ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊರೊನಾವೈರಸ್: ಅಹಮದಾಬಾದ್‌ನಲ್ಲಿ ರಾತ್ರಿ ವೇಳೆ ನಿಷೇಧಾಜ್ಞೆ ಜಾರಿ

|
Google Oneindia Kannada News

ಅಹ್ಮದಾಬಾದ್, ನವೆಂಬರ್,19: ಗುಜರಾತ್ ನಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ಹಿನ್ನೆಲೆ ರಾಜಧಾನಿ ಅಹ್ಮದಾಬಾದ್ ನಲ್ಲಿ ರಾತ್ರಿ ವೇಳೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಕೊವಿಡ್-19 ಸೋಂಕಿತ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆ ನವೆಂಬರ್.20 ರಿಂದ ಅನ್ವಯವಾಗುವಂತೆ ರಾತ್ರಿ 9 ಗಂಟೆಯಿಂದ ಬೆಳಗ್ಗೆ 6 ಗಂಟೆವರೆಗೂ ನಿಷೇಧಾಜ್ಞೆ ಜಾರಿಗೊಳಿಸಲು ಅಹ್ಮದಾಬಾದ್ ಮಹಾನಗರ ಪಾಲಿಕೆಯು ನಿರ್ಧರಿಸಿದೆ.

ಡಿಸೆಂಬರ್ ವೇಳೆಗೆ ಭಾರತಕ್ಕೆ ಬರಲಿದೆ 10 ಕೋಟಿ ಕೊರೊನಾ ಲಸಿಕೆಡಿಸೆಂಬರ್ ವೇಳೆಗೆ ಭಾರತಕ್ಕೆ ಬರಲಿದೆ 10 ಕೋಟಿ ಕೊರೊನಾ ಲಸಿಕೆ

ಗುಜರಾತ್ ನಲ್ಲಿ ಕಳೆದ 24 ಗಂಟೆಗಳಲ್ಲೇ 1340 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ರಾಜ್ಯದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆಯು 1,92,982ಕ್ಕೆ ಏರಿಕೆಯಾಗಿದೆ. ಮಹಾಮಾರಿಗೆ ಒಂದೇ ದಿನ 7 ಮಂದಿ ಪ್ರಾಣ ಬಿಟ್ಟಿದ್ದಾರೆ. ರಾಜ್ಯದಲ್ಲಿ ಇದರಿಂದ ಸಾವಿನ ಸಂಖ್ಯೆಯು 3830ಕ್ಕೆ ಏರಿಕೆಯಾಗಿದೆ.

Gujarat: Curfew Announced From 9 PM To 6 AM As Coronavirus Cases Rise In Ahmedabad


ಒಂದು ದಿನದಲ್ಲಿ 1113 ಸೋಂಕಿತರು ಗುಣಮುಖ:

ರಾಜ್ಯದಲ್ಲಿ ಒಂದೇ ದಿನ 1113 ಮಂದಿ ಕೊರೊನಾವೈರಸ್ ಸೋಂಕಿತರು ಗುಣಮುಖರಾಗಿದ್ದು, ಇದುವರೆಗೂ 1,76,475 ಸೋಂಕಿತರು ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಗುಜರಾತ್ ನಲ್ಲಿ 12,677 ಕೊವಿಡ್-19 ಸಕ್ರಿಯ ಪ್ರಕರಣಗಳಿರುವ ಬಗ್ಗೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಮಾಹಿತಿ ನೀಡಿದೆ.

ಅಹ್ಮದಾಬಾದ್ ನಲ್ಲಿ ಹಬ್ಬ ಸೃಷ್ಟಿಸಿದ ಆತಂಕ:

ಕೊರೊನಾವೈರಸ್ ಸೋಂಕಿತ ಪ್ರಕರಣಗಳು ಹೆಚ್ಚಾಗುವುದಕ್ಕೆ ದೀಪಾವಳಿ ಸೇರಿದಂತೆ ಸಾಲು ಸಾಲು ಹಬ್ಬಗಳೇ ಕಾರಣ ಎಂದು ವಿಶ್ಲೇಷಿಸಲಾಗುತ್ತಿದೆ. ಸಾರ್ವಜನಿಕ ಪ್ರದೇಶಗಳಲ್ಲಿ ಸಾಮಾಜಿಕ ಅಂತರವನ್ನು ಮರೆತು ಕೊವಿಡ್-19 ಮಾರ್ಗಸೂಚಿಗಳನ್ನು ನಿರ್ಲಕ್ಷಿಸಿದ ಹಿನ್ನೆಲೆ ಸೋಂಕಿತ ಪ್ರಕರಣಗಳ ಸಂಖ್ಯೆಯು ಹೆಚ್ಚಾಗಿದೆ ಎಂದು ಹೇಳಲಾಗುತ್ತಿದೆ.

ಅಹ್ಮದಾಬಾದ್ ನಗರದಲ್ಲಿ 2800 ಕೊರೊನಾವೈರಸ್ ರೋಗಿಗಳಿಗೆ ಬೆಡ್ ಗಳು ಖಾಲಿಯಾಗಿವೆ. 900 ಮೊಬೈಲ್ ಮೆಡಿಕಲ್ ವ್ಯಾನ್, 550 ಕೊರೊನಾವೈರಸ್ ಸಂಜೀವಿನಿ ವ್ಯಾನ್, 150 ಧನವಂತ್ರಿ ಮೊಬೈಲ್ ಮೆಡಿಕಲ್ ವ್ಯಾನ್ ಜೊತೆಗೆ 100 ಮೆಡಿಕಲ್ ವ್ಯಾನ್ ಸೌಲಭ್ಯವನ್ನು ಒದಗಿಸಲಾಗುತ್ತಿದೆ. ಅಹ್ಮದಾಬಾದ್ ನಗರದಾದ್ಯಂತ ಕೊರೊನಾವೈರಸ್ ಸೋಂಕು ತಪಾಸಣೆಗಾಗಿ 200 ಕೇಂದ್ರಗಳನ್ನು ತೆರೆಯಲಾಗಿದೆ ಎಂದು ಮಹಾನಗರ ಪಾಲಿಕೆಯು ತಿಳಿಸಿದೆ.

English summary
Gujarat: Curfew Announced From 9 PM To 6 AM As Coronavirus Cases Rise In Ahmedabad.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X