ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗುಜರಾತ್‌ನಲ್ಲಿ ಭೀಕರ ಬೆಂಕಿ ಆಕಸ್ಮಿಕ : ಸಾವಿಗೀಡಾದವರ ಸಂಖ್ಯೆ 17ಕ್ಕೆ ಏರಿಕೆ

|
Google Oneindia Kannada News

ಅಹಮದಾಬಾದ್, ಮೇ 24: ಗುಜರಾತ್‌ನ ಸೂರತ್ ನಗರದ ಶಾಪಿಂಗ್ ಕಾಂಪ್ಲೆಕ್ಸ್‌ನಲ್ಲಿ ನಡೆದ ಭೀಕರ ಅಗ್ನಿದುರಂತದಲ್ಲಿ ಮೃತಪಟ್ಟವರ ಸಂಖ್ಯೆ 17ಕ್ಕೆ ಏರಿದೆ. ಇವರಲ್ಲಿ ಹೆಚ್ಚಿನವರು ವಿದ್ಯಾರ್ಥಿಗಳು ಎನ್ನಲಾಗಿದೆ.

ಸೂರತ್‌ನ ಸರ್ತಾನಾ ಪ್ರದೇಶದಲ್ಲಿರುವ ತಕ್ಷಿಲಾ ಆರ್ಕೇಡ್‌ ಕಟ್ಟಡದ ಎರಡನೆಯ ಮಹಡಿಯಲ್ಲಿ ಬೆಂಕಿ ಆಕಸ್ಮಿಕ ಉಂಟಾಗಿದೆ. ಮಹಡಿಯಲ್ಲಿ ಕಾಣಿಸಿಕೊಂಡ ಬೆಂಕಿ ಕ್ಷಣಮಾತ್ರದಲ್ಲಿಯೇ ಎಲ್ಲೆಡೆ ಆವರಿಸಿಕೊಂಡಿತು. 18 ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತವಾಗಿವೆ.

ಬೆಂಗಳೂರಿನಲ್ಲಿ ಹೊತ್ತಿ ಉರಿದ 40 ಮಂದಿ ಪ್ರಯಾಣಿಕರಿದ್ದ ಖಾಸಗಿ ಬಸ್ ಬೆಂಗಳೂರಿನಲ್ಲಿ ಹೊತ್ತಿ ಉರಿದ 40 ಮಂದಿ ಪ್ರಯಾಣಿಕರಿದ್ದ ಖಾಸಗಿ ಬಸ್

ಕಟ್ಟಡದೊಳಗೆ ಸಿಲುಕಿದ್ದ ಅನೇಕರನ್ನು ರಕ್ಷಿಸಲಾಗಿದೆ. ಇನ್ನೂ ಅನೇಕರು ಒಳಗೆ ಸಿಲುಕಿಕೊಂಡಿದ್ದಾರೆ ಎನ್ನಲಾಗಿದೆ. ಬೆಂಕಿಯ ಕೆನ್ನಾಲಿಗೆಗಳು ನಾಲ್ಕನೆಯ ಮಹಡಿಗೆ ಆವರಿಸಿದ್ದು, ಅಲ್ಲಿದ್ದ ವಿದ್ಯಾರ್ಥಿಗಳು ಜೀವ ಭಯದಿಂದ ರಕ್ಷಿಸಿಕೊಳ್ಳಲು ಹೊರಕ್ಕೆ ಜಿಗಿಯುವ ಪ್ರಯತ್ನದಲ್ಲಿ ಬಿದ್ದಿದ್ದಾರೆ. ವಿದ್ಯಾರ್ಥಿಗಳು ಹೊರಕ್ಕೆ ಜಿಗಿಯುವ ದೃಶ್ಯಗಳನ್ನು ಕೆಲವರು ಮೊಬೈಲ್ ಫೋನ್‌ನಲ್ಲಿ ಸೆರೆಹಿಡಿದಿದ್ದು, ದೃಶ್ಯ ಅಘಾತಕಾರಿಯಾಗಿದೆ

ನಾಲ್ಕು ಮಹಡಿಯ ವಾಣಿಜ್ಯ ಮತ್ತು ವಸತಿ ಕಟ್ಟಡ ಇದಾಗಿದ್ದು, ಕಟ್ಟಡದ ನಾಲ್ಕನೆಯ ಹಾಗೂ ಕೊನೆಯ ಅಂತಸ್ತಿನಲ್ಲಿ ಕೋಚಿಂಗ್ ಸಂಸ್ಥೆಯೊಂದರ ತರಗತಿಗಳು ನಡೆಯುತ್ತಿದ್ದವು. ಬೆಂಕಿ ಆವರಿಸಿಕೊಳ್ಳುತ್ತಿದ್ದಂತೆಯೇ ಅನೇಕ ವಿದ್ಯಾರ್ಥಿಗಳು ಭಯದಿಂದ ಕೆಳಕ್ಕೆ ಜಿಗಿದಿದ್ದಾರೆ.

Fire in Gujarat Surat shopping complex at least 12 dead

ಗಾಯಾಳುಗಳನ್ನು ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಇದೇ ಕಟ್ಟಡದಲ್ಲಿ ಇರುವ ಅನೇಕ ಮನೆಗಳಿಗೆ ಕೂಡ ಬೆಂಕಿಯಿಂದ ತೀವ್ರ ಹಾನಿಯಾಗಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪುಣೆಯ ಬಟ್ಟೆ ಗೋದಾಮಿನಲ್ಲಿ ಬೆಂಕಿ: ಗಾಢ ನಿದ್ದೆಯಲ್ಲಿದ್ದ ಐವರ ಸಜೀವ ದಹನ ಪುಣೆಯ ಬಟ್ಟೆ ಗೋದಾಮಿನಲ್ಲಿ ಬೆಂಕಿ: ಗಾಢ ನಿದ್ದೆಯಲ್ಲಿದ್ದ ಐವರ ಸಜೀವ ದಹನ

ಪ್ರಧಾನಿ ನರೇಂದ್ರ ಮೋದಿ ಅವರು ಈ ಘಟನೆಗೆ ಆಘಾತ ವ್ಯಕ್ತಪಡಿಸಿದ್ದಾರೆ. ಸಂತ್ರಸ್ತರ ಕುಟುಂಬಕ್ಕೆ ಅವರು ಸಾಂತ್ವನ ಹೇಳಿದ್ದಾರೆ. ಗಾಯಾಳುಗಳು ಬೇಗನೆ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ. ಬೆಂಕಿ ಅವಘಡದಿಂದ ಸಂಕಷ್ಟದಲ್ಲಿ ಸಿಲುಕಿರುವವರಿಗೆ ಎಲ್ಲ ಅಗತ್ಯ ನೆರವು ನೀಡುವಂತೆ ಗುಜರಾತ್ ಸರ್ಕಾರ ಹಾಗೂ ಸ್ಥಳೀಯ ಆಡಳಿತಕ್ಕೆ ಸೂಚಿಸಿರುವುದಾಗಿ ಅವರು ತಿಳಿಸಿದ್ದಾರೆ.

ಗುಜರಾತ್ ನ ಸೂರತ್ ನಲ್ಲಿ ಅಗ್ನಿ ದುರಂತ ಸಂಭವಿಸಿ ಹಲವಾರು ಜನರು ಸಾವಿಗೀಡಾಗಿದ್ದಕ್ಕೆ ತುಂಬಾ ನೋವಾಗಿದೆ. ಆಪ್ತರನ್ನು ಕಳೆದುಕೊಂಡ ಕುಟುಂಬದ ಸದಸ್ಯರಿಗೆ ನನ್ನ ಸಾಂತ್ವನ. ಗಾಯಗೊಂಡವರು ಶೀಘ್ರವಾಗಿ ಗುಣಮುಖರಾಗಲೆಂದು ಹಾರೈಸುತ್ತೇನೆ. ಬಿಜೆಪಿ ಕಾರ್ಯಕರ್ತರು ಸಹಾಯದ ಅಗತ್ಯವಿರುವವರಿಗೆ ಸಹಾಯ ಮಾಡಬೇಕೆಂದು ಆಗ್ರಹಿಸುತ್ತೇನೆ ಎಂದು ಅಮಿತ್ ಶಾ ಅವರು ಟ್ವೀಟ್ ಮಾಡಿದ್ದಾರೆ.

English summary
A massive fire breaks out in a Shopping complex in Gujarat's Surat. Death toll in fire at at a coaching centre in Sarthana area rises to 17.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X