Breaking: 500 ರೂಪಾಯಿಗೆ ಎಲ್‌ಪಿಜಿ ಸಿಲಿಂಡರ್!

ಅಹ್ಮದಾಬಾದ್, ಸೆಪ್ಟೆಂಬರ್ 5: ಭಾರತದಲ್ಲಿ ಎಲ್‌ಪಿಜಿ ಸಿಲಿಂಡರ್ ದರ 1,000 ಗಡಿ ದಾಟಿದೆ. ಬೆಲೆ ಏರಿಕೆ ಬಿಸಿಯಿಂದ ಸಾರ್ವಜನಿಕರ ಜೇಬು ಸುಡುತ್ತಿರುವ ಬೆಲೆಗೆ ಕಡಿವಾಣ ಹಾಕುವುದಾಗಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಆಶ್ವಾಸನೆ ನೀಡಿದ್ದಾರೆ.

ಅಹಮದಾಬಾದ್‌ನ ಸಾಬರಮತಿ ನದಿಯ ಮುಂಭಾಗದಲ್ಲಿ ನಡೆದ 'ಪರಿವರ್ತನ್ ಸಂಕಲ್ಪ ಮೆರವಣಿಗೆಯಲ್ಲಿ ಕಾಂಗ್ರೆಸ್‌ನ ಬೂತ್ ಮಟ್ಟದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಗಾಂಧಿ, ಈ ವರ್ಷದ ಕೊನೆಯಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವ ಗುಜರಾತ್‌ನ ಜನರಿಗೆ ಹಲವಾರು ಭರವಸೆಗಳನ್ನು ನೀಡಿದರು. ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬಂದರೆ ಕೇವಲ 500 ರೂಪಾಯಿಗೆ ಎಲ್‌ಪಿಜಿ ಸಿಲಿಂಡರ್ ನೀಡಲಾಗುವುದು ಎಂದು ತಿಳಿಸಿದರು.

ರೈತರಿಗೆ ಉಚಿತವಾಗಿ ವಿದ್ಯುತ್ ಸೌಕರ್ಯವನ್ನು ನೀಡಲಾಗುತ್ತದೆ. 300 ಯೂನಿಟ್ ವರೆಗೂ ಉಚಿತ ವಿದ್ಯುತ್ ಸೌಲಭ್ಯವನ್ನು ಒದಗಿಸಲಾಗುವುದು ಎಂದು ರಾಹುಲ್ ಗಾಂಧಿ ಆಶ್ವಾಸನೆ ನೀಡಿದ್ದಾರೆ. 10 ಲಕ್ಷ ಹೊಸ ಉದ್ಯೋಗ ಸೃಷ್ಟಿ, 3,000 ಆಂಗ್ಲ ಮಾಧ್ಯಮ ಶಾಲೆಗಳ ನಿರ್ಮಾಣ, ಹೆಣ್ಣು ಮಕ್ಕಳಿಗೆ ಉಚಿತ ಶಿಕ್ಷಣ ಮತ್ತು ಹಾಲು ಉತ್ಪಾದಕರಿಗೆ ಲೀಟರ್‌ಗೆ 5 ರೂಪಾಯಿ ಸಬ್ಸಿಡಿ ನೀಡುವುದಾಗಿ ಭರವಸೆ ನೀಡಿದರು.

Congress Govt will provide LPG cylinder to consumers at 500 Rupees, Assured by MPs Rahul Gandhi

ಕೋವಿಡ್ ಮೃತರಿಗೆ 4 ಲಕ್ಷ ರೂಪಾಯಿ ಪರಿಹಾರ?

ಕೊರೊನಾ ವೈರಸ್ ಸಾಂಕ್ರಾಮಿಕ ಪಿಡುಗಿನ ಕಾಲದಲ್ಲಿ ಮಹಾಮಾರಿಯಿಂದ ಸಾವಿರಾರು ಮಂದಿ ಪ್ರಾಣ ಬಿಟ್ಟಿದ್ದಾರೆ. ರಾಜ್ಯದಲ್ಲಿ ಕೋವಿಡ್-19 ಸೋಂಕಿನಿಂದ ಪ್ರಾಣ ಬಿಟ್ಟಿರುವವರ ಕುಟುಂಬಕ್ಕೆ ತಲಾ 4 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಭರವಸೆ ನೀಡಿದ್ದಾರೆ.

ಸೋಮವಾರ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ರಾಹುಲ್ ಗಾಂಧಿ, ''ರಾಜ್ಯದಲ್ಲಿರುವ ಬಿಜೆಪಿ ಸರ್ಕಾರವು ಉನ್ನತ ಕೈಗಾರಿಕೋದ್ಯಮಿಗಳ ಸಾಲಮನ್ನಾ ಮಾಡುತ್ತದೆ, ಆದರೆ ರೈತರ ಸಾಲವನ್ನು ಮನ್ನಾ ಮಾಡಿದ್ದಾರೆ ಎಂದು ನೀವು ಕೇಳಿದ್ದೀರಾ? ಗುಜರಾತ್‌ನಲ್ಲಿ ನಾವು ಅಧಿಕಾರಕ್ಕೆ ಬಂದ ನಂತರ ಪ್ರತಿಯೊಬ್ಬ ರೈತರಿಗೆ 3 ಲಕ್ಷ ರೂಪಾಯಿವರೆಗೆ ಸಾಲವನ್ನು ಮನ್ನಾ ಮಾಡುವುದಾಗಿ ರಾಹುಲ್ ಗಾಂಧಿ ಭರವಸೆ ನೀಡಿದರು.

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರೈತರಿಗೆ ಉಚಿತ ವಿದ್ಯುತ್ ಮತ್ತು ಸಾಮಾನ್ಯ ಗ್ರಾಹಕರಿಗೆ 300 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್ ನೀಡುವುದಾಗಿ ಗಾಂಧಿ ಭರವಸೆ ನೀಡಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+