ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking; ಜಿಗ್ನೇಶ್ ಮೇವಾನಿಗೆ ಜಾಮೀನು ನೀಡಿದ ಅಸ್ಸಾಂ ಕೋರ್ಟ್‌

|
Google Oneindia Kannada News

ಅಹಮದಾಬಾದ್, ಏಪ್ರಿಲ್ 29 ; ಅಸ್ಸಾಂನ ನ್ಯಾಯಾಲಯ ಗುಜರಾತ್‌ನ ಶಾಸಕ ಜಿಗ್ನೇಶ್ ಮೇವಾನಿಗೆ ಜಾಮೀನು ಮಂಜೂರು ಮಾಡಿದೆ. ಏಪ್ರಿಲ್ 25ರಂದು ಒಂದು ಪ್ರಕರಣದಲ್ಲಿ ಜಾಮೀನು ಸಿಕ್ಕಿದ ತಕ್ಷಣ ಮತ್ತೊಂದು ಪ್ರಕರಣದಲ್ಲಿ ಅವರನ್ನು ಬಂಧಿಸಲಾಗಿತ್ತು.

ಮಹಿಳಾ ಪೊಲೀಸ್ ಅಧಿಕಾರಿ ಮೇಲೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ಜಿಗ್ನೇಶ್ ಮೇವಾನಿಗೆ ಶುಕ್ರವಾರ ಅಸ್ಸಾಂ ನ್ಯಾಯಾಲಯ ಜಾಮೀನು ನೀಡಿದೆ. ಮೋದಿ ವಿರುದ್ಧ ಟ್ವೀಟ್‌ಗೆ ಸಂಬಂಧಿಸಿದಂತೆ ಅವರನ್ನು ಪೊಲೀಸರು ಬಂಧಿಸಿದ್ದರು.

Breaking; ಶಾಸಕ ಜಿಗ್ನೇಶ್ ಮೇವಾನಿಗೆ ಜಾಮೀನು ಮಂಜೂರುBreaking; ಶಾಸಕ ಜಿಗ್ನೇಶ್ ಮೇವಾನಿಗೆ ಜಾಮೀನು ಮಂಜೂರು

Assam Court Grants Bail To Gujarat MLA Jignesh Mevani

ಏಪ್ರಿಲ್ 25ರಂದು ಈ ಪ್ರಕರಣದಲ್ಲಿ ಜಾಮೀನು ಸಿಕ್ಕಿತ್ತು. ಬಳಿಕ ಅಸ್ಸಾಂ ಪೊಲೀಸರು ಮಹಿಳಾ ಪೊಲೀಸ್ ಅಧಿಕಾರಿ ಮೇಲೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ಬಂಧಿಸಿದ್ದರು. ಇಂದು ಈ ಪ್ರಕರಣದಲ್ಲಿಯೂ ಜಾಮೀನು ಸಿಕ್ಕಿದೆ.

ಜಾಮೀನು ಪಡೆದ ಬೆನ್ನಲ್ಲೇ ಶಾಸಕ ಜಿಗ್ನೇಶ್ ಮೇವಾನಿ ಮತ್ತೆ ಬಂಧನಜಾಮೀನು ಪಡೆದ ಬೆನ್ನಲ್ಲೇ ಶಾಸಕ ಜಿಗ್ನೇಶ್ ಮೇವಾನಿ ಮತ್ತೆ ಬಂಧನ

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಟ್ವೀಟ್ ಮಾಡಿದ ಪ್ರಕರಣದಲ್ಲಿ ಅಸ್ಸಾಂನ ಬರ್ಪೆಟಾ ಜಿಲ್ಲೆಯಲ್ಲಿ ಶಾಸಕ ಜಿಗ್ನೇಶ್ ಮೇವಾನಿ ವಿರುದ್ಧ ದೂರು ದಾಖಲಾಗಿತ್ತು. ಅಸ್ಸಾಂ ಪೊಲೀಸರು ಏಪ್ರಿಲ್ 21ರಂದು ಗುಜರಾತ್‌ನಲ್ಲಿ ಮೇವಾನಿ ಬಂಧಿಸಿದ್ದರು. ಏಪ್ರಿಲ್ 25ರಂದು ಈ ಪ್ರಕರಣದಲ್ಲಿ ಅಸ್ಸಾಂ ಕೋರ್ಟ್‌ ಜಾಮೀನು ನೀಡಿತ್ತು.

ಗುಜರಾತ್‌ ಸಿಎಂ ರಾಜೀನಾಮೆ ಬಗ್ಗೆ ಜಿಗ್ನೇಶ್‌ ಮೆವಾನಿ ಹೇಳಿದ್ದೇನು?ಗುಜರಾತ್‌ ಸಿಎಂ ರಾಜೀನಾಮೆ ಬಗ್ಗೆ ಜಿಗ್ನೇಶ್‌ ಮೆವಾನಿ ಹೇಳಿದ್ದೇನು?

ಬಳಿಕ ಪೊಲೀಸರು ಮಹಿಳಾ ಪೊಲೀಸ್ ಅಧಿಕಾರಿ ಮೇಲೆ ಹಲ್ಲೆ ಮಾಡಿದ್ದ ಪ್ರಕರಣದಲ್ಲಿ ಬಂಧಿಸಿದ್ದರು. ಶುಕ್ರವಾರ ಈ ಪ್ರಕರಣದಲ್ಲಿ ಅಸ್ಸಾಂ ಕೋರ್ಟ್‌ ಜಾಮೀನು ನೀಡಿದೆ.

ಮೋದಿ ವಿರುದ್ಧದ ಟ್ವೀಟ್‌ ಪ್ರಕರಣದಲ್ಲಿ ಜಾಮೀನು ಸಿಕ್ಕ ಬಳಿಕ ಮಾತನಾಡಿದ ಜಿಗ್ನೇಶ್ ಮೇವಾನಿ, "ಇದು ಬಿಜೆಪಿ ಮತ್ತು ಆರ್‌ಎಸ್‌ಎಸ್‌ನ ಪಿತೂರಿಯಾಗಿದೆ. ನನ್ನ ವ್ಯಕ್ತಿತ್ವಕ್ಕೆ ಮಸಿ ಬಳಿಯಲು ಈ ರೀತಿ ಮಾಡಲಾಗಿದೆ. ಇದನ್ನು ವ್ಯವಸ್ಥಿತವಾಗಿ ನಡೆಸುತ್ತಿದ್ದಾರೆ" ಎಂದು ಆರೋಪಿಸಿದ್ದರು.

English summary
Assam court granted bail for Gujarat MLA Jignesh Mevani in a case of alleged assault on a police woman.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X