ತೌಕ್ತೆ ಚಂಡಮಾರುತ: ಗುಜರಾತ್‌ಗೆ 1000 ಕೋಟಿ ರೂ, ನೆರವು ಘೋಷಿಸಿದ ಪ್ರಧಾನಿ ಮೋದಿ
ಅಹಮದಾಬಾದ್, ಮೇ 19: ತೌಕ್ತೆ ಚಂಡಮಾರುತದಿಂದ ಹಾನಿಗೊಳಗಾದ ಗುಜರಾತ್‌ಗೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಇಂದು ವೈಮಾನಿಕ ಸಮೀಕ್ಷೆಯನ್ನು ನಡೆಸಿದ್ದಾರೆ. ಇದಾದ ಬಳಿಕ ಪ್ರಧಾನಿ ಮೋದಿ ರಾಜ್ಯದಲ್ಲಿ ತಕ್ಷಣವೇ ಪರಿಹಾರ ಕಾರ್ಯಗಳಿಗೆ ಅನುಕೂಲವಾಗಲು 1000 ಕೋಟಿ ರೂಪಾಯಿಯ ನೆರವನ್ನು ಘೋಷಣೆ ಮಾಡಿದ್ದಾರೆ.
ಇನ್ನು ಇದೇ ಸಂದರ್ಭದಲ್ಲಿ ತೌಕ್ತೆ ಚಂಡಮಾರುತದಿಂದ ಎಲ್ಲಾ ರಾಜ್ಯಗಳಲ್ಲಿ ಪ್ರಾಣವನ್ನು ಕಳೆದುಕೊಂಡವರ ಕುಟುಂಬಕ್ಕೆ 2 ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ 50,000 ರೂಪಾಯಿ ಪರಿಹಾರ ನೀಡುವುದಾಗಿ ಪ್ರಧಾನಿ ಘೋಷಿಸಿದ್ದಾರೆ.

ಚಂಡಮಾರುತದ ಪ್ರಭಾವಕ್ಕೆ ಒಳಗಾಗಿ ಸಾಕಷ್ಟು ಹಾನಿಗೊಳಗಾದ ಗಿರ್ ಸೋಮನಾಥ್ ಜಿಲ್ಲೆಯ ಉನಾ, ಅಮ್ರೆಲಿ ಜಿಲ್ಲೆಯ ಜಾಫ್ರಾಬಾದ್ , ಭಾವನಗರ ಜಿಲ್ಲೆಯ ಮಾಹುವಾದಲ್ಲಿ ಮತ್ತು ದಿಯುನಲ್ಲಿ ಪ್ರಧಾನಿ ನರೇಂದ್ರ ಮೋದಿ ವೈಮಾನಿಕ ಸಮೀಕ್ಷೆಯನ್ನು ನಡೆಸಿದ್ದಾರೆ. ಈ ಸಂದರ್ಭದಲ್ಲಿ ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ಹಾಗೂ ಕೆಲ ಉನ್ನತ ಅಧಿಕಾರಿಗಳು ಪ್ರಧಾನಿ ಜೊತೆಗಿದ್ದರು.
ವೈಮಾನಿಕ ಸಮೀಕ್ಷೆಯ ನಂತರ ಅಹಮದಾಬಾದ್‌ನಲ್ಲಿ ಪರಾಮರ್ಶೆ ಸಭೆಯನ್ನು ನಡೆಸಿದ್ದಾರೆ. ಚಂಡಮಾರುತದಿಂದ ಹಾನಿಗೊಳಗಾದ ಪ್ರದೇಶಗಳಲ್ಲಿ ಕೈಗೊಳ್ಳುತ್ತಿರುವ ಪರಿಹಾರ ಮತ್ತು ಪುನರ್ವಸತಿ ಕ್ರಮಗಳ ಬಗ್ಗೆ ಚರ್ಚಿಸಲಾಯಿತು. ರಾಜ್ಯದಲ್ಲಿ ಎಷ್ಟು ಪ್ರಮಾಣದ ಹಾನಿಯಾಗಿದೆ ಎಂಬುದನ್ನು ನಿರ್ಣಯಿಸಲು ಕೇಂದ್ರವು ರಾಜ್ಯಕ್ಕೆ ಭೇಟಿ ನೀಡಲು ಸಚಿವರ ತಂಡವನ್ನು ನಿಯೋಜಿಸಲಿದ್ದು, ಅದರ ಆಧಾರದ ಮೇಲೆ ಹೆಚ್ಚಿನ ನೆರವು ನೀಡುವ ಭರವಸೆ ನೀಡಿದ್ದಾರೆ.
ಈ ಸಂಕಷ್ಟದ ಸಮಯದಲ್ಲಿ ರಾಜ್ಯ ಸರ್ಕಾರದೊಂದಿಗೆ ಕೈಜೋಡಿಸುವುದಾಗಿ ಪ್ರಧಾನಿ ಹೇಳಿದ್ದಾರೆ. ಹಾನಿಗೊಳಗಾದ ಪ್ರದೇಶದಲ್ಲಿ ಮೂಲಸೌಕರ್ಯಗಳ ಮರು ಸ್ಥಾಪನೆ ಹಾಗೂ ಪುನರ್‌ನಿರ್ಮಾಣಕ್ಕೆ ಸಾಧ್ಯವಿರುವ ಸಂಪೂರ್ಣ ಸಹಕಾರವನ್ನು ನೀಡುವುದಾಗಿಯೂ ಪ್ರಧಾನಿ ಮೋದಿ ಭರವಸೆ ನೀಡಿದ್ದಾರೆ.
-
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
ಎಲ್ಪಿಜಿ ಸಿಲಿಂಡರ್ ದರ 60 ರೂ ಏರಿಕೆ: ಮೋದಿ ಸರ್ಕಾರದ ವಿರುದ್ಧ ತೀವ್ರ ಟೀಕೆ -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
ಡಿವೋರ್ಸ್ವರೆಗೆ ಪತಿಯ ನಿವಾಸದಲ್ಲೇ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿ: ನಟ ವಿಜಯ್ ಪತ್ನಿ ಕೋರ್ಟ್ಗೆ ಮನವಿ -
Yash: ಪತ್ನಿ ರಾಧಿಕಾ ಪಂಡಿತ್ ಹುಟ್ಟುಹಬ್ಬಕ್ಕೆ ಹೊಸ ಲುಕ್ನಲ್ಲಿ ಯಶ್ ಪ್ರತ್ಯಕ್ಷ -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
ಟಿ20 ವಿಶ್ವಕಪ್ 2026 ಫೈನಲ್ ನಂತರ ಎಲ್ಲಾ ಮಾದರಿಯ ಕ್ರಿಕೆಟ್ಗೆ ಸೂರ್ಯಕುಮಾರ್ ಯಾದವ್ ನಿವೃತ್ತಿ ಘೋಷಣೆ ವದಂತಿ











Click it and Unblock the Notifications