ನುವುದರ ಬಗ್ಗೆ ಇನ್ನಷ್ಟೇ ತಿಳಿದು ಬರಬೇಕಿದೆ. ಓಎನ್ ಜಿಸಿ ಸ್ಥಾವರದಲ್ಲಿ ಸ್ಫೋಟ ಸಂಭವಿಸಿದಾಗ ಬೆಂಕಿನ ಕೆನ್ನಾಲಿಗೆ ಆಕಾಶದ ಎತ್ತರಕ್ಕೆ ಚಿಮ್ಮಿದ ದೃಶ್ಯವು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ.

English summary
A Fire Breaks Out At An Oil And Natural Gas Corporation Plant In Surat.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X