• search
  • Live TV
ಅಹಮದಾಬಾದ್ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾಣಿಗೆ ಕೊರೊನಾ ನೆಗೆಟಿವ್, ಆಸ್ಪತ್ರೆಯಿಂದ ಡಿಸ್ಚಾರ್ಜ್

|

ಅಹಮದಾಬಾದ್,ಫೆಬ್ರವರಿ 21:ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾಣಿಗೆ ಕೊರೊನಾ ನೆಗೆಟಿವ್ ಬಂದಿದ್ದು, ಆಸ್ಪತ್ರೆಯಿಂದ ಬಿಡುಗಡೆಯಾಗಿರುವುದಾಗಿ ಮಾಹಿತಿ ಲಭ್ಯವಾಗಿದೆ.

ವಿಜಯ್ ರೂಪಾಣಿಯವರಿಗೆ ಫೆ.15 ರಂದು ಕೊರೊನಾ ಸೋಂಕು ದೃಢಪಟ್ಟಿತ್ತು.ವಡೋದರ ಮುನಿಸಿಪಲ್ ಚುನಾವಣಾ ಪ್ರಚಾರ ರ‍್ಯಾಲಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ಅವರು ತೀವ್ರ ದಣಿದು ವೇದಿಕೆಯಲ್ಲೇ ಕುಸಿದು ಬಿದ್ದಿದ್ದರು. ಅಹಮದಾಬಾದ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾಣಿಗೆ ಕೊರೊನಾ ಸೋಂಕು

ರಾಜಕೀಯ ಚಟುವಟಿಕೆಗಳಲ್ಲಿ ಸಿಎಂ ಅವರು ದಣಿದಿದ್ದಾರೆ. ಆದ್ದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಒಂದು ದಿನ ವೈದ್ಯ ನಿಗಾ ಘಟಕದಲ್ಲಿರಿಸಿಲಾಗಿತ್ತು, ಕಳೆದ ಭಾನುವಾರ ರಾತ್ರಿ ಆರ್‍ಟಿ-ಪಿಸಿಆರ್ ಟೆಸ್ಟ್‍ಗೆ ಒಳಪಡಿಸಿದಾಗ ಕೊರೊನಾ ಸೋಂಕು ಪತ್ತೆಯಾಗಿತ್ತು.

ಭಾನುವಾರ, ವಡೋದರದ ನಿಜಪುರ ಪ್ರದೇಶದಲ್ಲಿ ಆಯೋಜಿಸಿದ್ದ ಮುಂಬರುವ ಸ್ಥಳೀಯ ಚುನಾವಣೆಗಳ ಪ್ರಚಾರ ಕಾರ್ಯದ ರ್ಯಾಲಿಯಲ್ಲಿ ಭಾಗವಹಿಸಿ ಮುಖ್ಯಮಂತ್ರಿ ರೂಪಾನಿ (64) ಅವರು ಕಾರ್ಯಕ್ರಮ ನಡೆಯುತ್ತಿರುವ ಸಂದರ್ಭದಲ್ಲಿ ಅವರ ಆರೋಗ್ಯದಲ್ಲಿ ವ್ಯತ್ಯಾಸ ಕಂಡುಬಂದಿತ್ತು.

ತಕ್ಷಣ ಕಾರ್ಯಕ್ರಮ ರದ್ದುಗೊಳಿಸಿ, ಅಹಮದಾಬಾದ್‍ಗೆ ಕರೆದುತಂದು ಯು.ಎನ್. ಮೆಹತಾ ಆಸ್ಪತ್ರೆಗೆ ಸೇರಿಸಲಾಗಿತ್ತು. ಇದೀಗ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.

English summary
Gujarat Chief Minister Vijay Rupani tested negative for COVID-19 via the latest RT-PCR test on Sunday
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X