ಗುಜರಾತ್‌ನ ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ; 6 ಕಾರ್ಮಿಕರ ಸಾವು

ಗಾಂಧಿನಗರ, ಏಪ್ರಿಲ್ 11: ಗುಜರಾತ್‌ನ ಭರೂಚ್‌ನ ದಹೇಜ್ ಕೈಗಾರಿಕಾ ಪ್ರದೇಶದಲ್ಲಿರುವ ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ್ದು, ಆರು ಮಂದಿ ದಾರುಣವಾಗಿ ಮೃತಪಟ್ಟಿರುವ ಘಟನೆ ವರದಿಯಾಗಿದೆ.

ಆರ್ಗ್ಯಾನಿಕ್ ಕೆಮಿಕಲ್ ಕಂಪನಿ ಕಾರ್ಖಾನೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಆರು ಮಂದಿ ಕಾರ್ಮಿಕರು ಭಾನುವಾರ ಸಂಭವಿಸಿದ ಸ್ಫೋಟದಲ್ಲಿ ಸುಟ್ಟ ಗಾಯಗಳಿಂದ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಘಟನೆಯ ಕುರಿತು ಪೊಲೀಸರು ಪ್ರಾಥಮಿಕ ತನಿಖೆ ಶುರು ಮಾಡಿದ್ದಾರೆ.

ಕಳೆದ ವರ್ಷ ಆಗಸ್ಟ್‌ನಲ್ಲಿ ಗುಜರಾತ್‌ನ ಭರೂಚ್ ಜಿಲ್ಲೆಯ ದಹೇಜ್ ಕೈಗಾರಿಕಾ ಪ್ರದೇಶದಲ್ಲಿ ರಾಸಾಯನಿಕ ಉತ್ಪಾದನಾ ಘಟಕದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಒಬ್ಬರು ಕಾರ್ಮಿಕರು ಸಾವನ್ನಪ್ಪಿದ್ದು, ಇಬ್ಬರು ಕಾರ್ಮಿಕರು ಗಾಯಗೊಂಡಿದ್ದರು.

Chemical factory blast at Gujarats Bharuch; 6 People Death in Incident

ಅಹ್ಮದಾಬಾದ್ ನಿಂದ 235 ಕಿ.ಮೀ ದೂರದಲ್ಲಿರುವ ಕಾರ್ಖಾನೆ:

ಗುಜರಾತ್ ರಾಜಧಾನಿ ಅಹ್ಮದಾಬಾದ್ ನಿಂದ 235 ಕಿಲೋ ಮೀಟರ್ ದೂರದಲ್ಲಿರುವ ದಹೇಜ್ ಕೈಗಾರಿಕಾ ಪ್ರದೇಶದಲ್ಲಿ ರಾಸಾಯನಿಕ ಕಾರ್ಖಾನೆಯಿದೆ. ಈ ಕಾರ್ಖಾನೆಯಲ್ಲಿ ಸೋಮವಾರ ಬೆಳಗಿನ ಜಾವ 3 ಗಂಟೆ ಸುಮಾರಿಗೆ ಸ್ಫೋಟ ಸಂಭವಿಸಿದೆ. ಈ ವೇಳೆ ಕಾರ್ಖಾನೆಯಲ್ಲಿ ದ್ರಾವಕವನ್ನು ಭಟ್ಟಿ ಇಳಿಸುವ ಕಾರ್ಯ ನಡೆಯುತ್ತಿತ್ತು ಎಂದು ತಿಳಿದು ಬಂದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+