ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮೋದಿ ನಾಡಲ್ಲಿ ಕಾಂಗ್ರೆಸ್ ಕಾರ್ಯಕಾರಿಣಿ ಸಭೆ, ಚುನಾವಣೆಗೆ ರಣಕಹಳೆ

|
Google Oneindia Kannada News

Recommended Video

Lok Sabha Elections 2019: ಮೋದಿ ನಾಡಲ್ಲಿ ಕಾಂಗ್ರೆಸ್ ಚುನಾವಣೆಗೆ ರಣಕಹಳೆ | Oneindia Kannada

ಅಹ್ಮದಾಬಾದ್, ಮಾರ್ಚ್‌ 12: ಲೋಕಸಭೆ ಚುನಾವಣೆಗೆ ತಯಾರಾಗುತ್ತಿರುವ ಕಾಂಗ್ರೆಸ್ ಪಕ್ಷವು, ಇಂದು ಗುಜರಾತ್‌ನಲ್ಲಿ ಕಾರ್ಯಕಾರಿಣಿ ಸಭೆ ಆಯೋಜಿಸಿದ್ದು, ಮೋದಿ ನಾಡಲ್ಲಿ ಚುನಾವಣೆಗೆ ರಣಕಹಳೆ ಊದಲಿದೆ.

ಕಾರ್ಯಕಾರಿಣಿ ಸಭೆಯು ಅತ್ಯಂತ ಮಹತ್ವದ್ದಾಗಿದ್ದು, ಸಭೆಯು ಗುಜರಾತ್‌ನ ಸಬರಮತಿನಲ್ಲಿ ನಡೆಯಲಿದೆ. ಸಭೆಯಲ್ಲಿ ಚುನಾವಣಾ ರಣತಂತ್ರ, ವಿವಿಧ ರಾಜ್ಯಗಳಲ್ಲಿ ಮೈತ್ರಿಯ ಧನಾತ್ಮಕ-ಋಣಾತ್ಮಕ ಪರಿಣಾಮ, ಪ್ರಚಾರ ತಂತ್ರಗಳ ಬಗ್ಗೆ ವಿಸ್ತೃತ ಚರ್ಚೆ ಆಗಲಿದೆ.

ಗುಜರಾತ್‌: 4 ದಿನದಲ್ಲಿ 3 ಕಾಂಗ್ರೆಸ್‌ ಶಾಸಕರ ರಾಜೀನಾಮೆಗುಜರಾತ್‌: 4 ದಿನದಲ್ಲಿ 3 ಕಾಂಗ್ರೆಸ್‌ ಶಾಸಕರ ರಾಜೀನಾಮೆ

ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಮನಮೋಹನ್ ಸಿಂಗ್, ಅಹ್ಮದ್ ಪಟೇಲ್, ಕೆ.ಸಿ.ವೇಣುಗೋಪಾಲ್ ಇನ್ನೂ ಹಲವು ಎಐಸಿಸಿ ಪ್ರಮುಖ ಮುಖಂಡರು ಕಾರ್ಯಕಾರಿಣಿಯಲ್ಲಿ ಭಾಗವಹಿಸಲಿದ್ದಾರೆ. ಕರ್ನಾಟಕದಿಂದ ಮಲ್ಲಿಕಾರ್ಜುನ ಖರ್ಗೆ, ಕೆ.ಎಚ್.ಮುನಿಯಪ್ಪ ವಿಶೇಷ ಆಹ್ವಾನಿತರಾಗಿದ್ದಾರೆ ಜೊತೆಗೆ ದಿನೇಶ್ ಗುಂಡೂರಾವ್ ಮತ್ತು ಸಿದ್ದರಾಮಯ್ಯ ಸಹ ಸಭೆಯಲ್ಲಿ ಭಾಗವಹಿಸಲಿದ್ದಾರೆ.

Congress working committee meeting to chart out election strategy today in Ahmedabad

ಕಾರ್ಯಕಾರಿಣಿ ಸಭೆಯಲ್ಲಿ ಚುನಾವಣೆ ಪ್ರಣಾಳಿಕೆ ಬಗ್ಗೆ ವಿಶೇಷ ಚರ್ಚೆ ನಡೆಯಲಿದ್ದು, ಪ್ರಣಾಳಿಕೆಗೆ ರಾಜ್ಯಗಳಿಂದ ಸಲಹೆಗಳನ್ನು ಸ್ವೀಕರಿಸಲಾಗುತ್ತದೆ. ಸಭೆ ಬಳಿಕ ಎಐಸಿಸಿಯು ಲೋಕಸಭೆ ಚುನಾವಣೆ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡುವ ಸಾಧ್ಯತೆ ಇದೆ.

English summary
The day-long meeting of the Congress Working Committee (CWC) to finalise the strategy for Lok Sabha elections 2019 will be held in Ahmedabad, Gujarat, today (March 12).
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X