• search
  • Live TV
ಅಹಮದಾಬಾದ್ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಅಹಮದಾಬಾದ್ ಹೆದ್ದಾರಿಯಲ್ಲಿ ಅಪಘಾತ, 5 ಸಾವು

|

ಅಹಮದಾಬಾದ್, ಆ. 17: ಅಹಮದಾಬಾದ್-ವಡೋದರಾ ನಡುವಿನ ರಾಷ್ಟ್ರೀಯ ಹೆದ್ದಾರಿ 8ರಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಐವರು ಮೃತಪಟ್ಟಿದ್ದು, ನಾಲ್ವರಿಗೆ ತೀವ್ರಗಾಯಗಳಾಗಿವೆ.

ಖೇಡಾ ಜಿಲ್ಲೆಯ ನಾಡಿಯಾದ್ ಎಂಬಲ್ಲಿ ಸಂಭವಿಸಿದ ಈ ಅಪಘಾತದಲ್ಲಿ ಎರಡು ಕಾರುಗಳು ಮುಖಾಮುಖಿ ಡಿಕ್ಕಿಯಾಗಿದ್ದು, ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಾಯಗೊಂಡವರನ್ನು ಸಮೀಪದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಘಟನೆ ಬಗ್ಗೆ ಪ್ರತಿಕ್ರಿಯಿಸಿದ ನಾಡಿಯಾದ್ ಅಗ್ನಿ ಶಾಮಕದಳ ಎಸ್ಪಿ ದೀಕ್ಷಿತ್ ಪಟೇಲ್, ಐವರು ಸ್ಥಳದಲ್ಲೇ ಮೃತರಾಗಿದ್ದು, ನಾಲ್ವರು ತೀವ್ರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ, ಆರೋಗ್ಯ ಸ್ಥಿತಿ ಇನ್ನೂ ಗಂಭೀರವಾಗಿದೆ. ಭಾನುವಾರ ತಡರಾತ್ರಿ ನಡೆದ ಈ ಘಟನೆ ಬಗ್ಗೆ ತಿಳಿದ ತಕ್ಷಣ ಸ್ಥಳಕ್ಕೆ ಆಗಮಿಸಿ ಕ್ರಮ ಕೈಗೊಳ್ಳಲಾಯಿತು ಎಂದಿದ್ದಾರೆ.

ಮೂವರು ಪೊಲೀಸರು ಘಟನಾ ಸ್ಥಳಕ್ಕೆ ದೌಡಾಯಿಸಿದ್ದರು. ಅಗ್ನಿ ಶಾಮಕ ದಳ ಸಿಬ್ಬಂದಿ ನೆರವಿನಿಂದ ಗಾಯಗೊಂಡವರನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಮೃತರೆಲ್ಲರೂ ಅಹಮದಾಬಾದ್ ಮೂಲದವರು ಎಂದು ತಿಳಿದು ಬಂದಿದೆ. ಇನ್ನೂ ಪೂರ್ಣ ಪ್ರಮಾಣದ ಗುರುತು ಪತ್ತೆಯಾಗಿಲ್ಲ, ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ನಾಡಿಯಾದ್ ಠಾಣೆ ಪೊಲೀಸರು ಹೇಳಿದ್ದಾರೆ.

English summary
Five persons were killed and four critically injured when two cars collided on National Highway-8 at Nadiad in the Kheda district of Gujarat on Sunday night.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X