ರಾಜೀವ್ ಗಾಂಧಿ ಸಾವಿಗೆ ಬಿಜೆಪಿ ಕಾರಣ ಎಂದ ಅಹ್ಮದ್ ಪಟೇಲ್
ಅಹ್ಮದಾಬಾದ್, ಮೇ 09: ರಾಜೀವ್ ಗಾಂಧಿ ಅವರ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ನೀಡಿದ ಹೇಳಿಕೆಯನ್ನು ಟೀಕಿಸಿದ ಕಾಂಗ್ರೆಸ್ ಮುಖಂಡ ಅಹ್ಮದ್ ಪಟೇಲ್, "ರಾಜೀವ್ ಗಾಂಧಿ ಅವರ ಸಾವಿಗೆ ಬಿಜೆಪಿಯೇ ಕಾರಣ" ಎಂದಿದ್ದಾರೆ.
ಸಮಾವೇಶವೊಂದರಲ್ಲಿ ಮಾತನಾಡುತ್ತಿದ್ದ ಪ್ರಧಾನಿ ನರೇಂದ್ರ ಮೋದಿ, 'ರಾಜೀವ್ ಗಾಂಧಿ ಅವರು ನಿಧನರಾಗುವ ಸಂದರ್ಭದಲ್ಲಿ ಭ್ರಷ್ಟಾಚಾರಿ ನಂ.1 ಆಗಿದ್ದರು' ಎಂದಿದ್ದರು.
ಈ ಹೇಳಿಕೆಯನ್ನು ಟೀಕಿಸಿ, ಟ್ವೀಟ್ ಮಾಡಿರುವ ಪಟೇಲ್, "ಒಬ್ಬ ಹುತಾತ್ಮ ಪ್ರಧಾನಿಗೆ ಅವಮಾನ ಮಾಡುವುದು ಬಿಜೆಪಿಯ ಹೇಡಿತನಕ್ಕೆ ಸಾಕ್ಷಿ. ಆದರೆ ಅವರ ಹತ್ಯೆಗೆ ಕಾರಣ ಯಾರು? ಅವರ ಹತ್ಯೆಯ ಸಂಚಿನ ಗುಪ್ತಚರ ಮಾಹಿತಿ ಇದ್ದರೂ ಬಿಜೆಪಿ ಬೆಂಬಲಿತ ವಿಪಿ ಸಿಂಗ್ ಸರ್ಕಾರ ರಾಜೀವ್ ಗಾಂಧಿ ಅವರಿಗೆ ಹೆಚ್ಚಿನ ಭದ್ರತೆ ನೀಡದಿರುವುದೇ ಅವರ ಹತ್ಯೆಗೆ ಕಾರಣ" ಎಂದು ಪಟೇಲ್ ಟ್ವೀಟ್ ಮಾಡಿದ್ದಾರೆ.

"ರಾಜೀವ್ ಅವರು ಬಿಜೆಪಿಯ ದ್ವೇಷದಿಂದಾಗಿ ತಮ್ಮ ಪ್ರಾಣ ಕಳೆದುಕೊಂಡರು. ಅವರ ಆಧಾರರಹಿತ ಆರೋಪಗಳಿಗೆ ಉತ್ತರಿಸಲು ಅವರೀಗ ನಮ್ಮೊಂದಿಗಿಲ್ಲ" ಎಂದು ಅಹ್ಮದ್ ಪಟೇಲ್ ಹೇಳಿದ್ದಾರೆ.
ರಾಜೀವ್ ಗಾಂಧಿ ಅವರು ತಮ್ಮ 47ನೇ ವಯಸ್ಸಿನಲ್ಲಿ(20 ಆಗಸ್ಟ್ 1944- 21 ಮೇ 1991) ತಮಿಳುನಾಡಿನ ಚೆನ್ನೈ ಬಳಿಯ ಶ್ರೀಪೆರುಂಬುದುರ್ ಎಂಬಲ್ಲಿ ಸಾರ್ವಜನಿಕ ಸಭೆಯೊಂದರಲ್ಲಿ ಭಾಗವಹಿಸಿದ್ದ ಸಮಯದಲ್ಲಿ ಅವರನ್ನು ಬಾಂಬ್ ಸ್ಫೋಟಿಸಿ ಕೊಲ್ಲಲಾಗಿತ್ತು. ಭಾರತದ ಆರನೇ ಪ್ರಧಾನಿಯಾಗಿದ್ದ ಅವರು ಅಮೇಥಿ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದರು.
-
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Vijay: ನಟ, ರಾಜಕಾರಣಿ ವಿಜಯ್ ಮಹತ್ವದ ಟ್ವೀಟ್ - ಅಪ್ರಬುದ್ಧ ರಾಜಕಾರಣಿ ಎಂದ ಡಿ.ಕೆ ಶಿವಕುಮಾರ್ Tamil Nadu Assembly Election -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು?












Click it and Unblock the Notifications