ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನಾಳೆ ಗುಜರಾತ್‌ಗೆ 'ವಾಯು' ಚಂಡ ಮಾರುತ ಲಗ್ಗೆ: ಶಾಲಾ, ಕಾಲೇಜು ಬಂದ್

|
Google Oneindia Kannada News

ಅಹಮದಾಬಾದ್, ಜೂನ್ 12: ಗುಜರಾತ್‌ಗೆ 'ವಾಯು' ಚಂಡಮಾರುತ ಗುರುವಾರ ಅಪ್ಪಳಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಹೀಗಾಗಿ ಎಲ್ಲಾ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಗುಜರಾತಿನ ಕರಾವಳಿ ಭಾಗದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಈ ಮಧ್ಯೆ ಫೋನಿ ಚಂಡಮಾರುತವನ್ನು ನಿರ್ವಹಿಸಿದ ಒಡಿಶಾದಿಂದ ವಿಪತ್ತು ನಿರ್ವಹಣೆ ತಂತ್ರಗಳನ್ನು ತಿಳಿದುಕೊಳ್ಳಲು ಗುಜರಾತಿನ ಅಧಿಕಾರಿಗಳು ನಿರಂತರ ಸಂಪರ್ಕದಲ್ಲಿದ್ದಾರೆ.

 ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ, ರಾಜ್ಯದಲ್ಲಿ ಭಾರಿ ಮಳೆ ಮುನ್ಸೂಚನೆ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ, ರಾಜ್ಯದಲ್ಲಿ ಭಾರಿ ಮಳೆ ಮುನ್ಸೂಚನೆ

ಇದೇ ವೇಳೆ ತಲಾ 45 ಸಿಬ್ಬಂದಿಗಳನ್ನು ಹೊಂದಿರುವ ಎನ್‌ಡಿಆರ್‌ಎಫ್‌ನ 26 ತಂಡಗಳನ್ನು ಗುಜರಾತಿನಲ್ಲಿ ಸಕಲ ಉಪಕರಣಗಳೊಂದಿಗೆ ನಿಯೋಜನೆ ಮಾಡಲಾಗಿದೆ. ಅರಬ್ಬಿ ಸಮುದ್ರದಲ್ಲಿ ಕಂಡುಬಂದಿದ್ದ ವಾಯುಭಾರ ಕುಸಿತ ಚಂಡ ಮಾರುತ ರೂಪ ಪಡೆದಿದೆ.

Cyclone Vayu may hit Gujarath on June 13

ಮುಂದಿನ 24 ಗಂಟೆಗಳಲ್ಲಿ ತೀವ್ರ ಸ್ವರೂಪ ಪಡೆದುಕೊಳ್ಳಲಿದೆ. ಗುರುವಾರ ಬೆಳಗ್ಗೆ ಪೋರಬಂದರು ಹಾಗೂ ಮಹುವಾ ಕರಾವಳಿ ಮಧ್ಯೆ ಬರಯವ ವೆರಾವಲ್ ಬಳಿ ಅಪ್ಪಳಿಸಲಿದೆ ಎಂಬ ಮುನ್ಸೂಚನೆ ದೊರೆತಿದೆ.

ಮುಂದಿನ 8-10 ಗಂಟೆಗಳಲ್ಲಿ ಯಾವ್ಯಾವ ರಾಜ್ಯಗಳಲ್ಲಿ ಮಳೆ ಮುಂದಿನ 8-10 ಗಂಟೆಗಳಲ್ಲಿ ಯಾವ್ಯಾವ ರಾಜ್ಯಗಳಲ್ಲಿ ಮಳೆ

ಚಂಡಮಾರುತ ಗಾಳಿಯು ಗಂಟೆಗೆ 110-135 ಕಿ.ಮೀ ವೇಗದಲ್ಲಿ ಚಲಿಸುತ್ತದೆ. ಮಾರುತ ಅಪ್ಪಳಿಸುವ ಹಿನ್ನೆಲೆಯಲ್ಲಿ ಸರ್ಕಾರಿ ಅಧಿಕಾರಿಗಳ ರಜೆಯನ್ನು ಸರ್ಕಾರವು ಕಡಿತಗೊಳಿಸಿದೆ.

English summary
Cyclone Vayu may hit Gujarath tomorrow, expected to hit the Gujarat coast between Porbandar and Mahuva around Veraval and Diu region.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X