ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸೆಪ್ಟೆಂಬರ್ 13ರಂದು ಗುಜರಾತ್ ಸಿಎಂ ಆಗಿ ಭೂಪೇಂದ್ರ ಪಟೇಲ್ ಪದಗ್ರಹಣ

|
Google Oneindia Kannada News

ಅಹ್ಮದಾಬಾದ್, ಸೆಪ್ಟೆಂಬರ್ 12: ಗುಜರಾತ್ ನೂತನ ಮುಖ್ಯಮಂತ್ರಿ ಆಗಿ ಆಯ್ಕೆ ಆಗಿರುವ ಭೂಪೇಂದ್ರ ಪಟೇಲ್ ಸಪ್ಟೆಂಬರ್ 13ರಂದು ಅಧಿಕೃತವಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ರಾಜ್ಯಪಾಲರು ತಿಳಿಸಿದ್ದಾರೆ. ಸೋಮವಾರ ಮಧ್ಯಾಹ್ನ 2 ಗಂಟೆ 20 ನಿಮಿಷಕ್ಕೆ ರಾಜ್ಯದ ಮುಖ್ಯಮಂತ್ರಿ ಆಗಿ ಭೂಪೇಂದ್ರ ಪಟೇಲ್ ಪದಗ್ರಹಣ ಮಾಡಲಿದ್ದಾರೆ ಎಂದು ರಾಜ್ಯಪಾಲ ಆಚಾರ್ಯ ದೇವವ್ರತ್ ಟ್ವೀಟ್ ಮಾಡಿದ್ದಾರೆ.
ರಾಜ್ಯದಲ್ಲಿ ನಡೆದ ಅನಿರೀಕ್ಷಿತ ರಾಜಕೀಯ ಬೆಳವಣಿಗೆಯೊಂದರಲ್ಲಿ 59 ವರ್ಷದ ಭೂಪೇಂದ್ರ ಪಟೇಲ್ ರಾಜ್ಯದ ನೂತನ ಮುಖ್ಯಮಂತ್ರಿ ಆಗಿ ಆಯ್ಕೆ ಆಗಿದ್ದಾರೆ. ರಾಜ್ಯ ವಿಧಾನಸಭೆ ಚುನಾವಣೆಯು 15 ತಿಂಗಳು ಬಾಕಿ ಇರುವಂತೆ ಬಿಜೆಪಿ ತೆಗೆದುಕೊಂಡಿರುವ ನಿರ್ಧಾರ ಸಾಕಷ್ಟು ಕುತೂಹಲ ಕೆರಳಿಸಿದೆ.

Breaking News: ಗುಜರಾತ್ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್ ಆಯ್ಕೆ
ಭಾನುವಾರ ಗಾಂಧಿನಗರದ ಭಾರತೀಯ ಜನತಾ ಪಕ್ಷದ ಶಾಸಕಾಂಗ ಸಭೆಯಲ್ಲಿ ನಡೆದ ಸುದೀರ್ಘ ಚರ್ಚೆ ಬಳಿಕ ಕೇಂದ್ರ ಸಚಿವ ನರೇಂದ್ರ ಸಿಂಗ್ ತೋಮರ್ ಅಧಿಕೃತವಾಗಿ ನೂತನ ಮುಖ್ಯಮಂತ್ರಿ ಹೆಸರು ಘೋಷಿಸಿದ್ದಾರೆ. ಇದರ ಬೆನ್ನಲ್ಲೇ ಘಟ್ಲೋಡಿಯಾ ವಿಧಾನಸಭಾ ಕ್ಷೇತ್ರಕ್ಕೆ ಆಗಮಿಸಿದ ಭೂಪೇಂದ ಪಟೇಲ್ ರಿಗೆ ಅದ್ಧೂರಿ ಸ್ವಾಗತ ಕೋರಲಾಯಿತು.

Gujarat CM-elect Bhupendra Patel to be sworn on September 13 at 2:20 pm: Governor Acharya Devvrat

ಭೂಪೇಂದ್ರ ಪಟೇಲ್ ಕಿರುಪರಿಚಯ:
* ಉತ್ತರ ಪ್ರದೇಶದ ಗವರ್ನರ್ ಮತ್ತು ಗುಜರಾತ್ ಮಾಜಿ ಮುಖ್ಯಮಂತ್ರಿ ಆನಂದಿಬೆನ್ ಪಟೇಲ್ ಆಪ್ತರಾಗಿದ್ದಾರೆ ಎಂದು ಹೇಳಲಾದ ಭೂಪೇಂದ್ರ ಪಟೇಲ್ ಗುಜರಾತ್ ನ ಘಟ್ಲೋಡಿಯಾದ ಮೊದಲ ಬಾರಿಗೆ ಶಾಸಕರಾಗಿದ್ದು, 2017ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಸಿನ ಶಶಿಕಾಂತ್ ಪಟೇಲ್ ವಿರುದ್ಧ 1 ಲಕ್ಷಕ್ಕೂ ಅಧಿಕ ಮತಗಳಿಂದ ಗೆದ್ದಿದ್ದರು.
* ಭೂಪೇಂದ್ರ ಪಟೇಲ್ ಈ ಹಿಂದೆ ಅಹಮದಾಬಾದ್ ನಗರಾಭಿವೃದ್ಧಿ ಪ್ರಾಧಿಕಾರದ (AUDA) ಅಧ್ಯಕ್ಷರಾಗಿದ್ದರು ಮತ್ತು ಅಮದವಾಡ್ ಮುನ್ಸಿಪಲ್ ಕಾರ್ಪೊರೇಶನ್ (AMC) ನ ಸ್ಥಾಯಿ ಸಮಿತಿಯ ನೇತೃತ್ವ ವಹಿಸಿದ್ದರು.
* ಸರ್ಕಾರಿ ಪಾಲಿಟೆಕ್ನಿಕ್ ಅಹಮದಾಬಾದ್‌ನಿಂದ ಸಿವಿಲ್ ಎಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾ ಪಡೆದಿದ್ದಾರೆ. ಅವರ 2017 ರ ಚುನಾವಣಾ ಪತ್ರಿಕೆಗಳಲ್ಲಿ 5 ಕೋಟಿಗೂ ಹೆಚ್ಚು ಆಸ್ತಿ ಘೋಷಿಸಿದ್ದಾರೆ.
* ಅವರು ಪಟೇಲ್ ಅಥವಾ ಪಾಟಿದಾರ್ ಸಮುದಾಯಕ್ಕೆ ಸೇರಿದವರಾಗಿದ್ದು, ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮುನ್ನ ಬಿಜೆಪಿ ಸಮಾಧಾನಪಡಿಸಲು ಉತ್ಸುಕವಾಗಿದೆ ಎಂದು ವರದಿಯಾಗಿದೆ.
* ಬಿಜೆಪಿ ಮೂಲಗಳ ಪ್ರಕಾರ ಭೂಪೇಂದ್ರ ಪಟೇಲ್ ಅವರು ಪಕ್ಷದ ಅಚ್ಚರಿಯ ನಿರ್ಧಾರವಾಗಿದ್ದು ಅವರನ್ನು ಪ್ರಮುಖ ಸ್ಪರ್ಧಿಗಳ ಪಟ್ಟಿಯಲ್ಲಿ ಸೇರಿಸಿರಲಿಲ್ಲ.

English summary
Gujarat CM-elect Bhupendra Patel to be sworn on September 13 at 2:20 pm: Governor Acharya Devvrat.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X