ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಉಪ ಚುನಾವಣೆ ಗೆಲುವು ಮುಂದಿನ ಚುನಾವಣೆಗಳ ಟ್ರೇಲರ್ ಅಷ್ಟೇ: ಗುಜರಾತ್ ಸಿಎಂ

|
Google Oneindia Kannada News

ಅಹಮದಾಬಾದ್, ನವೆಂಬರ್ 10: ಗುಜರಾತ್ ಉಪ ಚುನಾವಣೆಯಲ್ಲಿ ಕ್ಲೀನ್ ಸ್ವೀಪ್ ಸಾಧಿಸುವತ್ತ ಆಡಳಿತಾರೂಢ ಬಿಜೆಪಿ ಮುನ್ನಡೆದಿದೆ. ನವೆಂಬರ್ 3ರಂದು ನಡೆದ ಎಂಟು ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಎಲ್ಲ ಕ್ಷೇತ್ರಗಳಲ್ಲಿಯೂ ಮುನ್ನಡೆ ಸಾಧಿಸಿದೆ. ಇದು ಮುಂಬರುವ ಚುನಾವಣೆಗಳ ಟ್ರೇಲರ್ ಅಷ್ಟೇ ಎಂದು ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾಣಿ ಹೇಳಿದ್ದಾರೆ.

'ಕಾಂಗ್ರೆಸ್ ಒಂದು ಮುಳುಗುವ ಹಡಗು. ಅವರು ಜನರಿಂದ ಸಂಪರ್ಕ ಕಡಿದುಕೊಂಡಿದ್ದಾರೆ. ಅವರ ವಿರುದ್ಧ ಎಲ್ಲೆಡೆ ಫಲಿತಾಂಶ ಬರುತ್ತಿದೆ. ಅದು ನಾಯಕತ್ವವೇ ಇಲ್ಲದ ಪಕ್ಷ. ಗುಜರಾತ್ ಉಪ ಚುನಾವಣೆಯ ಫಲಿತಾಂಶವು ಮುಂಬರುವ ಸ್ಥಳೀಯ ಚುನಾವಣೆಗಳ ಟ್ರೇಲರ್ ಮಾತ್ರ' ಎಂದು ವಿಜಯ್ ರೂಪಾಣಿ ಹೇಳಿದ್ದಾರೆ.

ಬಿಹಾರ ವಿಧಾನಸಭಾ ಚುನಾವಣಾ ಫಲಿತಾಂಶ: ಇಲ್ಲಿದೆ ಕ್ಷಣಕ್ಷಣದ ಮಾಹಿತಿಬಿಹಾರ ವಿಧಾನಸಭಾ ಚುನಾವಣಾ ಫಲಿತಾಂಶ: ಇಲ್ಲಿದೆ ಕ್ಷಣಕ್ಷಣದ ಮಾಹಿತಿ

ಗುಜರಾತ್, ಬಿಹಾರ, ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶ ಸೇರಿದಂತೆ ಚುನಾವಣೆ ನಡೆದ ಎಲ್ಲ ರಾಜ್ಯಗಳಲ್ಲಿಯೂ ಕಾಂಗ್ರೆಸ್ ನಡೆಸಿದ ನಕಾರಾತ್ಮಕ ಪ್ರಚಾರ ಹಾಗೂ ಚಟುವಟಿಕೆಗಳನ್ನು ಮತದಾರರು ತಿರಸ್ಕರಿಸಿದ್ದಾರೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

 Gujarat Assembly Bypoll Results 2020: CM Vijay Rupani Says Trailer For Upcoming Elections

ಗುಜರಾತ್‌ನ ಅಬ್ದಾಸಾ, ದಾಂಗ್ಸ್, ಧಾರಿ, ಗಢಾದ, ಕಪ್ರಡ, ಕರ್ಜಾನ್, ಮೊರ್ಬಿ ಮತ್ತು ಲಿಂಬ್ಡಿ ವಿಧಾನಸಭೆ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆದಿತ್ತು. ಕಾಂಗ್ರೆಸ್‌ನ ಹಾಲಿ ಶಾಸಕರು ಜೂನ್‌ನಲ್ಲಿ ರಾಜ್ಯಸಭೆ ಚುನಾವಣೆಗೂ ಮುನ್ನ ರಾಜೀನಾಮೆ ನೀಡಿದ್ದರಿಂದ ಈ ಕ್ಷೇತ್ರಗಳು ತೆರವಾಗಿದ್ದವು. ಹೀಗಾಗಿ ಉಪ ಚುನಾವಣೆ ನಡೆಸಲಾಗಿತ್ತು. ಅವರ ರಾಜೀನಾಮೆಯಿಂದ ರಾಜ್ಯಸಭೆಯ ನಾಲ್ಕು ಸೀಟುಗಳಲ್ಲಿ ಮೂರು ಮಂದಿಯನ್ನು ಆಯ್ಕೆ ಮಾಡಲು ಬಿಜೆಪಿಗೆ ಸಹಾಯವಾಗಿತ್ತು.

ಇವರಲ್ಲಿ ಐವರು ಶಾಸಕರು ಬಳಿಕ ಬಿಜೆಪಿ ಸೇರ್ಪಡೆಯಾಗಿದ್ದು, ಬಿಜೆಪಿ ಅಭ್ಯರ್ಥಿಗಳಾಗಿ ಉಪ ಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ.

English summary
Gujarat Assembly Bypoll Results 2020: BJP is set for clean sweep in all 8 seats and CM Vijay Rupani said it is just a trailer for upcoming local elections.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X