ಇಂದು ಉಗ್ರ ರೂಪ ಪಡೆಯಲಿರುವ 'ವಾಯು' ಚಂಡಮಾರುತ, ಗುಜರಾತಿನಲ್ಲಿ ಕಟ್ಟೆಚ್ಚರ

ಅಹ್ಮದಾಬಾದ್, ಜೂನ್ 13: ಗುಜರಾತ್ ಗೆ ಅಪ್ಪಳಿಸಿರುವ ವಾಯು ಚಂಡಮಾರುತದ ಅಬ್ಬರ ಹೆಚ್ಚಾಗಿದ್ದು, ಇಂದು ಅದು ಉಗ್ರ ರೂಪ ಪಡೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ, ಗುಜರಾತಿನಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.

ಈಗಾಗಲೇ ಮುನ್ನೆಚ್ಚರಿಕೆಯ ದೃಷ್ಟಿಯಿಂದ 3 ಲಕ್ಷಕ್ಕೂ ಹೆಚ್ಚು ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಲಾಂತರಿಸಲಾಗಿದೆ. ಗಾಳಿ ಗಂಟೆಗೆ 150 ಕಿಮೀ ಗೂ ಹೆಚ್ಚು ವೇಗವಾಗಿ ಚಲಿಸುತ್ತಿದ್ದು, ಚಂಡಮಾರುತ ಉಗ್ರ ಸ್ವರೂಪ ಪಡೆದಿದೆ ಎನ್ನಲಾಗಿದೆ. ಈಗಾಗಲೇ 6 ಜನರು ಚಂಡಮಾರುತದ ದಾಳಿಯಿಂದ ಮೃತರಾಗಿದ್ದು, ಹಲವರು ಗಾಯಗೊಂಡಿದ್ದಾರೆ. ಗುಜರಾತ್ ಮತ್ತು ದಿಯು ಮುಖಾಂತರ ಚಂಡಮಾರುತ ಚಲಿಸಲಿದೆ.

Cyclone Vayu: More than 3 lakh people evacuated in Gujarat

ಸೈಕ್ಲೋನ್ ಉಂಟಾದ ಹಿನ್ನೆಲೆಯಲ್ಲಿ ಕೇಂದ್ರ ಮತ್ತು ಗುಜರಾತ್ ರಾಜ್ಯ ಸರ್ಕಾರಗಳು ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದ್ದು, ಈ ಕುರಿತು ಗೃಹ ಸಚಿವ ಅಮಿತ್ ಶಾ ಟ್ವೀಟ್ ಮಾಡಿದ್ದಾರೆ.

"ಸೈಕ್ಲೋಕ್ ಕಾರಣ ಈಗಾಗಲೇ ಮೂರು ಲ್ಷಕ್ಕೂ ಹೆಚ್ಚು ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದ್ದು, ಭಾರತೀಯ ಕರಾವಳಿ ರಕಗ್ಶಃಣಾ ಪಡೆ, ನೌಕಾನೆಲೆ, ಭೂ ಮತ್ತು ವಾಯುಸೇನೆಯ ಸಿಬ್ಬಂದಿ ರಕ್ಷಣಾ ಕಾರ್ಯ ನಡೆಸುತ್ತಿದ್ದಾರೆ. ವಿಮಾನ ಮತ್ತು ಹೆಲಿಕಾಪ್ಟರ್ ಮುಲಗ ಅಗತ್ಯ ನೆರವು ನೀಡಲಾಗುತ್ತಿದೆ. ಜನರ ಸುರಕ್ಷತೆಗೆ ನಾನು ದೇವರಲ್ಲಿ ಪ್ರಾರ್ಥಿಸುತ್ತೇನೆ" ಎಂದು ಗೃಹಸಚಿವ ಅಮಿತ್ ಶಾ ಟ್ವೀಟ್ ಮಾಡಿದ್ದಾರೆ.

ವಾಯು ಚಂಡಮಾರುತದ ಪ್ರಭಾವದಿಂದ ಕರ್ನಾಟಕ ಮತ್ತು ಕೇರಳದ ಕರಾವಳಿ ಭಾಗದಲ್ಲೂ ಮಳೆಯಾಗುವ ಸಾಧ್ಯತೆ ಇದೆ ಎಂದು ಸ್ಕೈಮೆಟ್ ವರದಿ ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+