ಗುಜರಾತ್ನ ರಾಸಾಯನಿಕ ಕಾರ್ಖಾನೆಯಲ್ಲಿ ಅಗ್ನಿ ಅವಘಡ
ಅಹಮದಾಬಾದ್, ಡಿಸೆಂಬರ್ 09: ಗುಜರಾತ್ನ ರಾಸಾಯನಿಕ ಕಾರ್ಖಾನೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.
ಅಹಮದಾಬಾದಿನ ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಬುಧವಾರ ಬೆಳಗಿನ ಜಾವ ಬೆಂಕಿ ಕಾಣಿಸಿಕೊಂಡಿತ್ತು. ವತ್ವಾ ಪ್ರದೇಶದಲ್ಲಿ ಘಟನೆ ಸಂಭವಿಸಿದೆ.
ಆಸ್ಪತ್ರೆಯ ಐಸಿಯುದಲ್ಲಿ ಬೆಂಕಿ: ಸುಟ್ಟ ಗಾಯಗಳಿಂದ 5 ಕೋವಿಡ್ ರೋಗಿಗಳು ಸಾವು
ಸ್ಥಳಕ್ಕೆ 20 ಕ್ಕೂ ಹೆಚ್ಚು ಅಗ್ನಿ ಶಾಮಕ ತಂಡದವರು ಸ್ಥಳಕ್ಕೆ ಆಗಮಿಸಿ, ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.
ಆದರೆ ಘಟನೆಗೆ ನಿಖರವಾದ ಕಾರಣ ಇದುವರೆಗೂ ತಿಳಿದುಬಂದಿಲ್ಲ. ಕಳೆದ ಭಾನುವಾರ ಇಲ್ಲಿನ ಬಗಾಪುರದಲ್ಲಿ ಬೆಂಕಿ ಹೊತ್ತಿಕೊಂಡು 20 ಕ್ಕೂ ಹೆಚ್ಚು ಅಂಗಡಿಗಳು ಸುಟ್ಟು ಕರಕಲಾಗಿದ್ದವು.