ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಿಹಾರ ಚುನಾವಣಾ ಪ್ರಚಾರ; ಹೈಕೋರ್ಟ್‌ಗೆ ಹೋದ ಹಾರ್ದಿಕ್ ಪಟೇಲ್

|
Google Oneindia Kannada News

ಅಹಮದಾಬಾದ್, ಅಕ್ಟೋಬರ್ 23 : ಬಿಹಾರ ಚುನಾವಣೆ ಪ್ರಚಾರಕ್ಕೆ ತೆರಳಲು ಅನುಮತಿ ನೀಡಬೇಕು ಎಂದು ಹಾರ್ದಿಕ್ ಪಟೇಲ್ ಗುಜರಾತ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ನ್ಯಾಯಾಲಯದ ಅನುಮತಿ ಇಲ್ಲದೇ ರಾಜ್ಯ ಬಿಟ್ಟು ತೆರಳದಂತೆ ಹಾರ್ದಿಕ್ ಪಟೇಲ್‌ಗೆ ನಿಷೇಧ ಹೇರಲಾಗಿದೆ.

ಶುಕ್ರವಾರ ಗುಜರಾತ್ ಕಾಂಗ್ರೆಸ್ ಅಧ್ಯಕ್ಷ ಹಾರ್ದಿಕ್ ಪಟೇಲ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ಹಾರ್ದಿಕ್ ಪಟೇಲ್ ಬಿಹಾರ ಚುನಾವಣೆಯಲ್ಲಿ ಕಾಂಗ್ರೆಸ್‌ನ ಸ್ಟಾರ್ ಕ್ಯಾಂಪೇನರ್ ಆಗಿದ್ದಾರೆ.

ಚುನಾವಣೆ ಅವರಿಗೆ, ಹಬ್ಬ ಇವರಿಗೆ: ಬಿಹಾರ ತೊರೆದು ಹೊರಟ ವಲಸಿಗರು! ಚುನಾವಣೆ ಅವರಿಗೆ, ಹಬ್ಬ ಇವರಿಗೆ: ಬಿಹಾರ ತೊರೆದು ಹೊರಟ ವಲಸಿಗರು!

2015ರಲ್ಲಿ ಹಾರ್ದಿಕ್ ಪಟೇಲ್ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲು ಮಾಡಲಾಗಿತ್ತು. ಈ ಪ್ರಕರಣದಲ್ಲಿ ಜಾಮೀನು ನೀಡುವಾಗ ವಿಚಾರಣೆಗೆ ಸಹಕಾರ ನೀಡಬೇಕು ಎಂದು ನ್ಯಾಯಾಲಯ ಷರತ್ತು ಹಾಕಿತ್ತು.

ಬಿಹಾರ ಚುನಾವಣಾ ಸಮೀಕ್ಷೆ; ನಿತೀಶ್‌ಗೆ ಮತ್ತೊಂದು ಅವಕಾಶ ಬೇಕೆ?ಬಿಹಾರ ಚುನಾವಣಾ ಸಮೀಕ್ಷೆ; ನಿತೀಶ್‌ಗೆ ಮತ್ತೊಂದು ಅವಕಾಶ ಬೇಕೆ?

Bihar Assembly Election Campaign Hardik Patel Moved High Court

ಆದರೆ, ವಿಚಾರಣೆಗೆ ಪದೇ ಪದೇ ಸಮನ್ಸ್ ನೀಡಿದರೂ ಹಾರ್ದಿಕ್ ಪಟೇಲ್ ಹಾಜರಾಗಿರಲಿಲ್ಲ. ಆದ್ದರಿಂದ, ನ್ಯಾಯಾಲಯದ ಅನುಮತಿ ಇಲ್ಲದೇ ರಾಜ್ಯ ಬಿಟ್ಟು ಹೋಗುವಂತಿಲ್ಲ ಎಂದು ನಿಷೇಧ ಹೇರಲಾಗಿದೆ. ಇದರಿಂದಾಗಿ ಪ್ರಚಾರಕ್ಕೆ ತೆರಳಲಾಗುತ್ತಿಲ್ಲ.

ಬಿಹಾರ ಚುನಾವಣೆ: ಕಣದಲ್ಲಿ 328 ಕ್ರಿಮಿನಲ್ ಹಿನ್ನೆಲೆಯವರು, 375 ಕೋಟ್ಯಧಿಪತಿಗಳು ಬಿಹಾರ ಚುನಾವಣೆ: ಕಣದಲ್ಲಿ 328 ಕ್ರಿಮಿನಲ್ ಹಿನ್ನೆಲೆಯವರು, 375 ಕೋಟ್ಯಧಿಪತಿಗಳು

ರಾಜ್ಯ ಬಿಟ್ಟು ತೆರಳಲು ಅನುಮತಿ ನೀಡಬೇಕು ಎಂದು ಹಾರ್ದಿಕ್ ಪಟೇಲ್ ಮೊದಲು ಸೆಷನ್ಸ್ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಜಾಗೊಂಡಿತ್ತು. ಆದ್ದರಿಂದ, ಹೈಕೋರ್ಟ್‌ ಮೊರೆ ಹೋಗಿದ್ದಾರೆ. ಅಕ್ಟೋಬರ್ 27ಕ್ಕೆ ಅರ್ಜಿಯ ವಿಚಾರಣೆ ಮತ್ತೆ ನಡೆಯಲಿದೆ.

ಹಾರ್ದಿಕ್ ಪಟೇಲ್ ಬಿಹಾರ ಚುನಾವಣೆಯ ಸ್ಟಾರ್ ಕ್ಯಾಂಪೇನರ್ ಆಗಿದ್ದಾರೆ. ಚುನಾವಣಾ ಪ್ರಚಾರ ಕಾರ್ಯ ನಡೆಯುತ್ತಿದೆ. ಕಾಂಗ್ರೆಸ್ ಪಕ್ಷದ ಪರವಾಗಿ ಅವರು ಪ್ರಚಾರ ನಡೆಸಬೇಕಿದೆ. ಅದಕ್ಕಾಗಿ ರಾಜ್ಯ ಬಿಟ್ಟು ತೆರಳಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ.

243 ಸದಸ್ಯ ಬಲದ ಬಿಹಾರ ವಿಧಾನಸಭೆಗೆ ಅಕ್ಟೋಬರ್ 28 (71 ಸೀಟು), ನವೆಂಬರ್ 3 (94 ಸೀಟು), ನವೆಂಬರ್ 7 (78) ಸೀಟುಗಳಿಗೆ ಚುನಾವಣೆ ನಡೆಯಲಿದೆ. ಈಗಾಗಲೇ ಪ್ರಚಾರ ಬಿರುಸಿನಿಂದ ನಡೆಯುತ್ತಿದೆ. ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಮೂರು ಸಮಾವೇಶ ಉದ್ದೇಶಿಸಿ ಮಾತನಾಡಿದ್ದಾರೆ.

ಆರ್‌ಜೆಡಿ ಮಹಾಘಟಬಂಧನ್ ಮಾಡಿಕೊಂಡಿದ್ದು ಕಾಂಗ್ರೆಸ್ ಮತ್ತು ಎಡಪಕ್ಷಗಳು ಇದರಲ್ಲಿ ಸೇರಿಕೊಂಡಿವೆ. ರಾಜ್ಯದ ಆಡಳಿತ ನಡೆಸುತ್ತಿರುವ ಜೆಡಿಯು ಎನ್‌ಡಿಎ ಮೈತ್ರಿಕೂಟದಲ್ಲಿದೆ. ಬಿಜೆಪಿ ಮತ್ತು ಜೆಡಿಯು ಸೀಟು ಹಂಚಿಕೆ ಮಾಡಿಕೊಂಡಿವೆ.

English summary
Gujarat Congress president Hardik Patel moved high court seeking permission to leave the state for Bihar assembly election 2020 campaign. He is the star campaigner for the party.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X