ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗುಜರಾತ್‌ನಲ್ಲಿ ಕಾರ್ಖಾನೆ ಗೋಡೆ ಕುಸಿತ: 12 ಕಾರ್ಮಿಕರು ಸಾವು

|
Google Oneindia Kannada News

ಗಾಂಧೀನಗರ ಮೇ 18: ಗುಜರಾತ್‌ನ ಮೋರ್ಬಿಯಲ್ಲಿ ಕಾರ್ಖಾನೆ ಗೋಡೆ ಕುಸಿದು 12 ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದಾರೆ. ಬುಧವಾರ ಮಧ್ಯಾಹ್ನ ಗುಜರಾತ್‌ನ ಮೊರ್ಬಿಯಲ್ಲಿ ಕಾರ್ಖಾನೆಯ ಗೋಡೆ ಕುಸಿದು 12 ಕಾರ್ಮಿಕರು ಸಾವನ್ನಪ್ಪಿದ್ದಾರೆಂದರೆ ಪೊಳೀಸರು ತಿಳಿಸಿದ್ದಾರೆ. ಗುಜರಾತ್ ಇಂಡಸ್ಟ್ರಿಯಲ್ ಡೆವಲಪ್‌ಮೆಂಟ್ ಕಾರ್ಪೊರೇಶನ್ (ಜಿಐಡಿಸಿ) ವ್ಯಾಪ್ತಿಯಲ್ಲಿರುವ ಹಲ್ವಾಡ್ ಕೈಗಾರಿಕಾ ಪ್ರದೇಶದ ಸಾಗರ್ ಸಾಲ್ಟ್ ಫ್ಯಾಕ್ಟರಿಯಲ್ಲಿ ಈ ಘಟನೆ ನಡೆದಿದೆ.

ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಈ ದುರಂತದ ಬಗ್ಗೆ ತಿಳಿದ ಕೂಡಲೇ ಸ್ಥಳೀಯ ಆಡಳಿತ ಸ್ಥಳಕ್ಕೆ ಧಾವಿಸಿದೆ. ಅವಶೇಷಗಳಡಿ ಸಿಲುಕಿರುವ ಇತರರನ್ನು ರಕ್ಷಿಸುವ ಪ್ರಯತ್ನ ನಡೆಯುತ್ತಿದೆ.

Gujarat: Factory wall collapse kills 12 workers

ಉಪ್ಪು ಕಾರ್ಖಾನೆಯಲ್ಲಿ ಗೋಡೆ ಕುಸಿದು 12 ಮಂದಿ ಸಾವನ್ನಪ್ಪಿದ್ದಾರೆ ಎಂದು ರಾಜ್ಯ ಕಾರ್ಮಿಕ ಮತ್ತು ಉದ್ಯೋಗ ಸಚಿವ ಹಾಗೂ ಸ್ಥಳೀಯ ಶಾಸಕ ಬ್ರಿಜೇಶ್ ಮೆರ್ಜಾ ಖಚಿತಪಡಿಸಿದ್ದಾರೆ. "ಇತರರನ್ನು ರಕ್ಷಿಸಲು ಎಲ್ಲಾ ಪ್ರಯತ್ನಗಳು ನಡೆಯುತ್ತಿವೆ. ಸರ್ಕಾರವು ಮೃತರ ಕುಟುಂಬಗಳೊಂದಿಗೆ ನಿಂತಿದೆ" ಎಂದು ಅವರು ತಿಳಿಸಿದ್ದಾರೆ.

ದುರಂತ ಘಟನೆಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ದುಃಖ ವ್ಯಕ್ತಪಡಿಸಿದ್ದಾರೆ ಮತ್ತು ಸಂತ್ರಸ್ತರ ಕುಟುಂಬಗಳಿಗೆ ಸಾಂತ್ವನ ಹೇಳಿದ್ದಾರೆ.

Gujarat: Factory wall collapse kills 12 workers

"ಗೋಡೆ ಕುಸಿತದಿಂದ ಮೋರ್ಬಿಯಲ್ಲಿ ಸಂಭವಿಸಿದ ದುರಂತವು ಹೃದಯ ವಿದ್ರಾವಕವಾಗಿದೆ. ಈ ದುಃಖದ ಸಮಯದಲ್ಲಿ, ದುಃಖತಪ್ತ ಕುಟುಂಬಗಳಿಗೆ ದು:ಖ ಭರಿಸುವಂತ ಶಕ್ತಿ ಸಿಗಲಿ. ಗಾಯಾಳುಗಳು ಶೀಘ್ರದಲ್ಲೇ ಚೇತರಿಸಿಕೊಳ್ಳಲಿ" ಎಂದ ಅವರು ''ಸ್ಥಳೀಯ ಅಧಿಕಾರಿಗಳು ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ನೆರವು ನೀಡುತ್ತಿದ್ದಾರೆ" ಎಂದು ಹೇಳಿದ್ದಾರೆ.

(ಒನ್ಇಂಡಿಯಾ ಸುದ್ದಿ)

English summary
Prime Minister Modi has condoled that a factory wall collapsed in Morbi, Gujarat, killing 12 workers.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X