ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವಿಧಾನಸಭೆ ಚುನಾವಣೆ: ಗುಜರಾತ್‌ಗೆ ಅರವಿಂದ್‌ ಕೇಜ್ರಿವಾಲ್ ಭೇಟಿ

|
Google Oneindia Kannada News

ಅಹಮದಾಬಾದ್ ಆಗಸ್ಟ್ 22: ಗುಜರಾತ್ ವಿಧಾನಸಭಾ ಚುನಾವಣೆ ಪ್ರಚಾರ ದಿನಕಳೆದಂತೆ ರಂಗೇರುತ್ತಿದೆ. ಚುನಾವಣಾ ದಿನಾಂಕ ಘೋಷಣೆಗೂ ಮುನ್ನ ಆಮ್ ಆದ್ಮಿ ಪಕ್ಷ ಬಿರುಸಿನ ಪ್ರಚಾರ ಕೈಗೊಂಡಿದೆ. ಹಲವಾರು ಭರವಸೆಗಳ ಮೂಲಕ ಜನರನ್ನು ವಿಶ್ವಸಕ್ಕೆ ತೆಗೆದುಕೊಳ್ಳುತ್ತಿದೆ. ಶತಾಯಗತಾಯ ಬಿಜೆಪಿ ಭದ್ರಕೋಟೆಯನ್ನು ಒಡೆಯುವ ಸಂಚು ರೂಪಿಸಿದೆ. ಇದರಿಂದಾಗಿ ಎಎಪಿ ನಾಯಕ ಮತ್ತು ದೆಹಲಿ ಮುಖ್ಯಮಂತ್ರಿ ಇಂದಿನಿಂದ ಗುಜರಾತ್‌ಗೆ 2 ದಿನಗಳ ಭೇಟಿ ನೀಡಲಿದ್ದಾರೆ. ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಕೂಡ ಅವರೊಂದಿಗೆ ತೆರಳಲಿದ್ದಾರೆ. ತಮ್ಮ ಭೇಟಿಯ ಸಮಯದಲ್ಲಿ ನಾಯಕರು ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಜೊತೆಗೆ ಯುವಕರೊಂದಿಗೆ ಉದ್ಯೋಗ ಮತ್ತು ಶಿಕ್ಷಣದ ಕುರಿತು ಚರ್ಚೆ ನಡೆಸಲಿದ್ದಾರೆ. ದೆಹಲಿಯ ಅಬಕಾರಿ ನೀತಿಯಲ್ಲಿನ ಅಕ್ರಮಗಳು ಮತ್ತು ಸಿಸೋಡಿಯಾ ವಿರುದ್ಧ ಕೇಂದ್ರೀಯ ತನಿಖಾ ದಳ (ಸಿಬಿಐ) ಎಫ್‌ಐಆರ್ ದಾಖಲಿಸಿದ ನಡುವೆ ಅವರ ಭೇಟಿ ಮಹತ್ವದ್ದಾಗಿದೆ.

ನಾಯಕರು ಹಿಮ್ಮತ್‌ನಗರ ಮತ್ತು ಭಾವನಗರದಲ್ಲಿ ಜನರನ್ನು ಭೇಟಿ ಮಾಡಲಿದ್ದಾರೆ ಎಂದು ಗುಜರಾತ್ ಎಎಪಿ ಪ್ರಧಾನ ಕಾರ್ಯದರ್ಶಿ ಮನೋಜ್ ಸೊರಥಿಯಾ ವಿಡಿಯೋ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಸೋಮವಾರ ಅಹಮದಾಬಾದ್ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಕೇಜ್ರಿವಾಲ್ ಮತ್ತು ಸಿಸೋಡಿಯಾ ಅವರು ರಾಜ್ಯದಲ್ಲಿ ತಮ್ಮ ಕಾರ್ಯಕ್ರಮಗಳನ್ನು ಪ್ರಾರಂಭಿಸುವ ಮೊದಲು ನಗರದಲ್ಲಿ ಜಂಟಿ ಪತ್ರಿಕಾಗೋಷ್ಠಿಯನ್ನು ನಡೆಸಲಿದ್ದಾರೆ.

ಇಂದು ಹಿಮತ್‌ನಗರದ ಕಾರ್ಯಕ್ರಮದಲ್ಲಿ ಕೇಜ್ರಿವಾಲ್ ಭಾಗಿ

ಇಂದು ಹಿಮತ್‌ನಗರದ ಕಾರ್ಯಕ್ರಮದಲ್ಲಿ ಕೇಜ್ರಿವಾಲ್ ಭಾಗಿ

ಕೇಜ್ರಿವಾಲ್ ಸೋಮವಾರ ಹಿಮತ್‌ನಗರದಲ್ಲಿ ಟೌನ್ ಹಾಲ್ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ಅಲ್ಲಿ ಅವರು ಗುಜರಾತ್ ಜನತೆಗೆ ಮಹತ್ವದ ಘೋಷಣೆ ಮಾಡಲಿದ್ದಾರೆ ಎಂದು ಸೊರಥಿಯಾ ಹೇಳಿದ್ದಾರೆ. ಇದು ಈ ತಿಂಗಳಲ್ಲಿ ಅವರ ನಾಲ್ಕನೇ ಗುಜರಾತ್ ಭೇಟಿಯಾಗಿದೆ.

ಉತ್ತರ ಗುಜರಾತ್‌ಗೆ ಹಿಂದಿನ ಭೇಟಿಯ ಸಂದರ್ಭದಲ್ಲಿ, ಕೇಜ್ರಿವಾಲ್ ಅವರು ಗುಜರಾತ್‌ನ ಜನರಿಗೆ ಉಚಿತ ವಿದ್ಯುತ್ ಪೂರೈಕೆಯಿಂದ ಹಿಡಿದು ರಾಜ್ಯದಲ್ಲಿ ಆರೋಗ್ಯ ಸೇವೆಗಳನ್ನು ಸುಧಾರಿಸುವವರೆಗೆ ಹಲವಾರು ಭರವಸೆಗಳನ್ನು ನೀಡಿದರು. ಈ ವರ್ಷದ ಡಿಸೆಂಬರ್‌ನಲ್ಲಿ ಗುಜರಾತ್ ವಿಧಾನಸಭೆ ಚುನಾವಣೆ ನಡೆಯಲಿದೆ.

ಹೊಸ ಶಾಲೆಗಳನ್ನು ತೆರೆಯುವ ಭರವಸೆ

ಹೊಸ ಶಾಲೆಗಳನ್ನು ತೆರೆಯುವ ಭರವಸೆ

ಪ್ರಸ್ತುತ ಬಿಜೆಪಿ ಆಡಳಿತದಲ್ಲಿರುವ ಗುಜರಾತ್‌ನಲ್ಲಿ ಮುಂಬರುವ ಚುನಾವಣೆಯಲ್ಲಿ ಆಮ್ ಆದ್ಮಿ ಗೆಲುವು ಸಾಧಿಸಿದರೆ ಮೂಲ ಸೌಕರ್ಯಗಳನ್ನು ಈಡೇರಿಸುವುದಾಗಿ ಅರವಿಂದ್ ಕೇಜ್ರಿವಾಲ್ ಭರವಸೆ ನೀಡಿದ್ದಾರೆ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕಳೆದ ಮಂಗಳವಾರ ಚುನಾವಣೆಗೆ ಒಳಪಡುವ ರಾಜ್ಯದ ಜನರಿಗೆ ಉಚಿತ ಮತ್ತು ಗುಣಮಟ್ಟದ ಶಿಕ್ಷಣ ಹಾಗೂ ಹೊಸ ಶಾಲೆಗಳನ್ನು ತೆರೆಯುವುದಾಗಿ ಘೋಷಿಸಿದ್ದಾರೆ. ವರ್ಷಾಂತ್ಯದ ವಿಧಾನಸಭೆ ಚುನಾವಣೆಯಲ್ಲಿ ಆಮ್‌ ಆದ್ಮಿ ಪಕ್ಷ ಅಧಿಕಾರಕ್ಕೆ ಆಯ್ಕೆಯಾದರೆ ಅಸ್ತಿತ್ವದಲ್ಲಿರುವ ಸರ್ಕಾರಿ ಶಾಲೆಗಳ ಮೂಲಸೌಕರ್ಯವನ್ನು ಸುಧಾರಿಸುವುದಾಗಿ ಮತ್ತು ರಾಜ್ಯಾದ್ಯಂತ ಹೆಚ್ಚಿನ ಸಂಖ್ಯೆಯಲ್ಲಿ ಹೊಸ ಶಾಲೆಗಳನ್ನು ತೆರೆಯುವುದಾಗಿ ಎಎಪಿ ಸಂಚಾಲಕ ಅರವಿಂದ್ ಕೇಜ್ರಿವಾಲ್ ಭರವಸೆ ನೀಡಿದ್ದಾರೆ.

ಶಿಕ್ಷಣ ಅಭಿವೃದ್ಧಿಗೆ ಹೆಚ್ಚು ಒತ್ತು

ಶಿಕ್ಷಣ ಅಭಿವೃದ್ಧಿಗೆ ಹೆಚ್ಚು ಒತ್ತು

ಕಳೆದ ಮಂಗಳವಾರ ಇಲ್ಲಿನ ಟೌನ್ ಹಾಲ್ ಸಭೆಯಲ್ಲಿ ಮಾತನಾಡಿದ ಅವರು, "ಗುಜರಾತ್‌ನಲ್ಲಿ ಜನಿಸಿದ ಎಲ್ಲರಿಗೂ ಉಚಿತ ಮತ್ತು ಗುಣಮಟ್ಟದ ಶಿಕ್ಷಣ ಸಿಗುತ್ತದೆ. ನಾವು ಯಾರನ್ನೂ ಒತ್ತಾಯಿಸುವುದಿಲ್ಲ. ಪೋಷಕರಿಗೆ ಹಣವಿದ್ದರೆ, ಅವರು ತಮ್ಮ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಕಳುಹಿಸಬಹುದು. ಆದರೆ ಅವರ ಬಳಿ ಹಣವಿಲ್ಲದಿದ್ದರೆ, ಹಣದ ಕೊರತೆ ಬರಲು ನಾವು ಬಿಡುವುದಿಲ್ಲ. ಅವರ ಮಕ್ಕಳಿಗೆ ಅತ್ಯುತ್ತಮ ಶಿಕ್ಷಣವನ್ನು ಉಚಿತವಾಗಿ ನೀಡುತ್ತೇವೆ'' ಎಂದು ಹೇಳಿದರು. ಗುಜರಾತ್‌ನಲ್ಲಿ ಎಎಪಿ ಮುಂದಿನ ಸರ್ಕಾರವನ್ನು ರಚಿಸಿದರೆ, ದೆಹಲಿಯಲ್ಲಿ ಮಾಡಿರುವಂತಹ ಹೆಚ್ಚುವರಿ ಹಣವನ್ನು ಶಾಲೆಗಳಿಗಾಗಿ ಸಂಗ್ರಹಿಸಲಾಗುವುದು ಎಂದು ಕೇಜ್ರಿವಾಲ್ ಹೇಳಿದರು. ಖಾಸಗಿ ಶಾಲೆಗಳು ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ಮತ್ತು ಸಮವಸ್ತ್ರಗಳನ್ನು ಮಾರಾಟ ಮಾಡುವ ಅಭ್ಯಾಸವನ್ನು ತಕ್ಷಣವೇ ನಿಲ್ಲಿಸಲಾಗುತ್ತದೆ ಎಂದು ದೆಹಲಿ ಸಿಎಂ ಹೇಳಿದ್ದಾರೆ.

'ಗುಜರಾತ್ ಶೀಘ್ರದಲ್ಲೇ ಬದಲಾಗಲಿದೆ'

'ಗುಜರಾತ್ ಶೀಘ್ರದಲ್ಲೇ ಬದಲಾಗಲಿದೆ'

ಈಗಾಗಲೇ ಅರವಿಂದ್ ಕೇಜ್ರಿವಾಲ್ ಅವರ ಆಮ್‌ ಆದ್ಮಿ ಪಕ್ಷವು ಎರಡು ಅಭ್ಯರ್ಥಿಗಳ ಪಟ್ಟಿಯನ್ನಿ ಬಿಡುಗಡೆ ಮಾಡಿದೆ. ಹತ್ತು ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದರೆ, ಮತ್ತೊಂದರಲ್ಲಿ ಒಂಬತ್ತು ಅಭ್ಯಾರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.

2022 ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಎಲ್ಲಾ 182 ಸ್ಥಾನಗಳಲ್ಲಿ ಪಕ್ಷ ಸ್ಪರ್ಧಿಸಲಿದೆ ಎಂದು ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಪ್ರಕಟಿಸಿದ್ದಾರೆ. 2021 ರಲ್ಲಿ ನಡೆದ ಸೂರತ್ ಮುನ್ಸಿಪಲ್ ಕಾರ್ಪೊರೇಷನ್ (ಎಸ್‌ಎಂಸಿ) ಚುನಾವಣೆಯಲ್ಲಿ 120 ಸ್ಥಾನಗಳ ಪೈಕಿ 27 ಸ್ಥಾನಗಳನ್ನು ಗೆದ್ದ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅರವಿಂದ್‌ ಕೇಜ್ರಿವಾಲ್‌, "ಎಎಪಿ 2022 ರ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಪ್ರತಿಯೊಂದು ಸ್ಥಾನದಲ್ಲೂ ಸ್ಪರ್ಧಿಸಲಿದೆ. ಎಎಪಿಯು ಬಿಜೆಪಿ ಮತ್ತು ಕಾಂಗ್ರೆಸ್‌ ಹಿಂದಿಕ್ಕಿ ಮುನ್ನಡೆಯುವ ವಿಶ್ವಾಸವಿದೆ. ಗುಜರಾತ್ ಶೀಘ್ರದಲ್ಲೇ ಬದಲಾಗುತ್ತದೆ" ಎಂದು ಹೇಳಿದ್ದರು.

Recommended Video

ಮುಂಬೈನ ರಸ್ತೆಯಲ್ಲಿ ಯಾರಿಗೂ ಗೊತ್ತಾಗದಂತೆ ಬೈಕ್ ನಲ್ಲಿ ಸುತ್ತಾಡಿದ ವಿರಾಟ್ ದಂಪತಿ | OneIndia Kannada

English summary
Gujarat Assembly Elections: AAP leader and Delhi Chief Minister will be on a 2-day visit to Gujarat from today. Delhi Deputy CM Manish Sisodia will also accompany him
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X