ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗುಜರಾತ್: ರಾಸಾಯನಿಕ ಘಟಕದಲ್ಲಿ ಬೆಂಕಿ; 7 ಅಸ್ವಸ್ಥ- 700 ಜನರ ಸ್ಥಳಾಂತರ

|
Google Oneindia Kannada News

ವಡೋದರ ಜೂನ್ 3: ಗುಜರಾತ್‌ನ ವಡೋದರಾದ ರಾಸಾಯನಿಕ ಘಟಕದಲ್ಲಿ ಭಾರೀ ಬೆಂಕಿ ಅವಘಡ ಸಂಭವಿಸಿದ್ದು 7 ಕಾರ್ಮಿಕರು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಜೀವ ಜಲಕ್ಕಾಗಿ ಜೀವವನ್ನೇ ಪಣಕ್ಕಿಡುವ ಮಹಿಳೆಯರು!ಜೀವ ಜಲಕ್ಕಾಗಿ ಜೀವವನ್ನೇ ಪಣಕ್ಕಿಡುವ ಮಹಿಳೆಯರು!

ವಡೋದರಾ ನಗರದ ಹೊರವಲಯದಲ್ಲಿರುವ ನಂದೆಸರಿ ಕೈಗಾರಿಕಾ ಪ್ರದೇಶದಲ್ಲಿ ದೀಪಕ್ ನೈಟ್ರೈಟ್‌ನ ರಾಸಾಯನಿಕ ಉತ್ಪಾದನಾ ಘಟಕದ ಒಂದು ಭಾಗದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಗುರುವಾರ ಸಂಜೆ ಈ ಘಟನೆ ನಡೆದಿದ್ದು, ಹೊಗೆಯನ್ನು ಸೇವಿಸಿದ ಏಳು ಕಾರ್ಮಿಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕಾರ್ಖಾನೆಯ ಸುತ್ತಮುತ್ತಲ ಪ್ರದೇಶದಲ್ಲಿ ವಾಸಿಸುತ್ತಿದ್ದ ಸುಮಾರು 700 ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Gujarat: Fire at a chemical plant: 7 sick - 700 people displaced

"ಬೆಂಕಿಯನ್ನು ನಂದಿಸಲು ಪ್ರಯತ್ನಗಳು ಯಶಸ್ವಿಯಾಗಿವೆ, ಇದರಲ್ಲಿ ಯಾವುದೇ ಗಾಯಗಳು ವರದಿಯಾಗಿಲ್ಲ. ಹೊಗೆಯನ್ನು ಸೇವಿಸಿದ ಏಳು ಕಾರ್ಮಿಕರನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಮುನ್ನೆಚ್ಚರಿಕೆಯಾಗಿ ಕಾರ್ಖಾನೆಯ ಪಕ್ಕದ ಗ್ರಾಮೀಣ ಪ್ರದೇಶಗಳಲ್ಲಿ ವಾಸಿಸುವ ಸುಮಾರು 700 ಜನರು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ'' ಎಂದು ವಡೋದರಾ ಜಿಲ್ಲಾಧಿಕಾರಿ ಆರ್‌ಬಿ ಬರದ್ ತಿಳಿಸಿದ್ದಾರೆ.

Gujarat: Fire at a chemical plant: 7 sick - 700 people displaced

ವಡೋದರಾ ಅಗ್ನಿಶಾಮಕ ದಳದ ಅಧಿಕಾರಿಯೊಬ್ಬರು ಮಾತನಾಡಿ, ಸಂಜೆಯ ವೇಳೆಗೆ ಕಾರ್ಖಾನೆಯಲ್ಲಿ ಬೆಂಕಿ ಹರಡಲು ಪ್ರಾರಂಭಿಸಿದಾಗ ಪ್ರಬಲ ಸ್ಫೋಟ ಸಂಭವಿಸಿದೆ. ಬೆಂಕಿಯನ್ನು ನಂದಿಸಲು 10 ಅಗ್ನಿಶಾಮಕ ಟೆಂಡರ್‌ಗಳು ಸ್ಥಳದಲ್ಲಿದ್ದವು ಎಂದು ಹೇಳಿದರು. ಬೆಂಕಿ ಅನಾಹುತಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

Recommended Video

ಕರ್ನಾಟಕದ ಹಲವೆಡೆಗಳಲ್ಲಿ ಬರಲಿದೆ ಸಕತ್ ಮಳೆ | OneIndia Kannada

(ಒನ್ಇಂಡಿಯಾ ಸುದ್ದಿ)

English summary
Massive fire breaks out at chemical plant 7 workers hospitalised and Displacement of 700 people in Vadodara Gujarat.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X