ನಾಳೆ ಗುಜರಾತ್‌ಗೆ 'ವಾಯು' ಚಂಡ ಮಾರುತ ಲಗ್ಗೆ: ಶಾಲಾ, ಕಾಲೇಜು ಬಂದ್
ಅಹಮದಾಬಾದ್, ಜೂನ್ 12: ಗುಜರಾತ್‌ಗೆ 'ವಾಯು' ಚಂಡಮಾರುತ ಗುರುವಾರ ಅಪ್ಪಳಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಹೀಗಾಗಿ ಎಲ್ಲಾ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಗುಜರಾತಿನ ಕರಾವಳಿ ಭಾಗದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಈ ಮಧ್ಯೆ ಫೋನಿ ಚಂಡಮಾರುತವನ್ನು ನಿರ್ವಹಿಸಿದ ಒಡಿಶಾದಿಂದ ವಿಪತ್ತು ನಿರ್ವಹಣೆ ತಂತ್ರಗಳನ್ನು ತಿಳಿದುಕೊಳ್ಳಲು ಗುಜರಾತಿನ ಅಧಿಕಾರಿಗಳು ನಿರಂತರ ಸಂಪರ್ಕದಲ್ಲಿದ್ದಾರೆ.
ಇದೇ ವೇಳೆ ತಲಾ 45 ಸಿಬ್ಬಂದಿಗಳನ್ನು ಹೊಂದಿರುವ ಎನ್‌ಡಿಆರ್‌ಎಫ್‌ನ 26 ತಂಡಗಳನ್ನು ಗುಜರಾತಿನಲ್ಲಿ ಸಕಲ ಉಪಕರಣಗಳೊಂದಿಗೆ ನಿಯೋಜನೆ ಮಾಡಲಾಗಿದೆ. ಅರಬ್ಬಿ ಸಮುದ್ರದಲ್ಲಿ ಕಂಡುಬಂದಿದ್ದ ವಾಯುಭಾರ ಕುಸಿತ ಚಂಡ ಮಾರುತ ರೂಪ ಪಡೆದಿದೆ.

ಮುಂದಿನ 24 ಗಂಟೆಗಳಲ್ಲಿ ತೀವ್ರ ಸ್ವರೂಪ ಪಡೆದುಕೊಳ್ಳಲಿದೆ. ಗುರುವಾರ ಬೆಳಗ್ಗೆ ಪೋರಬಂದರು ಹಾಗೂ ಮಹುವಾ ಕರಾವಳಿ ಮಧ್ಯೆ ಬರಯವ ವೆರಾವಲ್ ಬಳಿ ಅಪ್ಪಳಿಸಲಿದೆ ಎಂಬ ಮುನ್ಸೂಚನೆ ದೊರೆತಿದೆ.
ಚಂಡಮಾರುತ ಗಾಳಿಯು ಗಂಟೆಗೆ 110-135 ಕಿ.ಮೀ ವೇಗದಲ್ಲಿ ಚಲಿಸುತ್ತದೆ. ಮಾರುತ ಅಪ್ಪಳಿಸುವ ಹಿನ್ನೆಲೆಯಲ್ಲಿ ಸರ್ಕಾರಿ ಅಧಿಕಾರಿಗಳ ರಜೆಯನ್ನು ಸರ್ಕಾರವು ಕಡಿತಗೊಳಿಸಿದೆ.












Click it and Unblock the Notifications