• search
  • Live TV
ಅಹಮದಾಬಾದ್ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಸರ್ದಾರ್‌ ಪಟೇಲ್‌ಗೆ ಅವಮಾನ; ಸ್ಟೇಡಿಯಂಗೆ ಮೋದಿ ಹೆಸರು ನಾಮಕರಣಕ್ಕೆ ಕಾಂಗ್ರೆಸ್ ವಿರೋಧ

|
Google Oneindia Kannada News

ಅಹಮದಾಬಾದ್, ಫೆಬ್ರವರಿ 24: ವಿಶ್ವದ ಅತೀ ದೊಡ್ಡ ಕ್ರಿಕೆಟ್ ಸ್ಟೇಡಿಯಂ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ, ಗುಜರಾತ್‌ನ ಅಹಮದಾಬಾದ್‌ನಲ್ಲಿರುವ ಮೊಟೆರಾ ಸ್ಟೇಡಿಯಂ (ಸರ್ದಾರ್ ಪಟೇಲ್ ಸ್ಟೇಡಿಯಂ) ಹೆಸರನ್ನು 'ನರೇಂದ್ರ ಮೋದಿ ಸ್ಟೇಡಿಯಂ' ಎಂದು ಮರು ನಾಮಕರಣ ಮಾಡಿರುವುದು ಇದೀಗ ರಾಜಕೀಯ ಜಗಳಕ್ಕೆ ಕಾರಣವಾಗಿದೆ.

ಮರುನಾಮಕರಣದ ವಿಚಾರವಾಗಿ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ವಾಗ್ಯುದ್ಧ ಆರಂಭಗೊಂಡಿದೆ. ಬುಧವಾರ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಹೊಸ ಸ್ವರೂಪ ಪಡೆದುಕೊಂಡಿರುವ ಸ್ಟೇಡಿಯಂ ಉದ್ಘಾಟನೆ ಮಾಡಿದ್ದಾರೆ. ಉದ್ಘಾಟನೆಯಾಗುತ್ತಿದ್ದಂತೆ ಸ್ಟೇಡಿಯಂಗೆ ಮೋದಿ ಹೆಸರು ಮರುನಾಮಕರಣ ಮಾಡಿರುವ ಕುರಿತು ಆಕ್ಷೇಪಗಳು ವ್ಯಕ್ತವಾಗಿವೆ.

ಜಗತ್ತಿನ ಅತಿ ದೊಡ್ಡ ಕ್ರಿಕೆಟ್ ಸ್ಟೇಡಿಯಂಗೆ ಪ್ರಧಾನಿ ಮೋದಿ ಹೆಸರುಜಗತ್ತಿನ ಅತಿ ದೊಡ್ಡ ಕ್ರಿಕೆಟ್ ಸ್ಟೇಡಿಯಂಗೆ ಪ್ರಧಾನಿ ಮೋದಿ ಹೆಸರು

ಈ ಬಗ್ಗೆ ಗುಜರಾತ್ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹಾರ್ದಿಕ್ ಪಟೇಲ್ ಸರ್ಕಾರದ ಮೇಲೆ ಆಕ್ರೋಶ ವ್ಯಕ್ತಪಡಿಸಿದ್ದು, "ಇದು ಸರ್ದಾರ್ ಪಟೇಲ್ ಅವರಿಗೆ ಅವಮಾನವಲ್ಲವೇ?" ಎಂದು ಪ್ರಶ್ನಿಸಿದ್ದಾರೆ. ಸರ್ದಾರ್ ಪಟೇಲ್ ಅವರ ಹೆಸರಿನಲ್ಲಿ ವೋಟು ಗಿಟ್ಟಿಸಿಕೊಂಡಿರುವ ಬಿಜೆಪಿ, ದೇಶದ ಮೊದಲ ಗೃಹ ಸಚಿವರಿಗೆ ಅವಮಾನ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಮಧ್ಯಪ್ರದೇಶದ ಮಾಜಿ ಸಿಎಂ ಕಮಲ ನಾಥ್ ಕೂಡ ಪ್ರತಿಕ್ರಿಯಿಸಿದ್ದು, ಮೋದಿ ಹೆಸರನ್ನು ಮರುನಾಮಕರಣ ಮಾಡಿರುವುದು ಅವಮಾನಕರ ಸಂಗತಿ ಎಂದಿದ್ದಾರೆ. ಮಹಾನ್ ಸಾಧಕರನ್ನು ಸ್ಮರಿಸಲು, ಪಾರಂಪರಿಕ ಸ್ಥಳಗಳಿಗೆ ಹೆಸರಿಡುವುದು ವಾಡಿಕೆ. ಆದರೆ ಬದುಕಿರುವಾಗಲೇ ತಮ್ಮ ತಮ್ಮ ಹೆಸರನ್ನು ಹೇಗೆ ಇಟ್ಟುಕೊಳ್ಳುತ್ತಾರೆ ಎಂದು ಪ್ರಶ್ನಿಸಿದ್ದಾರೆ.

ಮರುನಾಮಕರಣವನ್ನು ಸಮರ್ಥಿಸಿಕೊಂಡಿರುವ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್, "ಸ್ಟೇಡಿಯಂ ಹೆಸರನ್ನು ಮಾತ್ರ ಬದಲಿಸಲಾಗಿದೆ. ಇಡೀ ಕಾಂಪ್ಲೆಕ್ಸ್‌ ಅನ್ನು ಸರ್ದಾರ್ ಪಟೇಲ್ ಕ್ರಿಕೆಟ್ ಸ್ಟೇಡಿಯಂ ಎಂದೇ ಕರೆಯಲಾಗುತ್ತದೆ" ಎಂದಿದ್ದಾರೆ.

ನರೇಂದ್ರ ಮೋದಿ ಕ್ರೀಡಾಂಗಣವು ಜಗತ್ತಿನಲ್ಲಿಯೇ ಅತ್ಯಂತ ದೊಡ್ಡ ಕ್ರಿಕೆಟ್ ಮೈದಾನ ಎನಿಸಿಕೊಂಡಿದ್ದು, 1,10,000 ಪ್ರೇಕ್ಷಕರು ಕುಳಿತುಕೊಳ್ಳುವ ಸಾಮರ್ಥ್ಯ ಹೊಂದಿದೆ. ಇಲ್ಲಿ ಮೊದಲ ಬಾರಿಗೆ ಭಾರತ-ಇಂಗ್ಲೆಂಡ್ ನಡುವೆ ಹೊನಲು ಬೆಳಕಿನ 'ಪಿಂಕ್ ಬಾಲ್' ಟೆಸ್ಟ್ ಪಂದ್ಯ ನಡೆಯಲಿದೆ. ಮೊಟೆರಾದಲ್ಲಿ ಸರ್ದಾರ್ ವಲ್ಲಭಭಾಯ್ ಪಟೇಲ್ ಸ್ಪೋರ್ಟ್ಸ್ ಎನ್‌ಕ್ಲೇವ್ ಮತ್ತು ನರೇಂದ್ರ ಮೋದಿ ಸ್ಟೇಡಿಯಂ ಜತೆಗೆ ನರಾನ್‌ಪುರದಲ್ಲಿ ಕ್ರೀಡಾ ಸಂಕೀರ್ಣವೊಂದನ್ನು ಸಹ ನಿರ್ಮಿಸಲಾಗುವುದಾಗಿ ತಿಳಿದುಬಂದಿದೆ. ಮೊಟೆರಾ ಕ್ರೀಡಾಂಗಣವನ್ನು 1982ರಲ್ಲಿ ನಿರ್ಮಿಸಲಾಗಿತ್ತು. ಆಗ ಅದರ ಸಾಮರ್ಥ್ಯ 49,000 ಇತ್ತು.

English summary
Congress leaders opposed renaming the sports complex in Ahmedabad to Narendra Modi Cricket Stadium and alleges it is an insult to Sardar Patel,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X