ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗುಜರಾತ್: ಅಧಿಕಾರ ಬಿಟ್ಟು ಬಿಜೆಪಿ ಸೇರಲಿದ್ದಾರೆ ಐಎಎಸ್ ಅಧಿಕಾರಿ

|
Google Oneindia Kannada News

ಲಕ್ನೋ,ಜನವರಿ 14: ಗುಜರಾತ್ ಕೇಡರ್‌ನ ಐಎಎಸ್ ಅಧಿಕಾರಿ ಎ.ಕೆ. ಶರ್ಮಾ ಶೀಘ್ರ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ.ಎಕೆ ಶರ್ಮಾ ಇತ್ತೀಚೆಗಷ್ಟೇ ಸರ್ಕಾರದ ಸೇವೆಯಿಂದ ಸ್ವಯಂ ನಿವೃತ್ತಿ ಪಡೆದಿದ್ದರು.

ಜನವರಿ 18ಕ್ಕೆ ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಈ ಚುನಾವಣೆಯಲ್ಲಿ ಶರ್ಮಾ ಅವರನ್ನು ಪಕ್ಷದಿಂದ ಅಭ್ಯರ್ಥಿಯಾಗಿ ಕಣಕ್ಕಿಳಿಸಲಾಗುತ್ತಿದೆಯೇ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಚಂದ್ರಮೋಹನ್, 'ಚುನಾವಣೆಗೆ ಸ್ಪರ್ಧಿಸುವ ಎಲ್ಲ ಅಭ್ಯರ್ಥಿಗಳ ಬಗ್ಗೆ ಕೇಂದ್ರ ನಾಯಕರೇ ಅಂತಿಮಗೊಳಿಸುತ್ತಾರೆ' ಎಂದು ಹೇಳಿದರು.

ಸಂಪುಟ ವಿಸ್ತರಣೆ: ಅಸಮಾಧಾನ ವ್ಯಕ್ತಪಡಿಸಿದ ಬಿಜೆಪಿ ನಿಷ್ಠ ಶಾಸಕಸಂಪುಟ ವಿಸ್ತರಣೆ: ಅಸಮಾಧಾನ ವ್ಯಕ್ತಪಡಿಸಿದ ಬಿಜೆಪಿ ನಿಷ್ಠ ಶಾಸಕ

ಪಕ್ಷಕ್ಕಾಗಿ ಕೆಲಸ ಮಾಡುವ ಇಚ್ಛೆ ವ್ಯಕ್ತಪಡಿಸಿರುವ ಶರ್ಮಾ ಅವರು, ಶೀಘ್ರದಲ್ಲೇ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ಪಕ್ಷದ ವಕ್ತಾರ ಚಂದ್ರ ಮೋಹನ್ ಗುರುವಾರ ತಿಳಿಸಿದ್ದಾರೆ.

Gujarat Cadre IAS Officer To Join BJP In UP After Taking VRS

ಅವರು ಬಿಜೆಪಿಗೆ ಸೇರ್ಪಡೆಗೊಳ್ಳುವ ಸಮಯದಲ್ಲೇ, ಉತ್ತರ ಪ್ರದೇಶದ ವಿಧಾನಪರಿಷತ್‌ನ 12 ಸ್ಥಾನಗಳಿಗೆ ಜನವರಿ 28ರಂದು ನಡೆಯುವ ಚುನಾವಣೆಗೆ ಬಿಜೆಪಿಯ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗುತ್ತದೆ.

ಉತ್ತರ ಪ್ರದೇಶದ ಮಾವು ಜಿಲ್ಲೆಯ 1988 ಬ್ಯಾಚ್‌ನ ಅಧಿಕಾರಿ ಶರ್ಮಾ, ಪ್ರಧಾನಿ ನರೇಂದ್ರ ಮೋದಿ ಅವರ ಆಪ್ತರಾಗಿದ್ದಾರೆ. ಜತೆಗೆ ಗುಜರಾತ್‌ನಲ್ಲಿ ನರೇಂದ್ರ ಮೋದಿ ಮುಖ್ಯಮಂತ್ರಿಯಾಗಿದ್ದಾ ಅವರ ಜೊತೆ ಕೆಲಸ ಮಾಡಿದ್ದರು.

English summary
Gujarat cadre IAS officer A.K Sharma, who recently took voluntary retirement from service, will be joining the BJP here soon, a party spokesperson said on Thursday. The 1988 batch officer from Mau district in Uttar Pradesh is considered close to Prime Minister Narendra Modi and had worked with him in Gujarat.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X