ಗುಜರಾತ್‌ನಲ್ಲಿ ಕೊವಿಡ್-19 ಸೋಂಕಿತರ ಸೇವೆಗೆ 60 ಹೊಸ ಆಂಬುಲೆನ್ಸ್

ಅಹ್ಮದಾಬಾದ್, ಏಪ್ರಿಲ್ 14: ದೇಶಾದ್ಯಂತ ಕೊರೊನಾವೈರಸ್ ಸೋಂಕಿನ ಅಟ್ಟಹಾಸ ಮಿರಿ ಮೀರುತ್ತಿದೆ. ಗುಜರಾತ್‌ನಲ್ಲಿ ಕೊವಿಡ್-19 ಸೋಂಕಿತ ಪ್ರಕರಣಗಳ ಸಂಖ್ಯೆ ಏರಿಕೆ ಬೆನ್ನಲ್ಲೇ ಆಂಬುಲೆನ್ಸ್, ಬೆಡ್ ಹಾಗೂ ಆರೋಗ್ಯ ವ್ಯವಸ್ಥೆಗಳ ಸಮಸ್ಯೆ ಎದುರಾಗಿದೆ.

ಕಳೆದ 10 ದಿನಗಳಿಂದ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಇದರಿಂದಾಗಿ 108 ಆಂಬುಲೆನ್ಸ್ ಗಳಿಲ್ಲದೇ ಕೊವಿಡ್-19 ಸೋಂಕಿತರ ಚಿಕಿತ್ಸೆಗೆ ತೀವ್ರ ಅಡಚಣೆ ಉಂಟಾಗಿತ್ತು. ಇದನ್ನು ಗಮನದಲ್ಲಿ ಇಟ್ಟುಕೊಂಡು ಆರೋಗ್ಯ ಇಲಾಖೆಯು ಹೊಸದಾಗಿ ಆಂಬುಲೆನ್ಸ್ ವ್ಯವಸ್ಥೆಯನ್ನು ಕಲ್ಪಿಸಿದೆ.

ಗುಜರಾತ್‌ನಲ್ಲಿ ಆಂಬುಲೆನ್ಸ್ ಸಮಸ್ಯೆ ನಿವಾರಿಸಲು ಹಾಗೂ ಕೊವಿಡ್-19 ಸೋಂಕಿತರ ಅನುಕೂಲಕ್ಕಾಗಿ ಅಹ್ಮದಾಬಾದ್ ಸಿವಿಲ್ ಆಸ್ಪತ್ರೆಯ ವ್ಯಾಪ್ತಿಯಲ್ಲಿ ಹೆಚ್ಚುವರಿಯಾಗಿ 60 ಆಂಬುಲೆನ್ಸ್ ಗಳು ಸೇವೆ ಆರಂಭಿಸಿವೆ. ರಾಜ್ಯದಲ್ಲಿ ಪ್ರತಿನಿತ್ಯ 4500ಕ್ಕೂ ಹೆಚ್ಚು ಸೋಂಕಿತ ಪ್ರಕರಣಗಳು ವರದಿಯಾಗುತ್ತಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಸೋಂಕಿತರ ಸಂಖ್ಯೆ ಹೆಚ್ಚಾಗುವ ಆತಂಕವಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

Gujarat: 60 More Ambulances Added To Emergency Service For Covid-19 Patients

ಗುಜರಾತ್‌ನಲ್ಲಿ ಕೊರೊನಾವೈರಸ್ ಅಂಕಿ-ಅಂಶ:

ರಾಜ್ಯದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ 6490 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 3,60,206ಕ್ಕೆ ಏರಿಕೆಯಾಗಿದೆ. ಒಂದು ದಿನದಲ್ಲಿ 67 ಜನ ಪ್ರಾಣ ಬಿಟ್ಟಿದ್ದು, ಸಾವಿನ ಸಂಖ್ಯೆ 4922ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ 34555 ಸಕ್ರಿಯ ಪ್ರಕರಣಗಳಿವೆ ಎಂದು ಗೊತ್ತಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+