ಜುಲೈ-ಆಗಸ್ಟ್ನಲ್ಲಿ ಕೊರೊನಾ ಲಸಿಕೆ ವಿತರಣೆಗೆ ವೇಗ: ಅಮಿತ್ ಶಾ
ಅಹಮದಾಬಾದ್, ಜೂನ್ 21: ಜುಲೈ-ಆಗಸ್ಟ್ ತಿಂಗಳಿನಲ್ಲಿ ಕೊರೊನಾ ಲಸಿಕೆ ವಿತರಣೆಯ ವೇಗ ಹೆಚ್ಚಿಸಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ.
ಕೋವಿಡ್-19 ವಿರುದ್ಧ ಹೋರಾಡಲು ಸರ್ಕಾರ ಆರಂಭಿಸಿರುವ ಲಸಿಕೆ ಅಭಿಯಾನವನ್ನು ತ್ವರಿತಗೊಳಿಸಲು ನಿರ್ಧರಿಸಲಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ಇಷ್ಟೊಂದು ಜನಸಂಖ್ಯೆಯನ್ನು ಹೊಂದಿರುವ ಭಾರತದಂತಹ ದೇಶಗಳಲ್ಲಿ ವಯಸ್ಕರಿಗೆಲ್ಲರಿಗೂ ಉಚಿತ ಕೋವಿಡ್ ಲಸಿಕೆ ನೀಡುವುದು ನಿಜಕ್ಕೂ ಸವಾಲಿನ ವಿಷಯ.ಇಂದು ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಸಂದರ್ಭದಲ್ಲಿ ದೇಶಾದ್ಯಂತ ಉಚಿತ ಕೋವಿಡ್ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಲಾಗಿದ್ದು ಈ ಲಸಿಕೆ ಕಾರ್ಯಕ್ರಮದಲ್ಲಿ ಭಾರತ ಈಗಾಗಲೇ ಮುಂಚೂಣಿಯಲ್ಲಿದೆ ಎಂದರು.

ಇನ್ನು ಮುಂದಿನ ಹೆಜ್ಜೆ ನಮ್ಮದು ಎಲ್ಲರಿಗೂ ಆದಷ್ಟು ಶೀಘ್ರದಲ್ಲಿ ಲಸಿಕೆ ತಲುಪಿಸುವುದಾಗಿದೆ ಎಂದರು. ಅವರು ಎರಡು ದಿನಗಳ ಅಹಮದಾಬಾದ್ ಭೇಟಿ ಕೈಗೊಂಡಿದ್ದಾರೆ.
ಗುಜರಾತ್ನ ಅಹದಾಬಾಸ್ನಲ್ಲಿ ಲಸಿಕಾ ಕೇಂದ್ರಕ್ಕೆ ಭೇಟಿ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ''18 ವರ್ಷಕ್ಕಿಂತ ಮೇಲ್ಪಟ್ಟ ವಯಸ್ಕರೆಲ್ಲರಿಗೂ ಉಚಿತವಾಗಿ ಕೋವಿಡ್ ಲಸಿಕೆ ನೀಡಲು ಪ್ರಧಾನಿ ನರೇಂದ್ರ ಮೋದಿ ನಿರ್ಧಾರ ಮಾಡಿದ್ದು, ನಮ್ಮ ಈ ಕಾರ್ಯದಲ್ಲಿ ಯಶಸ್ವಿಯಾಗುತ್ತೇವೆ ಎಂಬ ವಿಶ್ವಾಸವಿದೆ'' ಎಂದರು.
''ಜುಲೈ ಮತ್ತು ಆಗಸ್ಟ್ ತಿಂಗಳಲ್ಲಿ ಕೇಂದ್ರ ಸರ್ಕಾರ ಲಸಿಕೆ ನೀಡುವ ಕಾರ್ಯವನ್ನು ತ್ವರಿತಗೊಳಿಸಲಿದ್ದೇವೆ. ನರೇಂದ್ರ ಮೋದಿಯವರ ನಾಯಕತ್ವದಲ್ಲಿ ಕೋವಿಡ್-19 ವಿರುದ್ಧ ಹೋರಾಡಲು ಒಂದು ಮಹತ್ವದ ಪ್ರಯಾಣ ಆರಂಭವಾಗಿದೆ. 18 ವರ್ಷಕ್ಕಿಂತ ಮೇಲ್ಪಟ್ಟವರಿಗೆಲ್ಲಾ ಉಚಿತ ಲಸಿಕೆ ನೀಡುವ ಮಹತ್ವದ ಕಾರ್ಯ ಇಂದು ಆರಂಭವಾಗಿದೆ'' ಎಂದರು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications