ಬಿಹಾರ ಚುನಾವಣಾ ಪ್ರಚಾರ; ಹೈಕೋರ್ಟ್‌ಗೆ ಹೋದ ಹಾರ್ದಿಕ್ ಪಟೇಲ್
ಅಹಮದಾಬಾದ್, ಅಕ್ಟೋಬರ್ 23 : ಬಿಹಾರ ಚುನಾವಣೆ ಪ್ರಚಾರಕ್ಕೆ ತೆರಳಲು ಅನುಮತಿ ನೀಡಬೇಕು ಎಂದು ಹಾರ್ದಿಕ್ ಪಟೇಲ್ ಗುಜರಾತ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ನ್ಯಾಯಾಲಯದ ಅನುಮತಿ ಇಲ್ಲದೇ ರಾಜ್ಯ ಬಿಟ್ಟು ತೆರಳದಂತೆ ಹಾರ್ದಿಕ್ ಪಟೇಲ್‌ಗೆ ನಿಷೇಧ ಹೇರಲಾಗಿದೆ.
ಶುಕ್ರವಾರ ಗುಜರಾತ್ ಕಾಂಗ್ರೆಸ್ ಅಧ್ಯಕ್ಷ ಹಾರ್ದಿಕ್ ಪಟೇಲ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ಹಾರ್ದಿಕ್ ಪಟೇಲ್ ಬಿಹಾರ ಚುನಾವಣೆಯಲ್ಲಿ ಕಾಂಗ್ರೆಸ್‌ನ ಸ್ಟಾರ್ ಕ್ಯಾಂಪೇನರ್ ಆಗಿದ್ದಾರೆ.
2015ರಲ್ಲಿ ಹಾರ್ದಿಕ್ ಪಟೇಲ್ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲು ಮಾಡಲಾಗಿತ್ತು. ಈ ಪ್ರಕರಣದಲ್ಲಿ ಜಾಮೀನು ನೀಡುವಾಗ ವಿಚಾರಣೆಗೆ ಸಹಕಾರ ನೀಡಬೇಕು ಎಂದು ನ್ಯಾಯಾಲಯ ಷರತ್ತು ಹಾಕಿತ್ತು.

ಆದರೆ, ವಿಚಾರಣೆಗೆ ಪದೇ ಪದೇ ಸಮನ್ಸ್ ನೀಡಿದರೂ ಹಾರ್ದಿಕ್ ಪಟೇಲ್ ಹಾಜರಾಗಿರಲಿಲ್ಲ. ಆದ್ದರಿಂದ, ನ್ಯಾಯಾಲಯದ ಅನುಮತಿ ಇಲ್ಲದೇ ರಾಜ್ಯ ಬಿಟ್ಟು ಹೋಗುವಂತಿಲ್ಲ ಎಂದು ನಿಷೇಧ ಹೇರಲಾಗಿದೆ. ಇದರಿಂದಾಗಿ ಪ್ರಚಾರಕ್ಕೆ ತೆರಳಲಾಗುತ್ತಿಲ್ಲ.
ರಾಜ್ಯ ಬಿಟ್ಟು ತೆರಳಲು ಅನುಮತಿ ನೀಡಬೇಕು ಎಂದು ಹಾರ್ದಿಕ್ ಪಟೇಲ್ ಮೊದಲು ಸೆಷನ್ಸ್ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಜಾಗೊಂಡಿತ್ತು. ಆದ್ದರಿಂದ, ಹೈಕೋರ್ಟ್ ಮೊರೆ ಹೋಗಿದ್ದಾರೆ. ಅಕ್ಟೋಬರ್ 27ಕ್ಕೆ ಅರ್ಜಿಯ ವಿಚಾರಣೆ ಮತ್ತೆ ನಡೆಯಲಿದೆ.
ಹಾರ್ದಿಕ್ ಪಟೇಲ್ ಬಿಹಾರ ಚುನಾವಣೆಯ ಸ್ಟಾರ್ ಕ್ಯಾಂಪೇನರ್ ಆಗಿದ್ದಾರೆ. ಚುನಾವಣಾ ಪ್ರಚಾರ ಕಾರ್ಯ ನಡೆಯುತ್ತಿದೆ. ಕಾಂಗ್ರೆಸ್ ಪಕ್ಷದ ಪರವಾಗಿ ಅವರು ಪ್ರಚಾರ ನಡೆಸಬೇಕಿದೆ. ಅದಕ್ಕಾಗಿ ರಾಜ್ಯ ಬಿಟ್ಟು ತೆರಳಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ.
243 ಸದಸ್ಯ ಬಲದ ಬಿಹಾರ ವಿಧಾನಸಭೆಗೆ ಅಕ್ಟೋಬರ್ 28 (71 ಸೀಟು), ನವೆಂಬರ್ 3 (94 ಸೀಟು), ನವೆಂಬರ್ 7 (78) ಸೀಟುಗಳಿಗೆ ಚುನಾವಣೆ ನಡೆಯಲಿದೆ. ಈಗಾಗಲೇ ಪ್ರಚಾರ ಬಿರುಸಿನಿಂದ ನಡೆಯುತ್ತಿದೆ. ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಮೂರು ಸಮಾವೇಶ ಉದ್ದೇಶಿಸಿ ಮಾತನಾಡಿದ್ದಾರೆ.
ಆರ್‌ಜೆಡಿ ಮಹಾಘಟಬಂಧನ್ ಮಾಡಿಕೊಂಡಿದ್ದು ಕಾಂಗ್ರೆಸ್ ಮತ್ತು ಎಡಪಕ್ಷಗಳು ಇದರಲ್ಲಿ ಸೇರಿಕೊಂಡಿವೆ. ರಾಜ್ಯದ ಆಡಳಿತ ನಡೆಸುತ್ತಿರುವ ಜೆಡಿಯು ಎನ್‌ಡಿಎ ಮೈತ್ರಿಕೂಟದಲ್ಲಿದೆ. ಬಿಜೆಪಿ ಮತ್ತು ಜೆಡಿಯು ಸೀಟು ಹಂಚಿಕೆ ಮಾಡಿಕೊಂಡಿವೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್












Click it and Unblock the Notifications