just in:ಆಟೋ,ಬೈಕ್‌ಗೆ ಕಾರು ಡಿಕ್ಕಿ 6 ಸಾವು, ಆರೋಪಿ ಬಂಧನ

ಅಹಮದಾಬಾದ್, ಆಗಸ್ಟ್ 12: ಗುಜರಾತ್‌ನ ಆನಂದ್ ಜಿಲ್ಲೆಯಲ್ಲಿ ಆಟೋ ರಿಕ್ಷಾ ಮತ್ತು ಮೋಟಾರ್‌ಬೈಕಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ಆರು ಮಂದಿ ಸಾವನ್ನಪ್ಪಿದ್ದು, ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಗುರುವಾರ ರಾತ್ರಿ ಆನಂದ್ ಜಿಲ್ಲೆಯ ಸೋಜಿತ್ರಾ ತಹಸಿಲ್‌ನ ಡಾಲಿ ಗ್ರಾಮದ ಬಳಿ ಈ ಘಟನೆ ನಡೆದಿದೆ. ಮಾಹಿತಿ ತಿಳಿದ ತಕ್ಷಣ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದರು.

ತನಿಖೆಯ ವೇಳೆ ಆರೋಪಿ ಕೇತನ್ ಕುಮಾರ್ ಪಧಿಯಾರ್ (42) ಎಂಬಾತ ಕಾರು ಚಲಾಯಿಸುತ್ತಿದ್ದು, ಆತನ ತಪ್ಪಿನಿಂದಾಗಿ ಸರಣಿ ಅಪಘಾತ ಸಂಭವಿಸಿ, ಇಷ್ಟೊಂದು ಮಂದಿಯ ಸಾವಿಗೆ ಕಾರಣವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

car rammed into auto rickshaw, motorbike in Gujarat Six died, accused arrested

ಆನಂದ್ ಜಿಲ್ಲೆಯ ಪೊಲೀಸರ ಪ್ರಕಾರ, ಕಾಂಗ್ರೆಸ್ ಶಾಸಕಿ ಪೂನಂ ಪರ್ಮಾರ್ ಅವರ ಸಂಬಂಧಿಯಾಗಿರುವ ಆರೋಪಿ ಕೇತನ್ ಕುಮಾರ್ ಪಡಿಯಾರ್ ಅವರನ್ನು ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 304 ರ ಅಡಿಯಲ್ಲಿ ಬಂಧಿಸಲಾಗಿದೆ.

ಈ ದುರಂತದಲ್ಲಿ ಆಟೋ ರಿಕ್ಷಾದಲ್ಲಿದ್ದ ನಾಲ್ವರು ಹಾಗೂ ಬೈಕ್‌ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಕಾರಿನ ಚಾಲಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಕುಟುಂಬಸ್ಥರು ರಕ್ಷಾಬಂಧನ ಆಚರಿಸಿ ವಾಪಸ್ಸಾಗುತ್ತಿದ್ದ ವೇಳೆ ಭೀಕರ ಅಪಘಾತ ಸಂಭವಿಸಿದೆ.

ಆನಂದ್ ಜಿಲ್ಲೆಯ ಸಹಾಯಕ ಪೊಲೀಸ್ ವರಿಷ್ಠಾಧಿಕಾರಿ ಅಭಿಷೇಕ್ ಗುಪ್ತಾ ಮಾತನಾಡಿ, ಆನಂದ್‌ನಲ್ಲಿ ಕಾರು, ಬೈಕ್ ಮತ್ತು ಆಟೋ ರಿಕ್ಷಾ ನಡುವೆ ಸಂಭವಿಸಿದ ಅಪಘಾತದಲ್ಲಿ ಆರು ಮಂದಿ ಸಾವನ್ನಪ್ಪಿದ್ದಾರೆ. ಆಟೋದಲ್ಲಿದ್ದ ನಾಲ್ವರು ಮತ್ತು ಬೈಕ್‌ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತು ಕಾರಿನ ಚಾಲಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ' ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+